ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಶುಕ್ರ, ತಿಥಿ :ತ್ರಯೋದಶೀ, ನಿತ್ಯನಕ್ಷತ್ರ : ಮಘಾ, ಯೋಗ : ಧೃತಿ, ಕರಣ : ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 36 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 11:09 ರಿಂದ ಸಂಜೆ 12:39ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 15:41 ರಿಂದ 05:12ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 08:07 ರಿಂದ 09:38 ರ ವರೆಗೆ.

ಮೇಷ ರಾಶಿ : ನಿಮ್ಮ ನಕಾರಾತ್ಮಕ ಹೇಳಿದ ಮಾತುಗಳನ್ನು ನೀವು ಸಹಿಸಲಾರಿರಿ. ಎಲ್ಲ ವಿಷಯದಲ್ಲಿಯೂ ಸಂಶಯವಿರುವುದು. ಆಪ್ತರಲ್ಲಿ ಅಹಂಕಾರಪಡುವುದು ಬೇಡ. ಭಡ್ತಿಯ ನಿರೀಕ್ಷೆಯಲ್ಲಿಯೇ ಇರುವಿರಿ. ಸ್ವತಂತ್ರವಾದ ನಿರ್ಧಾರವು ನಿಮಗೆ ಪೂರಕವೂ ಆಗಿ, ನೆಮ್ಮದಿಯನ್ನು ಕೊಡುವುದು. ಆದಾಯದ ಮೂಲವು ಗೌಪ್ಯವಾಗಿ ಇಟ್ಟುಕೊಳ್ಳಿ. ನಿಮ್ಮ ಶಾಂತ ಮನಸ್ಸಿನಿಂದ ಸಂಕಷ್ಟವನ್ನು ಎದುರಿಸುವಿರಿ. ಆಸ್ತಿ ಖರೀದಿ ವಿಚಾರದಲ್ಲಿ ಎಚ್ಚರಿಕೆ ಇರಲಿ. ಆಚಾತುರ್ಯದಿಂದ ಏನನ್ನೂ ಮಾಡಲು ಹೋಗುವುದು ಬೇಡ. ದಿನದ ಕಾರ್ಯವನ್ನು ನೀವು ಅವಲೋಕಿಸಿಕೊಂಡು ಹೆಜ್ಜೆ ಇಡುವುದು ಉತ್ತಮ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಸಂದೇಹ ಬರಬಹುದು. ಭೂಮಿಯ ಬಗ್ಗೆ ಆಸಕ್ತಿಯು ಕಡಿಮೆ ಇರುವುದು. ಆದರೂ ಬಂಧುಗಳು ಒತ್ರಾಯಿಸಬಹುದು. ನಿಮ್ಮ ಅಭಿಮಾನಕ್ಕೆ ಘಾಸಿಯಾದೀತು.
ವೃಷಭ ರಾಶಿ : ವಿವಾದಕ್ಕೆ ಕ್ಷುಲ್ಲಕ ಕಾರಣವು ಇರುವುದು. ಯಾರ ವಿರುದ್ಧವಾದರೂ ಗೆದ್ದು ಅಹಂಕಾರ ತೋರುವಿರಿ. ಇಂದು ಕಿರಿಕಿರಿಯ ವಾತಾವರಣವು ಇರಲಿದ್ದು, ಎಲ್ಲವೂ ಸಮಸ್ಯೆಯಂತೆ ತೋರೀತು. ಆರ್ಥಿಕತೆಯ ಬಗ್ಗೆ ಅತಿಯಾದ ಚಿಂತನೆಯನ್ನು ಮಾಡುವಿರಿ. ನಿಮ್ಮದಾದ ಸ್ವಂತ ಉದ್ಯೋಗವನ್ನು ಬೆಳೆಸುವ ಕಡೆ ನಿಮ್ಮ ಗಮನವಿರಲಿ. ನಿಮ್ಮ ವಿರುದ್ಧ ತಂತ್ರಗಳು ನಡೆಯಲಿದ್ದು ನಿಮಗೆ ಗೊತ್ತಾಗದು. ಅನಿರೀಕ್ಷಿತ ಘಟನೆಯು ನಿಮ್ಮನ್ನು ಬೆಚ್ಚಿಬೀಳಿಸುವುದು. ಹೊಸ ವ್ಯಕ್ತಿಯ ಪರಿಚಯು ನಿಮ್ಮ ಬೇಸರವನ್ನು ದೂರ ಮಾಡೀತು. ನಿಮ್ಮ ಬಗ್ಗೆ ಇರುವ ಅಭಿಮಾನವನ್ನು ನೀವೇ ಕಳೆದುಕೊಳ್ಳಬಹುದು. ನಿಮ್ಮರ ಬಗ್ಗೆ ನಿಮಗೆ ಸಕಾರಾತ್ಮಕ ಭಾವವು ಇರದು. ಹಳೆಯ ಸಾಲಗಳಿಗೆ ನೀವೇ ಮುಕ್ತಿ ಕೊಡಿಸುವಿರಿ.
ಮಿಥುನ ರಾಶಿ : ಒಂದೇ ವಿಚಾರಕ್ಕೆ ದಾಂಪತ್ಯದಲ್ಲಿ ಭಿನ್ನಮತವಿರುವುದು. ಯಾವುದನ್ನೂ ನೀವು ಅಂದುಕೊಂಡಷ್ಟು ಸುಲಭವಾಗಿ ಮಾಡಲಾಗದು. ನಿಮ್ಮ ಮಕ್ಕಳ ಬಗೆಯ ವ್ಯಾಮೋಹವು ಅವರನ್ನು ಕೆಟ್ಟದ್ದಕ್ಕೆ ತಳ್ಳಬಹುದು. ಇಂದು ನೀವು ಸಾತ್ತ್ವಿಕರಂತೆ ತೋರುವಿರಿ. ಇಷ್ಟವಾಗದವರು ನಿಮ್ಮೆದುರಿಗೆ ಬರುವಾಗ ಕಣ್ತಪ್ಪಿಸಿಕೊಳ್ಳುವಿರಿ. ಸ್ವಂತ ವಾಹನದಲ್ಲಿ ಒಂಟಿಯಾಗಿ ಓಡಾಡುವಾಗ ಎಚ್ಚರಿಕೆ ಇರಲಿ. ನಿಮ್ಮ ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಅತ್ತ ಕಡೆ ಹೆಚ್ಚು ಪ್ರಯತ್ನಿಸಿ. ಮಿತ್ರರ ಸಹಯೋಗದಿಂದ ಭೂಮಿಯ ಖರೀದಿಯನ್ನು ಮಾಡುವಿರಿ. ಹಿಂದೆ ಮಾಡಿದ ಕಾರ್ಯಕ್ಕಾಗಿ ಇಂದು ಒಳ್ಳೆಯ ಫಲವು ದೊರೆಕಿದ ಸಂತೋಷದಲ್ಲಿ ಇರುವಿರಿ. ನಿಮ್ಮ ದಿನವನ್ನು ಹೊಸ ರೀತಿಯಲ್ಲಿ ಕಳೆಯಲು ಇಚ್ಛಿಸುವಿರಿ. ಕಳೆದುಕೊಂಡಿದ್ದನ್ನು ಮರಳಿ ಪಡೆಯುವ ಬಗ್ಗೆ ಯತ್ನವು ಪ್ರಬಲವಾಗಿ ಇರುವುದು.
ಕಟಕ ರಾಶಿ : ನಿಮ್ಮ ಸ್ವಂತ ಉದ್ಯಮವನ್ನು ಮಾಡಲು ಹಲವರ ಬೆಂಬಲವು ಇರಲಿದೆ. ಮಾನಸಿಕ ಒತ್ತಡವನ್ನು ನಿವಾರಿಸಿಕೊಳ್ಳಲು ಬೇಕಾದ ಕ್ರಮವನ್ನು ಮಾಡಬೇಕಾಗುವುದು. ನಿಮ್ಮ ವ್ಯಾಪಾರಕ್ಕೆ ಹೊಸ ದಿಕ್ಕನ್ನು ಕೊಡಬೇಕಾದೀತು. ತಂತ್ರಜ್ಞರು ತಮ್ಮ ಕಾರ್ಯವನ್ನು ವಿಸ್ತರಿಸಲು ಹಂಬಲಿಸಬಹುದು. ಉನ್ನತ ಮಟ್ಟದವರ ಜೊತೆ ಸಭೆಯಲ್ಲಿ ಭಾಗವಹಿಸುವಿರಿ. ನಿಮ್ಮ ಅವ್ಯಕ್ತ ಭೀತಿಯನ್ನು ನೀವು ಹೊರಹಾಕದಿದ್ದರೂ ಅರಿವಿಗೆ ಬರುವುದು. ಹೊಸ ವಸ್ತುಗಳು ಯಾವುದಾದರೂ ನಿಮಗೆ ಉಡುಗೊರೆಯಾಗಿ ಸಿಗಬಹುದು. ಬಂಧುಗಳ ಆರೋಗ್ಯದ ವಿಚಾರಣೆಗೆ ತಿರುಗಾಟ ಮಾಡಬೇಕಾಗುವುದು. ನಿಮ್ಮ ಬಗ್ಗೆ ಹಗುರಾದ ಭಾವವು ಬರಬಹುದು. ಮನೆಯಲ್ಲಿ ಧಾರ್ಮಿಕ ಕಾರ್ಯಗಳಿಂದ ಶಾಂತಿ ಲಭಿಸುವುದು. ನಿಮ್ಮ ನೆಚ್ಚಿನವರ ಭೇಟಿಯು ಅಕಸ್ಮಾತ್ ಆಗಿ ಆಗಬಹುದು.
ಸಿಂಹ ರಾಶಿ : ನಿಮಗೆ ಸಾಲದ ಬಗ್ಗೆ ಚಿಂತೆಯು ಅಧಿಕವಾಗಲಿದೆ. ನಿಮ್ಮ ಸ್ವಭಾವವು ಕೆಲವರಿಗೆ ಕಷ್ಟವಾಗುವುದು. ಆದಾಯದ ಮೂಲದಿಂದ ನಿಮಗೆ ಖುಷಿ ಇರಲಿದೆ. ಉತ್ತಮ ಆರ್ಥಿಕತೆಗಾಗಿ ನೀವು ವಿದೇಶದ ವ್ಯಾಪಾರದಲ್ಲಿ ಆಸಕ್ತಿ ಬರಬಹುದು. ಸತತ ಪ್ರಯತ್ನದಿಂದ ಆದಾಯ ಹಾಗೂ ಖರ್ಚನ್ನು ಸರಿಯಾಗಿ ತೂಗಿಸಲು ತಿಳಿಯುವಿರಿ. ಇಂದಿನ ಕೆಲಸದಲ್ಲಿ ಕೆಲವು ತೊಂದರೆಗಳು ಕಾಣಿಸಿಕೊಂಡರೂ ಅದನ್ನು ಲೆಕ್ಕಿಸದೇ ಮುಂದೆ ಸಾಗುವಿರಿ. ಆದಾಯದ ಭಾಗವನ್ನು ದಾನ ಮಾಡುವ ಆಸೆ ಬರಬಹುದು. ಗೆಳೆಯರ ಮಾತನ್ನು ಗೌರವಿಸಿದ್ದು ಅವರಿಗೆ ಸಂತೋಷವಾಗಲಿದೆ. ಕಲಾವಿದರಿಗೆ ಪ್ರಶಂಸೆಯು ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬಗ್ಗೆ ಜಾಗರೂಕತೆ ಇರಲಿ. ಸಮಸ್ಯೆಯನ್ನು ತಿಳಿದುಕೊಳ್ಳುವಿರಿ. ಹಿತಶತ್ರುಗಳಿಂದ ನೀವು ದೂರವಿರಲು ಬಯಸುವಿರಿ.
ಕನ್ಯಾ ರಾಶಿ : ಇಂದು ನಿಮಗೆ ಕಛೇರಿಯಲ್ಲಿ ಇರುವಷ್ಟು ಹೊತ್ತ ಉದ್ವೇಗದಲ್ಲಿ ಇರುವಿರಿ. ಹಣವನ್ನು ಕೇಳಿದವರಿಗೆ ಇಂದು ಕೊಡುವುದು ಬೇಡ. ಸಹೋದರಿಯ ಜೊತೆ ಮನಸ್ತಾಪ ಮಾಡಿಕೊಳ್ಳುವಿರಿ. ಗೃಹನಿರ್ಮಾಣವು ನೀವಂದುಕೊಂಡಷ್ಟು ಸರಳವಾಗಿ ಇರದು. ಉತ್ತಮ ದಿನದ ನಿರೀಕ್ಷೆಯಲ್ಲಿ ಇರುವ ನಿಮಗೆ ಬೇಸರವಾದೀತು. ಇನ್ನೊಬ್ಬರ ಸಂಧಾನಕ್ಕೆ ಮಧ್ಯಸ್ತಿಕೆಯನ್ನು ವಹಿಸುವಿರಿ. ಕಛೇರಿಯ ವ್ಯವಹಾರವು ನಿಮಗೆ ಸರಿ ಕಾಣಿಸದು. ಹೇಳದೇ ಮೌನದಿಂದ ಇರುವಿರಿ. ಬಿಗುಮಾನವನ್ನು ಬಿಟ್ಟು ಎಲ್ಲರ ಜೊತೆ ಬೆರೆಯುವ ಅಭ್ಯಾಸವು ಬೇಕಾಗುವುದು. ನೆಮ್ಮದಿಗಾಗಿ ಚಡಪಡಿಸುವಿರಿ. ಸಂಗಾತಿಗೆ ಬೇಕಾದ ವಸ್ತುವನ್ನು ಕೊಡಿಸುವಿರಿ. ಒತ್ತಡವು ನಿಮಗೆ ಯಾವ ವ್ಯವಹಾರಕ್ಕೂ ಆಸಕ್ತಿ ಇರದಂತೆ ಮಾಡುವುದು. ಯಾರ ಮಾತನ್ನೂ ಕೇಳುವ ತಾಳ್ಮೆ ಇರದು. ನಿಮ್ಮವರ ಬಗ್ಗೆ ಕಾಳಜಿ ಇರಲಿದೆ.
ತುಲಾ ರಾಶಿ : ಇಂದು ನಿಮ್ಮ ಸಂಗಾತಿಯು ನಿಮ್ಮನ್ನು ಹೆಚ್ಚು ಇಷ್ಟಪಡಬಹುದು. ಸ್ನೇಹಿತರು ಬಂಧುಗಳಾಗುವ ಸನ್ನಿವೇಶವು ಬರಬಹುದು. ನಿಮ್ಮ ಆಲೋಚನೆಯು ವಾಸ್ತವಕ್ಕಿಂತ ಭಿನ್ನವಾಗಿ ಕಾಣಿಸುವುದು. ಕೆಟ್ಟ ಆಲೋಚನೆಯಿಂದ ದೂರವಿರುವುದು ಸುಖ. ರಾಜಕೀಯದಲ್ಲಿ ನಿಮಗೆ ಆಸಕ್ತಿಯು ಇದ್ದರೂ ಪ್ರವೇಶಕ್ಕೆ ಮಾರ್ಗವನ್ನು ಹುಡುಕುವಿರಿ. ಹಿರಿಯರಿಗೆ ಅಗೌರವದಿಂದ ಮಾತನಾಡಿ, ಅನಂತರ ಪಶ್ಚಾತ್ತಾಪಪಡುವಿರಿ. ತೀರ್ಥಯಾತ್ರೆಯ ಸಂದರ್ಭವು ಬರಬಹುದು. ಹಣಕಾಸಿನ ಕೊರತೆಯಿಂದ ಯಾವದೋ ಕಾರ್ಯವನ್ನು ಮಾಡುವಿರಿ. ಸಿಟ್ಟಿನಿಂದ ಇಂದು ಖುಷಿಯ ವಾತಾವರಣದಿಂದ ದೂರವಿರುವಿರಿ. ಪರೋಕ್ಷವಾಗಿ ನಿಮ್ಮವರನ್ನು ದ್ವೇಷಿಸುವಿರಿ. ಮಕ್ಕಳ ಮೇಲೆ ನಿಮ್ಮ ಮೋಹವು ಅತಿಯಾಗಿದ್ದು ಅದು ಬಂಧನವೂ ಆಗಬಹುದು. ಬೇಕಾದುದನ್ನು ಪಡೆಯಲು ಸಂಕೋಚವಾಗುವುದು.
ವೃಶ್ಚಿಕ ರಾಶಿ : ನಿಮ್ಮ ಇಂದಿನ ಸುಖಕರ ಪ್ರಯಾಣವನ್ನು ಬಹಳ ಉತ್ಸಾಹದಿಂದ ಮಾಡುವಿರಿ. ಅತಿಯಾದ ಧೈರ್ಯವೂ ನಿಮಗೆ ಮುಳುವಾಗಬಹುದು. ಮನಸ್ತಾಪವನ್ನು ದೀರ್ಘಕಾಲ ಮುಂದುವರಿಸದೇ ಅಲ್ಲಿಗೇ ನಿಲ್ಲುಸುವುದು ಕ್ಷೇಮಕರ. ವಿವಾಹ ಸಮಾರಂಭದಲ್ಲಿ ಭಾಗಿಯಾಗುವಿರಿ. ಹೂಡಿಕೆಯಲ್ಲಿ ಇಂದು ಲಾಭ ಸಿಗದೇಹೋಗಬಹುದು. ಇಂದಿನ ನಿಮ್ಮ ಮಾತಿನಿಂದ ದ್ವೇಷವನ್ನು ಸಾಧಿಸಬಹುದು. ನಿಮಗೆ ನಕಾರಾತ್ಮಕ ಹಣೆಪಟ್ಟಿಯು ನಿಮಗೆ ಬೀಳಬಹುದು, ಎಚ್ಚರವಿರಲಿ. ಬಹಳ ದಿನಗಳಿಂದ ಉಳಿದಿದ್ದ ಕಾರ್ಯವು ಪೂರ್ಣವಾಗಬಹುದು. ವಿದ್ಯಾದಾನವನ್ನು ಮಾಡಿದವರನ್ನು ಗೌರವಿಸುವಿರಿ. ಒರಟು ತನವನ್ನು ಬಿಟ್ಟಷ್ಟು ನಿಮಗೇ ಒಳ್ಳೆಯದು. ಓಡಾಟದ ಸಮಯದಲ್ಲಿ ನಿಮ್ಮ ವಸ್ತುವು ಕಾಣೆಯಾಗಿದ್ದು ನಿಮಗೆ ಗೊತ್ತಾಗದು. ಕಳೆದುಕೊಂಡ ವಸ್ತುವಿನ ಮೌಲ್ಯವು ನಿಮಗೆ ಗೊತ್ತಾಗದೇ ಹೋಗುವುದು. ಮಕ್ಕಳನ್ನು ದೂರ ಮಾಡಿಕೊಳ್ಳುವುದು ಕಷ್ಟವಾದೀತು.
ಧನು ರಾಶಿ : ನೀವು ಹೊಸ ಹುರುಪಿನಿಂದ ಏನನ್ನಾದರೂ ಅಸಂಬದ್ಧ ಮಾಡಬಹುದು. ಆದಷ್ಟು ನಿಮ್ಮ ನಿಯಂತ್ರಣವನ್ನು ಬಿಟ್ಟು ಕದಲುವುದು ಬೇಡ. ಧೈರ್ಯದಿಂದ ಮುನ್ನಡೆಯಲು ಅನುಭವಿಗಳ ಸಲಹೆಯು ಅವಶ್ಯಕ. ತಂದೆಯ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಸರ್ಕಾರಿ ಕೆಲಸಗಳಲ್ಲಿ ಕೆಲಸ ಮಾಡುವವರಿಗೆ ದಿನವು ಉತ್ತಮ. ಜಾಣ್ಮೆಯ ವ್ಯವಹಾರದಿಂದ ನಿಮಗೆ ಲಾಭವಾಗುವುದು. ವಿರೋಧಿಗಳು ನಿಮ್ಮ ಹತ್ತಿರ ಬರಲು ಹೆದರುವರು. ನಿಮ್ಮ ಗೌರವಕ್ಕೆ ಸಂಗಾತಿಯಿಂದ ತೊಂದರೆಯಾಗಬಹುದು. ನಿಮಗೆ ಸಿಕ್ಕ ಆದರದಿಂದ ಉತ್ಸಾಹವು ಬರಲಿದೆ. ನಿಮ್ಮ ಸಾವಧಾನತೆಯು ಕಿರಿಕಿರಿಯನ್ನು ಇತರರಿಗೆ ಕೊಟ್ಟೀತು. ನಿಮಗೆ ಅನೇಕ ಕಾರ್ಯಗಳು ಇರುವುದರಿಂದ ಸಮಯವನ್ನು ಹೊಂದಿಸಿಕೊಳ್ಳಲು ಅನಿವಾರ್ಯವಾಗುವುದು. ಇಂದು ಬೆಳಗಿನ ವಾಯುವಿಹಾರದಿಂದ ಆರೋಗ್ಯವು ಕೆಡಬಹುದು. ಪುಣ್ಯ ಸ್ಥಳದಲ್ಲಿ ಸಮಯವನ್ನು ಕಳೆಯುವುದು ಇಷ್ಟವಾದೀತು. ಯಾರು ಏನೇ ಅಂದರೂ ಬೇಕಾದಷ್ಟನ್ನು ಮಾತ್ರ ಪಡೆಯುವಿರಿ.
ಮಕರ ರಾಶಿ : ಆರ್ಥಿಕತೆಯು ಹಲವು ಗೊಂದಲಗಳ ಗೂಡಾಗಿ ಸರಿಯಾದ ನಿರ್ಧಾರವು ಕಷ್ಟವಾದೀತು. ನಿಮಗೆ ಯಾವುದಾದರೂ ಒಂದು ರೀತಿಯಲ್ಲಿ ಲಾಭವಾಗುವುದು. ನಿಮ್ಮ ಬಗ್ಗೆ ಯಾರಾದರೂ ಆಡಿಕೊಳ್ಳಬಹುದು. ನಿಮ್ಮ ಶಿಕ್ಷಣವನ್ನು ಸರಿಯಾಗಿ ಬಳಸಿಕೊಳ್ಳುವಿರಿ. ನಿಮ್ಮ ಮಾತು ಅಹಂಕಾರದಂತೆ ತೋರಬಹುದು. ವ್ಯಾಪಾರದಲ್ಲಿ ಸಾಧಾರಣ ಆದಾಯವು ಇದ್ದು ನಿಮಗೆ ಸಮಾಧಾನ ಇರದು. ವಾಹನ ಖರೀದಿಯಲ್ಲಿ ಮೋಸವಾಗುವುದು. ಮಕ್ಕಳ ಪ್ರಗತಿಯು ನಿಮಗೆ ಸಂತೋಷವನ್ನು ಕೊಡುವುದು. ಕಛೇರಿಯ ಕೆಲಸಗಳು ಒತ್ತಡದಿಂದ ಇರಲಿದೆ. ಯಾರದೋ ಅನುಭವವು ನಿಮ್ಮದಾಗದು. ಎಲ್ಲ ಅವಕಾಶವನ್ನು ನೀವು ಸರಿಯಾಗಿ ಬಳಸಿಕೊಳ್ಳುವುದು ಉತ್ತಮ. ದೂರದೃಷ್ಟಿಯು ನಿಮ್ಮ ಚಿಂತನೆಗೆ ಇರಲಿ. ಸ್ವಂತ ಉದ್ಯಮದಲ್ಲಿ ನೀವು ನಷ್ಟವನ್ನು ಅನುಭವಿಸುವಿರಿ. ನಿಮ್ಮ ಉತ್ಸಾಹವು ಇತರರಿಗೆ ಮಾರ್ಗದರ್ಶನವಾದೀತು.
ಕುಂಭ ರಾಶಿ : ನಿಮ್ಮ ಬಗ್ಗೆ ಇರುವ ಪೂರ್ವಾಗ್ರಹವು ಹೋಗಬಹುದು. ಮನೆಯ ಖರ್ಚಿನ್ನು ನೀವೇ ನೋಡಿಕೊಳ್ಳಬೇಕಾಗುವುದು. ನೆರೆಹೊರೆಯವರ ಜೊತೆ ಸೌಹಾರ್ದ ಮಾತುಕತೆ ಇರಲಿದೆ. ವೈವಾಹಿಕ ಜೀವನದಿಂದ ಶತ್ರುಗಳು ಅಧಿಕವಾಗಿ ಆಗಬಹುದು. ಇಂದು ಕೇವಲ ಓಡಾಟವೇ ಆಗಲಿದೆ. ಎಣಿಸಿಕೊಂಡ ಕಾರ್ಯವು ಆಗದೇ ಇರಬಹುದು. ಪ್ರಾಮಾಣಿಕತೆಗೆ ಯೋಗ್ಯವಾದ ಯಶಸ್ಸನ್ನು ಪಡೆಯುವಿರಿ. ಅಂದುಕೊಂಡ ಕಾರ್ಯಗಳು ಸುಗಮವಾಗಿ ಸಾಗಲಿದ್ದು ನೆಮ್ಮದಿ ಇರುವುದು. ಸುಳ್ಳು ಹೇಳಿ ನಿಮ್ಮಿಂದ ಕಾರ್ಯವನ್ನು ಮಾಡಿಸಿಕೊಂಡಾರು. ಸಿಟ್ಟಿನ ಮೇಲೆ ನಿಯಂತ್ರಣ ಬೇಕಾಗುವುದು. ನಿಮ್ಮ ಮೇಲೆ ಜವಾಬ್ದಾರಿಗಳು ಅಧಿಕವಾಗಲಿದ್ದು, ಚಿಂತೆಯು ಕಾಡಬಹುದು. ನಿಮ್ಮ ಮೇಲಿಟ್ಟ ನಂಬಿಕೆಯನ್ನು ನೀವು ಹುಸಿಗೊಳಿಸುವಿರಿ. ಯಾರದೋ ಒತ್ತಡಕ್ಕೆ ಮಣಿದು ಅಧಿಕಾರಿಗಳು ತಮ್ಮ ಕಾರ್ಯವನ್ನು ಮಾಡಬೇಕಾಗುವುದು. ದೈವದ ಮೇಲಿಟ್ಟ ನಂಬಿಕೆಯನ್ನು ಅಚಲಗೊಳಿಸಿಕೊಳ್ಳಿ.
ಮೀನ ರಾಶಿ : ಇಂದು ನಿಮ್ಮ ಆರ್ಥಿಕತೆಗೆ ಅನುಕೂಲವಾಗುವಂತಹ ವ್ಯವಹಾರದಲ್ಲಿ ಇರುವಿರಿ. ಯಾರದ್ದಾದರೂ ಮೆಚ್ಚಿಗೆಯಿಂದ ನಿಮಗೆ ಖುಷಿಯಾಗುವುದು. ವೈವಾಹಿಕ ಜೀವನವು ಉತ್ತಮವಾಗಿರಲಿದ್ದು, ಸಂಗಾತಿಯ ಜೊತೆ ಬಾಧವ್ಯವು ರಸವತ್ತಾಗಿ ಇರಲಿದೆ. ನಿಮಗೆ ಅಂದಾಜು ಸಿಗದೇ ಇಂದಿನ ಹಣವು ಅಧಿಕವಾಗಿ ಖರ್ಚಾಗಬಹುದು. ಯಾರ ಸಣ್ಣತನವನ್ನೂ ನೀವು ಸಹಿಸಿಕೊಳ್ಳಲಾರಿರಿ. ಯಾವುದಾದರೂ ಒಪ್ಪಂದವನ್ನು ಮಾಡಿಕೊಳ್ಳುವಾಗ ಸ್ವಲ್ಪ ಚಿಂತನೆ ಮಾಡುವುದು ಅವಶ್ಯಕ. ವಾಹನದ ಉದ್ಯೋಗವನ್ನು ಮಾಡುತ್ತಿದ್ದರೆ ಲಾಭ ಗಳಿಸುವ ಸಾಧ್ಯತೆ ಇದೆ. ಎಲ್ಲದಕ್ಕೂ ಮಾರ್ಗದರ್ಶನ ಬೇಕು ಎನಿಸುವುದಕ್ಕಿಂತ ಸ್ವಂತವಾಗಿ ಆಲೋಚಿಸುವುದೂ ಮುಖ್ಯವಾಗುವುದು. ಇಂದು ನಿಮಗೆ ವೃತ್ತಿಯಲ್ಲಿ ಸಹಾಕಾರವು ಸಿಗದೇ ತೊಂದರೆಪಡುವಿರಿ. ಧಾರ್ಮಿಕ ಕಾರ್ಯದಿಂದ ನೆಮ್ಮದಿ ಸಿಗಲಿದೆ. ನಿಮ್ಮ ಹಾಸ್ಯ ಪ್ರಜ್ಞೆಯಿಂದ ಎಲ್ಲರನ್ನೂ ನಗಿಸುವಿರಿ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1