IPL 2024, GT vs PBKS: ಕೊನೆಯಲ್ಲಿ ಜಿಟಿ ನೀಡಿದ ಟಾರ್ಗೆಟ್ ಬೆನ್ನಟ್ಟಿದ ಪಂಜಾಬ್ ತಂಡವು ನಿಗದಿತ 19.5 ಓವರ್ಗೆ 7 ವಿಕೆಟ್ ನಷ್ಟಕ್ಕೆ 200 ರನ್ ಗಳಿಸುವ ಮೂಲಕ ರೋಚಕ 3 ವಿಕೆಟ್ ಗಳ ಗೆಲುವು ದಾಖಲಿಸಿತು.

ಐಪಿಎಲ್ 2024ರ (IPL 2024) 17ನೇ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ (GT vs PBKS) ನಡುವೆ ನಡೆಯಿತು. ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮೊದಲು ಬ್ಯಾಟಿಂಗ್ ಮಾಡಿ ಪಂಜಾಬ್ ಕಿಂಗ್ಸ್ಗೆ 200 ರನ್ಗಳ ಬೃಹತ್ ಟಾರ್ಗೆಟ್ ನೀಡಿತು. ಶುಭಮನ್ ಗಿಲ್ (Shubman Gill) ಗುಜರಾತ್ ಟೈಟಾನ್ಸ್ ಪರ ಅಜೇಯ 89 ರನ್ ಗಳಿಸಿ ಪಂಜಾಬ್ ಕಿಂಗ್ಸ್ಗೆ ದೊಡ್ಡ ಸವಾಲನ್ನು ನೀಡಿದರು. ಕಳೆದ ಮೂರು ಪಂದ್ಯಗಳಲ್ಲಿ ತಂಡ ಎರಡರಲ್ಲಿ ಗೆಲುವು ಸಾಧಿಸಿದ್ದರೂ ಅವರ ಬ್ಯಾಟಿಂಗ್ನಲ್ಲಿ ಅಷ್ಟೇನೂ ಅಬ್ಬರಿಸಿರಲಿಲ್ಲ. ಆದರೆ ಇಂದು ಪಂಜಾಬ್ ವಿರುದ್ಧ ಉತ್ತಮ ಬ್ಯಾಟಿಂಗ್ ಮಾಡಿದರು. ಕೊನೆಯಲ್ಲಿ ಜಿಟಿ ನೀಡಿದ ಟಾರ್ಗೆಟ್ ಬೆನ್ನಟ್ಟಿದ ಪಂಜಾಬ್ ತಂಡವು ನಿಗದಿತ 19.5 ಓವರ್ಗೆ 7 ವಿಕೆಟ್ ನಷ್ಟಕ್ಕೆ 200 ರನ್ ಗಳಿಸುವ ಮೂಲಕ ರೋಚಕ 3 ವಿಕೆಟ್ ಗಳ ಗೆಲುವು ದಾಖಲಿಸಿತು.
ಶಶಾಂಕ್-ಅಶುತೋಷ್ ಭರ್ಜರಿ ಬ್ಯಾಟಿಂಗ್:
ಇನ್ನು, ಗುಜರಾತ್ ನೀಡಿದ ಟಾರ್ಗೆಟ್ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ತಂಡಕ್ಕೆ ಆರಂಭದಲ್ಲಿಯೇ ಆಘಾತ ಎದುರಾಯಿತು. ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಂಡ ಪಂಜಾಬ್ ಕೊನೆಯಲ್ಲಿ ರೋಚಕ ಗೆಲುವು ದಾಖಲಿಸಿತು. ಪಂಜಾಬ್ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಶಿಖರ್ ಧವನ್ 1 ರನ್ ಗಳಿಸಿ ಪೆವೆಲಿಯನ್ ಸೇರಿದರೆ, ಜಾನಿ ಬೇರ್ಸ್ಟೋ 13 ಎಸೆತದಲ್ಲಿ 22 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಅತ್ತ ಸ್ಯಾಮ್ ಕರನ್ ಸಹ 5 ರನ್ ಹಾಗೂ ಸಿಕಂದರ್ ರಾಝಾ 15 ರನ್ ಗಳಿಸಿ ಪೆವೆಲಿಯನ್ ಸೇರಿಕೊಂಡರು. ಪ್ರಭಸಿರಾನ್ ಸಿಂಗ್ 24 ಎಸೆತದಲ್ಲಿ 1 ಸಿಕ್ಸ್ ಮತ್ತು 5 ಫೋರ್ ಮೂಲಕ 35 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದಾಗ ಮೋಹಿತ್ ಶರ್ಮಾ ಎಸೆತದಲ್ಲಿ ಕ್ಯಾಚಿತ್ತು ಔಟ್ ಆದರು.
ಅಶುತೋಷ್ ಶರ್ಮಾ ಕೊನೆಯಲ್ಲಿ 17 ಎಸೆತದಲ್ಲಿ 1 ಸಿಕ್ಸ್ ಮತ್ತು 3 ಫೋರ್ ಮೂಲಕ 31 ರನ್ ಗಳಿಸಿ ಮಿಂಚಿದರು. ಗೆಲುವಿನಲ್ಲಿ ಪ್ರಮುಖ ರುವಾರಿಯಾದ ಶಶಾಂಕ್ 29 ಎಸೆತದಲ್ಲಿ 4 ಸಿಕ್ಸ್ ಮತ್ತು 6 ಬೌಂಡರಿ ಸಹಿತ 61 ರನ್ ಸಿಡಿಸಿ ಪಂಜಾಬ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
ಶುಭ್ಮನ್ ಗಿಲ್ ಭರ್ಜರಿ ಬ್ಯಾಟಿಂಗ್:
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಭರ್ಜರಿ ಆಟವಾಡಿತು. ಗುಜರಾತ್ ಪರ ನಾಯಕ ಶುಭ್ಮನ್ ಗಿಲ್ ಉತ್ತಮ ಶಾಟ್ ಮೂಲಕ ಮಿಮಚಿದರು. ನಾಯಕ ಶುಭ್ಮನ್ ಗಿಲ್ ಔಟಾಗದೆ 89 ರನ್ ಗಳಿಸಿದರು. ಗಿಲ್ ಹೊರತಾಗಿ ಗುಜರಾತ್ ತಂಡದ ಇತರ ಬ್ಯಾಟ್ಸ್ಮನ್ಗಳಾದ ವೃದ್ಧಿಮಾನ್ ಸಹಾ 11 ರನ್, ಕೇನ್ ವಿಲಿಯಮ್ಸನ್ 26 ರನ್, ಸಾಯಿ ಸುದರ್ಶನ್ 33 ರನ್, ವಿಜಯ್ ಶಂಕರ್ 8 ರನ್ ಮತ್ತು ರಾಹುಲ್ ನವತಿಯಾ 23 ರನ್ ಗಳಿಸಿದರು. ಗುಜರಾತ್ ಟೈಟಾನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಬೌಲರ್ ಗಳು 4 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಇದರಲ್ಲಿ ಕಗಿಸೋ ರಬಾಡ ಅತಿ ಹೆಚ್ಚು 2 ವಿಕೆಟ್ ಪಡೆದರೆ, ಹರ್ಪ್ರೀತ್ ಬ್ರಾರ್ ಮತ್ತು ಹರ್ಷಲ್ ಪಟೇಲ್ ತಲಾ ಒಂದು ವಿಕೆಟ್ ಪಡೆದರು. ಗುಜರಾತ್ ಟೈಟಾನ್ಸ್ 20 ಓವರ್ಗಳಲ್ಲಿ 199 ರನ್ ಗಳಿಸಿ ಗುಜರಾತ್ ಟೈಟಾನ್ಸ್ಗೆ 200 ರನ್ಗಳ ಸವಾಲನ್ನು ನೀಡಿತು.
ಇಂಡಿಯನ್ ಪ್ರೀಮಿಯರ್ ಲೀಗ್ನ ಮೊದಲ ಮೂರು ಪಂದ್ಯಗಳಲ್ಲಿ ದೊಡ್ಡ ಮೊತ್ತ ಗಳಿಸಲು ವಿಫಲವಾಗಿದ್ದ ಗಿಲ್ ಪಂಜಾಬ್ ವಿರುದ್ಧ ಅಬ್ಬರಿಸಿದರು. ಮೊದಲ ಪಂದ್ಯದಲ್ಲಿ 31 ರನ್ ಗಳಿಸಿದ್ದ ಅವರು ಮುಂಬೈ ಇಂಡಿಯನ್ಸ್ ವಿರುದ್ಧ ಶೂನ್ಯಕ್ಕೆ ವಿಕೆಟ್ ಕಳೆದುಕೊಂಡರು. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಶುಭಮನ್ ಗಿಲ್ ಕೇವಲ 8 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 36 ರನ್ ಗಳಿಸಿ ಔಟಾದರು. ಆದರೆ ಇದೀಗ 4ನೇ ಪಂದ್ಯದ ಮೂಲಕ ಉತ್ತಮ ಮೊತ್ತ ಕಲೆಹಾಕಿದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1