ಭಾರತ-ಇಂಗ್ಲೆಂಡ್ ನಡುವಣ 3ನೇ ಟೆಸ್ಟ್ ಪಂದ್ಯ ಇಂದಿನಿಂದ ಶುರು.

ಭಾರತ ಮತ್ತು ಇಂಗ್ಲೆಂಡ್  ನಡುವಣ 5 ಪಂದ್ಯಗಳ ಟೆಸ್ಟ್​ ಸರಣಿಯ ಮೂರನೇ ಪಂದ್ಯ ಇಂದಿನಿಂದ (ಫೆ.15) ಶುರುವಾಗಲಿದೆ. ರಾಜ್​ಕೋಟ್​​ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಈಗಾಗಲೇ ಇಂಗ್ಲೆಂಡ್ ತಂಡ ಪ್ಲೇಯಿಂಗ್ ಇಲೆವೆನ್ ಘೋಷಿಸಿದೆ. ಈ ಪ್ಲೇಯಿಂಗ್ ಇಲೆವೆನ್​ನಲ್ಲಿ ಪ್ರಮುಖ ವೇಗಿ ಮಾರ್ಕ್​ ವುಡ್ ಕಾಣಿಸಿಕೊಂಡಿದ್ದಾರೆ.

ಅಂದರೆ 2ನೇ ಟೆಸ್ಟ್ ಪಂದ್ಯದಲ್ಲಿ ಮಾರ್ಕ್​ ವುಡ್ ಕಣಕ್ಕಿಳಿದಿರಲಿಲ್ಲ. ಅವರ ಬದಲಿಗೆ ಯುವ ಸ್ಪಿನ್ನರ್ ಶೊಯೆಬ್ ಬಶೀರ್​ಗೆ ಚಾನ್ಸ್ ನೀಡಲಾಗಿತ್ತು. ಆದರೆ ಮೂರನೇ ಪಂದ್ಯದಿಂದ ಬಶೀರ್ ಅವರನ್ನು ಕೈ ಬಿಡಲಾಗಿದ್ದು, ಅವರ ಬದಲಿಗೆ ಮಾರ್ಕ್​ ವುಡ್​​ಗೆ ಸ್ಥಾನ ಕಲ್ಪಿಸಲಾಗಿದೆ.

ಅದರಂತೆ 3ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಜೇಮ್ಸ್ ಅ್ಯಂಡರ್ಸನ್ ಹಾಗೂ ಮಾರ್ಕ್​ ವುಡ್ ಅವರನ್ನು ವೇಗಿಗಳಾಗಿ ಕಣಕ್ಕಿಳಿಸಿದರೆ, ಸ್ಪಿನ್ನರ್​ಗಳಾಗಿ ರೆಹಾನ್ ಅಹ್ಮದ್ ಮತ್ತು ಟಾಮ್ ಹಾರ್ಟ್ಲಿ ತಂಡದಲ್ಲಿದ್ದಾರೆ.

ಸ್ಟಾರ್ ಆಟಗಾರರು ಅಲಭ್ಯ:

ಈ ಸರಣಿಯಿಂದ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹಿಂದೆ ಸರಿದಿದ್ದಾರೆ. ಹೀಗಾಗಿ ಈ ಪಂದ್ಯದಲ್ಲೂ ಕಿಂಗ್ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ. ಇನ್ನು ಮೊದಲೆರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಶ್ರೇಯಸ್ ಅಯ್ಯರ್ ತಂಡದಿಂದ ಹೊರಬಿದ್ದಿದ್ದಾರೆ.

ಹಾಗೆಯೇ ತೊಡೆಸಂಧು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕೆಎಲ್ ರಾಹುಲ್ ಈ ಮ್ಯಾಚ್​ಗೆ ಅಲಭ್ಯರಾಗಿದ್ದಾರೆ. ಹೀಗಾಗಿ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಯುವ ಬಳಗದೊಂದಿಗೆ ಕಣಕ್ಕಿಳಿಯುವುದು ಖಚಿತ.

ಸರಣಿ ಸಮಬಲ:

ಹೈದರಾಬಾದ್​ನಲ್ಲಿ ನಡೆದ ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 28 ರನ್​ಗಳ ಜಯ ಸಾಧಿಸಿತ್ತು. ಇನ್ನು ವಿಶಾಖಪಟ್ಟಣಂನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 106 ರನ್​ಗಳ ಅಮೋಘ ಗೆಲುವು ದಾಖಲಿಸಿತ್ತು. ಇದೀಗ ರಾಜ್​ಕೋಟ್ ಟೆಸ್ಟ್​ನಲ್ಲಿ ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದೆ.

ಇಂಗ್ಲೆಂಡ್ ಪ್ಲೇಯಿಂಗ್ 11: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲೀ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲಿ, ಮಾರ್ಕ್ ವುಡ್, ಜೇಮ್ಸ್ ಅ್ಯಂಡರ್ಸನ್.

ಭಾರತ ಟೆಸ್ಟ್​ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

ಇಂಗ್ಲೆಂಡ್ ಟೆಸ್ಟ್​ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂಡರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಡ್ಯಾನ್ ಲಾರೆನ್ಸ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಒಲ್ಲಿ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *