ಸಿಇಟಿ ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಳ್ಳಿ.

ಏಪ್ರಿಲ್ 18 ಮತ್ತು 19ರಂದು ನಡೆಯಲಿರುವ ಸಿಇಟಿ 24ರ ಪ್ರವೇಶ ಪತ್ರಗಳನ್ನು ಇನ್ನೂ ಡೌನ್ಲೋಡ್ ಮಾಡಿಕೊಂಡಿರದ ಅಭ್ಯರ್ಥಿಗಳು ಕೂಡಲೇ ಡೌನ್ಲೋಡ್ ಮಾಡಿಕೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೂಚಿಸಿದೆ.

 ಸಿಇಟಿಗೆ ಅರ್ಜಿ ಸಲ್ಲಿಸಿರುವ ಸುಮಾರು 50 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಂಡಿಲ್ಲ ಮುಂಚಿತವಾಗಿಯೇ ಡೌನ್ಲೋಡ್ ಮಾಡಿಕೊಂಡರೆ ಕೊನೆ ಕ್ಷಣದ ತೊಡಕುಗಳು ಹಾಗೂ ಆತಂಕಗಳಿಂದ ಮುಕ್ತವಾಗಿ ಪರೀಕ್ಷೆ ಎದುರಿಸಲು ಸಹಾಯಕಾರಿಯಾಗುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಸಿಇಟಿ 24 ಬರೆಯಲು ಒಟ್ಟು 3,27,384 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಇದುವರೆಗೂ 2,76,495 ವಿದ್ಯಾರ್ಥಿಗಳು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಉಳಿದ 50,889 ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು ಮಾಡಿಕೊಳ್ಳಬೇಕಾಗಿದೆ ಎಂದು ಅವರು ವಿವರಿಸಿದ್ದಾರೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *