ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಬಾಂಬರ್​​ ಕರ್ನಾಟಕ ಮೂಲದವನೇ!

ಬೆಂಗಳೂರು, ಮಾರ್ಚ್​ 12: ಬೆಂಗಳೂರಿನ ರಾಮೇಶ್ವರಂ ಕೆಫೆ (Rameshwaram Cafe) ಬಾಂಬ್ ಸ್ಫೋಟ (Bomb Blast) ಪ್ರಕರಣದ ಬಾಂಬರ್ ಕರ್ನಾಟಕ ಮೂಲದವನೇ ಎಂಬ ತೀರ್ಮಾನಕ್ಕೆ ರಾಷ್ಟ್ರೀಯ ತನಿಖಾ ದಳ (NIA) ಬಂದಿದೆ. ಶಂಕಿತನಿಗೆ ಬೆಂಗಳೂರು ಪರಿಚಯ ಚೆನ್ನಾಗಿ ಇತ್ತು. ಆತ ಯಾವ ಸಂಘಟನೆಗೆ ಸೇರಿದವನು ಎಂಬುದೂ ಎನ್​ಐಎಗೆ ಗೊತ್ತಾಗಿದೆ. ಶಂಕಿತ ಈ ಹಿಂದೆ ಶಿವನ ಸಮುದ್ರ ಹಾಗೂ ಗುಡ್ಲುಪೇಟೆ, ಕೃಷ್ಣಗಿರಿ ಅರಣ್ಯ ಪ್ರದೇಶದಲ್ಲಿ ಟ್ರೈನಿಂಗ್ ನಡೆಸಿರುವ ಬಗ್ಗೆ ಮಾಹಿತಿ ದೊರೆತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಟ್ರಯಲ್ ಬಾಂಬ್​​​ ಬ್ಲಾಸ್ಟ್ ಮಾಡಿರುವ ಮತ್ತು ಸರ್ವೈವಲ್ ಕ್ಯಾಂಪ್​​ಗಳನ್ನು ನಡೆಸಿರುವ ಬಗ್ಗೆ ತನಿಖೆ ವೇಳೆ ಮಾಹಿತಿ ದೊರೆತಿದೆ ಎಂದೂ ಮೂಲಗಳು ಹೇಳಿವೆ. ಈ ಮಧ್ಯೆ, ಘಟನೆ ಸಂಬಂಧ ತನಿಖಾ ತಂಡಗಳಿಂದ ತನಿಖೆ ಮುಂದುವರೆದಿದೆ.

ಅರೋಪಿ ಬೆಂಗಳೂರಿಗೆ ಪ್ರವೇಶಿಸಿದ್ದನ್ನು ಕೂಡ ಪೊಲೀಸರು ಪತ್ತೆ ಮಾಡಿದ್ದಾರೆ. ಶಂಕಿತ ಸ್ಫೋಟದ ದಿನವೇ ಬೆಂಗಳೂರು ಬಂದಿದ್ದಾನೆ. ಚೆನ್ನೈಯಿಂದ ತಿರುಪತಿ ಗೆ ರೈಲಿನಲ್ಲಿ ತೆರಳಿ ಅಲ್ಲಿಂದ ಬಸ್ ಮೂಲಕ ಬಂದಿದ್ದಾನೆ. ಕೆಅರ್​​ಪುರ ಬಸ್ ನಿಲ್ದಾಣದಲ್ಲಿ ಇಳಿದು ನಂತರ ಆತ ಮಹದೇವಪುರದ ಗ್ರಫೇಡ್ ಇಂಡಿಯಾ ಸರ್ಕಲ್ (ಬಸ್ ನಿಲ್ದಾಣ) ಬಂದು ಬಸ್ ಬದಲಾವಣೆ ಮಾಡಿದ್ದಾನೆ. ಬಳಿಕ ಬ್ರೂಕ್ ಫೀಲ್ಡ್ ಕಡೆಗಿನ ಬಸ್ ಏರಿ ರಾಮೇಶ್ವರ ಕೆಫೆಗೆ ಆಗಮಿಸಿದ್ದಾನೆ ಎಂಬುದು ಈವರೆಗಿನ ತನಿಖೆಯಿಂದ ಗೊತ್ತಾಗಿದೆ ಎನ್ನಲಾಗಿದೆ.

ಈ ಹಿಂದೆ ಇದೇ ಬಾಂಬ್ ಅನ್ನು ಕುಕ್ಕರ್ ಮತ್ತು ಸ್ಟೀಲ್ ಬಾಕ್ಸ್​​​​ನಲ್ಲಿ ಮಾಡಲಾಗುತ್ತಿತ್ತು. ಆದರೆ, ಶಂಕಿತನು ಅತ್ಯಾಧುನಿಕವಾಗಿ ಸಿಲ್ವರ್ ಪೇಪರ್ ಮತ್ತು ಬ್ಯಾಗ್ ಮೂಲಕ ಸಿದ್ಧಪಡಿಸಿರುವ ಬಗ್ಗೆಯೂ ತನಿಖಾಧಿಕಾರಿಗಳಿಗೆ ಮಾಹಿತಿ ದೊರೆತಿದೆ.

ಸುತ್ತಿ ಬಳಸಿ ಬಂದಿದ್ದ ಶಂಕಿತ ಬಾಂಬರ್

ಶಂಕಿತ ಬಾಂಬರ್ ಸಂಚಾರಕ್ಕೆ ನೇರ ಮಾರ್ಗಗಳನ್ನು ಬಳಸದೇ ಸುತ್ತಿ ಬಳಸಿ ಬಂದು, ಮತ್ತೆ ನೂರಾರು ಕಿಲೋಮೀಟರ್ ಸುತ್ತಾಡಿಕೊಂಡು ಆತನ ರಹಸ್ಯ ತಾಣ ಸೇರಿರುವ ಸಾಧ್ಯತೆ ಇದೆ. ಸದ್ಯ ಕರ್ನಾಟಕ, ತೆಲಂಗಾಣ ಮತ್ತು ತಮಿಳುನಾಡಿನ ಹಲವಾರು ಭಾಗದಲ್ಲಿ ಶಂಕಿತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಊಹಾಪೋಹ ಎಂದ ಪರಮೇಶ್ವರ್

ಆದರೆ, ಶಂಕಿತ ಬಾಂಬರ್ ಕರ್ನಾಟಕದವನು ಎಂಬ ವರದಿಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಪರಮೇಶ್ವರ ಇವುಗಳೆಲ್ಲ ಊಹಾಪೋಹಗಳು ಎಂದಿದ್ದಾರೆ. ಶಂಕಿತ ಕರ್ನಾಟಕದವನು, ಮಲೆನಾಡಿನವನು ಎಂಬೆಲ್ಲ ಎಂಬ ಊಹಾಪೋಹ ಹರಿಡದಾಡುತ್ತಿವೆ. ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿದಾಗ ಸತ್ಯ ಗೊತ್ತಾಗುತ್ತದೆ ಎಂದು ಪರಮೇಶ್ವೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್ ಹೇಳಿಕೆ

ಮಾರ್ಚ್​ 1ರಂದು ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟದಲ್ಲಿ ಐದು ಮಂದಿ ಗಾಯಗೊಂಡಿದ್ದರು. ಅದೃಷ್ಟವಶಾತ್ ಸಾವು ಸಂಭವಿಸಿರಲಿಲ್ಲ. ನಂತರ ಆರಂಭದಲ್ಲಿ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದರು. ಆ ನಂತರ ಎನ್​​ಐಎಗೂ ತನಿಖೆಯ ಹೊಣೆ ವಹಿಸಲಾಗಿತ್ತು. ಆದಾಗ್ಯೂ, ಶಂಕಿತನನ್ನು ಬಂಧಿಸಲು ಈವರೆಗೆ ಸಾಧ್ಯವಾಗಿಲ್ಲ.

Source : https://tv9kannada.com/karnataka/rameshwaram-cafe-bomb-blast-case-nia-suspects-bomber-hails-from-karnataka-only-gsp-797379.html

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *