ಬೆಂಗಳೂರು, ಏಪ್ರಿಲ್ 12: ಮಳೆ ಕಾಣದೇ ಬಿಸಿಲ ಬೇಗೆಗೆ ಕಂಗೆಟ್ಟಿದ್ದ ಕರ್ನಾಟಕದ ಜನರಿಗೆ ವರುಣ ದೇವ ಕೊಂಚ ತಂಪೆರೆದಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಾದ ವಿಜಯಪುರ, ಚಿಕ್ಕಮಗಳೂರು, ಗದಗ, ಕಲಬುರಗಿ, ಬೆಳಗಾವಿ, ಧಾರವಾಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಜನರು ಸಂಸತ ವ್ಯಕ್ತಡಪಡಿಸಿದ್ದಾರೆ.

ಹೌದು, ಯುಗಾದಿಯ ಬಳಿಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಜನರ ನಿರೀಕ್ಷೆ ಇನ್ನೂ ಹೆಚ್ಚಾಗಿದೆ. ಇನ್ನೂ ಕರ್ನಾಟಕದ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಸಹ ಮಳೆಯಾಗಲಿದೆ ಎಂದು ತಿಳಿಸಿದೆ.
ಇಂದು ಮತ್ತು ನಾಳೆ ಬೆಂಗಳೂರು ಮತ್ತು ಮೈಸೂರು ನಗರಗಳಲ್ಲಿ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಹಿತ ಮಳೆಯಾಗುವ ಸಾಧ್ಯತೆಯಿದೆ, ಆದರೆ ಗುಡುಗು ಸಹಿತ ಚಂಡಮಾರುತದ ಚಟುವಟಿಕೆ ಕುರಿತು ಮಾಹಿತಿ ತಿಳಿದು ಬಂದಿದೆ. ಮುಂದಿನ 48 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಕೂಡ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಅಲ್ಲದೇ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ,ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಸಹ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಂಕೇಶ್ವರ, ಹುಕ್ಕೇರಿ, ಯಡವಾಡದಲ್ಲಿ ಮಳೆಯಾಗಿದ್ದು, ಬೆಳಗಾವಿ, ಬೀದರ್, ವಿಜಯಪುರ, ಚಿಕ್ಕಮಗಳೂರು, ಕಲಬುರಗಿ, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಲಘು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣವಿರಲಿದೆ. ಮುಂದಿನ ಎರಡು ದಿನ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.
ಕಳೆದ ವಾರ ಕೊಡಗು ಸೇರಿದಂತೆ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಾವಣಗೆರೆಯಲ್ಲಿ ಮಳೆಯಾಗಿತ್ತು, ಮಧ್ಯ ಕರ್ನಾಟಕದಲ್ಲಿ ಭಾಗದಲ್ಲೂ ಸಹ ಮಳೆಯಾಗಿದೆ. ಇನ್ನೂ ಇಂದಿನಿಂದ ಹಲವು ಭಾಗಗಳಲ್ಲಿ ಮಳೆಯಾಗಲಿದ್ದು, ಏಪ್ರಿಲ್ 13 ರಂದು ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದಿನಿಂದ ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ.
ಇನ್ನೂ ಮುಂದಿನ ಮೂರು ಗಂಟೆಗಳಲ್ಲಿ ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1