IND vs ENG: ಆಂಗ್ಲರಿಗೆ ಮುಖಭಂಗ; ರಾಜ್‌ಕೋಟ್​ನಲ್ಲಿ ಭಾರತಕ್ಕೆ 434 ರನ್​ಗಳ ಭಾರಿ ಜಯ..!

Sports: ಗೆಲುವಿಗೆ 557 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆಂಗ್ಲರು ಭಾರತದ ಮಾರಕ ದಾಳಿಗೆ ತತ್ತರಿಸಿ ಕೇವಲ 122 ರನ್‌ಗಳಿಗೆ ಆಲೌಟ್ ಆದರು. ಇತ್ತ ಇಂಗ್ಲೆಂಡ್ ತಂಡವನ್ನು 434 ರನ್​ಗಳಿಂದ ಮಣಿಸಿದ ಭಾರತ, ಟೆಸ್ಟ್ ಕ್ರಿಕೆಟ್​ನಲ್ಲಿ ಅತಿ ದೊಡ್ಡ ಗೆಲುವು ದಾಖಲಿಸಿದ ಇತಿಹಾಸ ನಿರ್ಮಿಸಿದೆ.

ರಾಜ್‌ಕೋಟ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಸರಣಿಯ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಏಕಪಕ್ಷೀಯ ಗೆಲುವು ದಾಖಲಿಸಿದೆ. ಎರಡನೇ ಇನ್ನಿಂಗ್ಸ್​ನಲ್ಲಿ ಆಂಗ್ಲರನ್ನು 122 ರನ್​ಗಳಿಗೆ ಆಲೌಟ್ ಮಾಡಿದ ರೋಹಿತ್ ಪಡೆ ಬರೋಬ್ಬರಿ 434 ರನ್​ಗಳ ದಾಖಲೆಯ ಜಯ ಸಾಧಿಸಿದೆ.ಈ ಐತಿಹಾಸಿಕ ಗೆಲುವಿನೊಂದಿಗೆ ಟೀಂ ಇಂಡಿಯಾ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಭಾರತ ತಂಡ ಆಲ್ ರೌಂಡ್ ಪ್ರದರ್ಶನ ನೀಡಿ ಇಂಗ್ಲೆಂಡ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿತು. ಎರಡನೇ ಇನ್ನಿಂಗ್ಸ್​ನಲ್ಲಿ 557 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆಂಗ್ಲರು ಭಾರತದ ಮಾರಕ ದಾಳಿಗೆ ತತ್ತರಿಸಿ ಕೇವಲ 122 ರನ್‌ಗಳಿಗೆ ಆಲೌಟ್ ಆದರು. ಇಂಗ್ಲೆಂಡ್ ತಂಡವನ್ನು 434 ರನ್​ಗಳಿಂದ ಮಣಿಸಿದ ಭಾರತ, ಟೆಸ್ಟ್ ಕ್ರಿಕೆಟ್​ನಲ್ಲಿ ಅತಿ ದೊಡ್ಡ ಗೆಲುವು ದಾಖಲಿಸಿದ ಇತಿಹಾಸ ನಿರ್ಮಿಸಿದೆ.

ಎರಡನೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಮತ್ತು ಸರ್ಫರಾಜ್ ಖಾನ್ ಅದ್ಭುತ ಪ್ರದರ್ಶನ ನೀಡಿದರು. ಜೈಸ್ವಾಲ್ ಸರಣಿಯಲ್ಲಿ ಎರಡನೇ ದ್ವಿಶತಕ ಸಿಡಿಸಿದರೆ, ಸರ್ಫರಾಜ್ ಖಾನ್ ಪಂದ್ಯದಲ್ಲಿ ಸತತ ಎರಡನೇ ಅರ್ಧಶತಕ ಬಾರಿಸಿದರು. ಅಂತಿಮವಾಗಿ ಯಶಸ್ವಿ ಜೈಸ್ವಾಲ್ 214 ರನ್, ಸರ್ಫರಾಜ್ ಖಾನ್ 68 ರನ್​ಗಳ ಅಜೇಯ ಇನ್ನಿಂಗ್ಸ್ ಆಡಿದರು.

ವಿಶೇಷವೆಂದರೆ ಇಬ್ಬರೂ ಆಟಗಾರರು ಆಕ್ರಮಣಕಾರಿ ಕ್ರಿಕೆಟ್‌ ಆಡಿ ಕೇವಲ 158 ಎಸೆತಗಳಲ್ಲಿ 172 ರನ್‌ಗಳ ಅಜೇಯ ಜೊತೆಯಾಟವನ್ನು ಹಂಚಿಕೊಂಡರು. ಈ ಕಾರಣದಿಂದಾಗಿ ಟೀಮ್ ಇಂಡಿಯಾದ ಎರಡನೇ ಇನ್ನಿಂಗ್ಸ್​ನಲ್ಲಿ 500 ಕ್ಕೂ ಅಧಿಕ ರನ್​ಗಳ ಮುನ್ನಡೆ ಸಾಧಿಸಿತು. ಇದಲ್ಲದೆ ಭಾರತ ಮೊದಲ ಇನಿಂಗ್ಸ್‌ನಲ್ಲೂ ಸುಮಾರು 120 ರನ್‌ಗಳ ಮುನ್ನಡೆ ಸಾಧಿಸಿತ್ತು.

ವಿಶೇಷವೆಂದರೆ ಇಬ್ಬರೂ ಆಟಗಾರರು ಆಕ್ರಮಣಕಾರಿ ಕ್ರಿಕೆಟ್‌ ಆಡಿ ಕೇವಲ 158 ಎಸೆತಗಳಲ್ಲಿ 172 ರನ್‌ಗಳ ಅಜೇಯ ಜೊತೆಯಾಟವನ್ನು ಹಂಚಿಕೊಂಡರು. ಈ ಕಾರಣದಿಂದಾಗಿ ಟೀಮ್ ಇಂಡಿಯಾದ ಎರಡನೇ ಇನ್ನಿಂಗ್ಸ್​ನಲ್ಲಿ 500 ಕ್ಕೂ ಅಧಿಕ ರನ್​ಗಳ ಮುನ್ನಡೆ ಸಾಧಿಸಿತು. ಇದಲ್ಲದೆ ಭಾರತ ಮೊದಲ ಇನಿಂಗ್ಸ್‌ನಲ್ಲೂ ಸುಮಾರು 120 ರನ್‌ಗಳ ಮುನ್ನಡೆ ಸಾಧಿಸಿತ್ತು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *