ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಮೇ 07 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ಪ್ರೀತಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 08 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 49 ನಿಮಿಷಕ್ಕೆ, ರಾಹು ಕಾಲ 15:40 ರಿಂದ 17:15ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:19 ರಿಂದ 10:54 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:29 ರಿಂದ 14:04ರ ವರೆಗೆ.
ಮೇಷ ರಾಶಿ :ಇಂದು ನಿಮ್ಮ ಜೀವನ ಬಹಳ ಸುಂದರ ಎನಿಸುವುದು. ತೆರೆದರೆ ಬೆಳಕು, ತೆರೆಯದಿದ್ದರೆ ಕತ್ತಲು ಇರುತ್ತದೆ ಎನ್ನುವುದನ್ನು ಅರಿತುಕೊಳ್ಳಿ. ಸಂಗಾತಿಯ ಆಯ್ಕೆಯನ್ನು ನೀವೇ ಮಾಡಿ. ಶ್ರಮದಿಂದ ಸುಖವು ಪ್ರಾಪ್ತಿಯಾಗುವುದು. ವಿವೇಚನೆಯನ್ನು ಮೀರಿ ಕೆಲಸವನ್ನು ಮಾಡಬೇಡಿ. ನಿಮ್ಮ ಬಳಿ ಚಾಲೆಂಜ್ ಮಾಡಿದ್ದರೆ ನೀವು ಛಲವನ್ನು ಇಟ್ಟುಕೊಳ್ಳುವಿರಿ. ಬದಲಾವಣೆಯೇ ಶಾಶ್ವತ ಎನ್ನುವ ವಾಕ್ಯವನ್ನು ಸ್ಮರಿಸುತ್ತ ಮುಂದಡಿಯಿಡಿ. ಗೊತ್ತಿಲ್ಲದ ವಿಚಾರದ ಬಗ್ಗೆ ಮಾತನಾಡಿ ಅವಮಾನಕ್ಕೆ ಒಳಗಾಗುವಿರಿ. ನೆಮ್ಮದಿ ನಿಮ್ಮೆದುರು ಇರಲಿದೆ. ದೇಹಕ್ಕೆ ವಿಶ್ರಾಂತಿಯ ಅವಶ್ಯಕತೆ ಇದ್ದರೂ ಸಮಯವು ಮಾತ್ರ ಸಿಗದೇಹೋದೀತು. ಹಿತಶತ್ರುಗಳಿಂದ ಸಣ್ಣ ಆಪತ್ತು ಬರಬಹುದು. ಕರ್ತವ್ಯಕ್ಕೆ ನಿಮ್ಮ ಮನಸ್ಸನ್ನು ಕೊಟ್ಟುಕೊಳ್ಳುವಿರಿ. ಸಂಗಾತಿಯ ಜೊತೆ ದೂರ ಪ್ರಯಾಣ ಮಾಡುವಿರಿ. ನಿಮಗಿರುವ ಆಲಸ್ಯದ ಪಟ್ಟದಿಂದ ಕೆಳಗಿಳಿಯುವುದು ಅಸಾಧ್ಯ.
ವೃಷಭ ರಾಶಿ :ನಿಮ್ಮ ಗಟ್ಟಿಯಾದ ಸಂಕಲ್ಪವು ಯಶಸ್ಸಿನ ಗುಟ್ಟೂ ಆಗುವುದು. ಹಣವನ್ನು ಗಳಿಸುವ ಆಸೆಯು ತೀರ್ವವಾಗಿದ್ದರೂ ಸಫಲವಾಗುವುದಿಲ್ಲ. ಸಾಲದ ವಿಚಾರ ಬಂದರೆ ಮೌನವಹಿಸಿ, ಎದ್ದು ಹೋಗಿ ಅಥವಾ ವಿಷಯಾಂತರಿಸಿ. ಕಲಹಕ್ಕೆ ದಾರಿ ಮಾಡಿ ಕೊಡಬೇಡಿ. ಮನಸ್ಸು ದುರ್ಬಲವಾಗಿ, ಎಲ್ಲದಕ್ಕೂ ಬೇಸರ ಮಾಡಿಕೊಳ್ಳುವಿರಿ. ಪಿತ್ರಾರ್ಜಿತ ಸಂಪತ್ತು ನಿಮಗೆ ಇಂದು ಉಪಯೋಗಕ್ಕೆ ಬರಲಿದೆ. ಸಂಗಾತಿಯು ನಿಮ್ಮ ಮೇಲೆ ಬೇಸರಗೊಂಡಾನು. ವೃತ್ತಿಯಲ್ಲಿ ಕಿರಿಕಿರಿ ಅಧಿಕವಾಗಬಹುದು. ಮೆಚ್ಚುಗೆಯ ಮಾತುಗಳಿಂದ ದೂರವಾದ ಸಂಬಂಧವು ಹತ್ತಿರವಾಯಬಹುದು. ಸರಳ ಮಾರ್ಗದಿಂದ ಕೆಲಸವನ್ನು ಪೂರ್ಣ ಮಾಡಿಕೊಳ್ಳಿ. ಆರೋಗ್ಯದ ಬಗ್ಗೆ ಆತಂಕ ಬೇಡ. ವಿನೀತಭಾವವು ನಿಮ್ಮನ್ನು ಇಷ್ಟಪಡುವಂತೆ ಮಾಡಬಹುದು. ಉದ್ಯೋಗದಲ್ಲಿ ನೀವು ಪ್ರಗತಿಯನ್ನು ಸಾಧಿಸುವಿರಿ. ಪಶ್ಚಾತ್ತಾಪವು ನಿಮ್ಮ ನೋವನ್ನು ಪರಿಹರಿಸೀತು.
ಮಿಥುನ ರಾಶಿ :ಅಪರೂಪಕ್ಕೆ ಸಿಕ್ಕ ಸ್ನೇಹಿತರು ನಿಮ್ಮ ಬಳಿ ಹಣವನ್ನು ಖಾಲಿಮಾಡಿಸಬಹುದು. ದಾಂಪತ್ಯಜೀವನವು ಜೀವನ್ಮರಣದ ಮಧ್ಯದಲ್ಲಿ ಒದ್ದಾಗುತ್ತಿದ್ದು ಬದುಕಿಸಿಕೊಳ್ಳಿ. ಇನ್ನೊಂದು ಜೀವವನ್ನು ಗರ್ಭದಲ್ಲಿ ಹೊತ್ತಿರುವವರು ನಡಿಗೆಯಲ್ಲೂ ಮನಸ್ಸಿನಲ್ಲೂ ಮಾತಿನಲ್ಲೂ ಎಚ್ಚರ, ಸಮಾಧಾನದಿಂದ ಇರಿ. ನಿಮ್ಮ ನ್ಯೂನತೆಗಳನ್ನು ಇನ್ನೊಬ್ಬರ ಬಾಯಿಗೆ ಸಿಕ್ಕ ರಸಗವಳದಂತೆ ಚಪ್ಪರಿಸಿ ಸೇವಿಸುತ್ತಿರುತ್ತಾರೆ. ಹೊಸ ವಸ್ತುಗಳನ್ನು ಹಾಳುಮಾಡಿಕೊಳ್ಳುವಿರಿ. ಉದ್ಯೋಗವನ್ನು ಬದಲಿಸಿದ ಕಾರಣ ಸಮಯವು ಓಡಾಟದಲ್ಲಿ ವ್ಯರ್ಥವಾಗಬಹುದು. ಸಾಮಾಜಿಕ ಕಾರ್ಯಕ್ಕೆ ನಿಮಗೆ ಪ್ರಶಂಸೆಯು ಸಿಗುವುದು. ಕಛೇರಿಯಲ್ಲಿ ಕೆಲವರ ವರ್ತನೆಯು ಬದಲಾದಂತೆ ತೋರುವುದು. ನಿಮಗೆ ಇಷ್ಟವಾದದನ್ನು ಪಡೆಯುವುದು ಕಷ್ಟವಾಗುವುದು.
ಕಟಕ ರಾಶಿ :ಇಂದು ಅನವಶ್ಯಕ ಖರ್ಚಿನ ಕಡೆ ಗಮನ ಬೇಕು. ಹೆಚ್ಚು ಕೋಪವನ್ನು ತೋರಿಸಲಿದ್ದೀರಿ. ಯಾರ ಒತ್ತಾಯಕ್ಕೋ ಮಣಿದು ನಿಮ್ಮ ನಿರ್ಧಾರಗಳನ್ನು ಬದಲಿಸಿಕೊಳ್ಳಬೇಡಿ. ಹಿಡಿದ ಕೆಲಸವನ್ನು ಬಿಡದೆ ಮುನ್ನಡೆಸುವ ಜಾಯಮಾನವು ನಿಮ್ಮ ಇಂದಿನ ಯಶಸ್ಸಿನ ಗುಟ್ಟುಗಳಲ್ಲೊಂದು. ಎಂತಹ ಸಂದರ್ಭದಲ್ಲಿಯೂ ಉದ್ವೇಗಕ್ಕೆ ಒಳಗಾಗಬೇಡಿ. ಹೂಡಿಕೆಯ ಬಗ್ಗೆ ನಿಮಗೆ ಸರಿಯಾದ ಮಾಹಿತಿಯ ಕೊರತೆ ಇರುವುದು. ಇಂದು ನಿಮ್ಮ ನಕಾರಾತ್ಮಕ ಭಾವನೆಗಳು ಹೆಚ್ಚಿರುವುದು. ಉಸಿರಾಟದ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಬೇಕಾದೀತು. ನಿಮ್ಮ ಸಂತೋಷವನ್ನು ವ್ಯಕ್ತಪಡಿಸುವ ವಿಧಾನವು ವಿಭಿನ್ನವಾಗಿರಲಿದೆ. ಯಾವ ನೋವನ್ನೂ ನಿರ್ಲಕ್ಷಿಸುವುದು ಬೇಡ. ನಿಮ್ಮಿಂದ ಉಪಕಾರವನ್ನು ಕೇಳಿ ಬರಬಹುದು. ಅಪರಿಚಿತರ ಕರೆಯಿಂದ ಚಿಂತೆಯಾಗವುದು.
ಸಿಂಹ ರಾಶಿ :ಇಂದು ಹಿತಶತ್ರುಗಳಿಂದ ತೊಂದರೆಯಾಗುವುದು. ಹೊಸ ಉದ್ಯೋಗವನ್ನು ಆರಂಭಿಸುವುದಿದ್ದರೆ ಒಳ್ಳೆಯದು. ಹೆಚ್ಚು ಮಾತನಾಡಿ ನಿಮ್ಮನ್ನು ನೀವೇ ಸಣ್ಣವರನ್ನಾಗಿ ಮಾಡಿಕೊಳ್ಳಬೇಡಿ. ವ್ಯಾಪಾರದ ಕಾರಣದಿಂದ ದೂರ ಸಂಚಾರವನ್ನು ಮಾಡಲಿದ್ದೀರಿ. ನೀಮ್ಮ ವಾಹನವನ್ನು ನೀವೇ ಮಾಡುವುದು ಬೇಡ. ಪರರ ದೃಷ್ಟಿ ನಿಮ್ಮ ಮೇಲೆ ಬೀಳಲಿದೆ. ಅಸೂಯೆಪಡಲಿದ್ದಾರೆ. ನಿಮ್ಮ ಸೋಲನ್ನು ಪಾಠವಾಗಿ ಸ್ವೀಕರಿಸಿ. ಸಾಧಿಸುವ ಛಲವಿರುವವಗೆ ಯಾವುದು ಸಾಧ್ಯವಿಲ್ಲವಾಗುತ್ತದೆ? ನಿಮ್ಮನ್ನು ಮೆಚ್ಚಿಸಿ ಕೆಲಸಗಳನ್ನು ಇಂದು ಮಾಡಿಸಿಕೊಳ್ಳುವರು. ಗುರಿಯನ್ನು ಯಾರಾದರೂ ತಪದಪಿಸಬಹಿದಿ. ಇಷ್ಟ ಪಟ್ಟವರನ್ನು ಮದುವೆಯಾಗುವ ಮಕ್ಕಳ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುವಿರಿ. ಖರೀದಿಯನ್ನು ನೀವು ಬಹಳ ಉತ್ಸಾಹದಿಂದ ಮಾಡುವಿರಿ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿ. ನಿಮ್ಮದಾದ ಜೀವನಕ್ರಮವು ನಿಮಗೆ ಹಿಡಿಸದೇ ಇರಬಹುದು.
ಇದನ್ನು ಓದಿ : ಬೇಸಿಗೆಯಲ್ಲಿ ದಾಳಿಂಬೆ ಜ್ಯೂಸ್ ಕುಡಿಯಿರಿ: ಬಿಸಿಲಿನಿಂದ ಬಸವಳಿದ ದೇಹಕ್ಕೆ ಸಿಗುತ್ತೆ ಈ ಎಲ್ಲಾ ಪ್ರಯೋಜನ.
ಕನ್ಯಾ ರಾಶಿ :ತುಂಬಾ ದಿನಗಳಿಂದ ಮನೆಗೆ ಅಗತ್ಯವಿರುವ ಹೊಸ ವಸ್ತುಗಳ ಖರೀದಿಯನ್ನು ಮಾಡಲಿದ್ದೀರಿ. ಮನೆಯ ಹಿರಿಯರ ವಿರುದ್ಧ ಮಾತನಾಡುವಿರಿ. ಕುಟುಂಬದಲ್ಲಿ ಸಣ್ಣ ಮಟ್ಟಿನ ಕಲಹವೂ ಆದೀತು. ಔಷಧೀಯ ವಸ್ತುಗಳ ಮಾರಾಟದಿಂದ ಹೆಚ್ಚು ಲಾಭವಾಗಲಿದೆ. ಯಾವ ಮಾತನ್ನೂ ಯೋಚಿಸದೇ ಆಡಬೇಡಿ. ಮುಂದೆ ಇದೇ ತಪ್ಪಾದೀತು. ಸಂಗಾತಿಯ ಸೌಂದರ್ಯಕ್ಕೆ ಮರುಳಾಗಿ ಹೋಗುವಿರಿ. ವಕೀಲವೃತ್ತಿಯಲ್ಲಿ ಇರುವವರಿಗೆ ಜಯವು ಸಿಗಲಿದೆ. ಯಾರದೋ ಮೇಲಿನ ಸಿಟ್ಟನ್ನು ಮನೆಮಂದಿಯ ಮೇಲೆ ತೋರಿಸುವುದು ಸರಿಯಾಗದು. ನೂತನ ಗೃಹ ನಿರ್ಮಾಣದ ಬಗ್ಗೆ ನುರಿತವರ ಜೊತೆ ಚರ್ಚೆಯನ್ನು ನಡೆಸುವು ಯೋಚನೆ ಇರುವುದು. ವಾಹನ ಓಡಾಟದಿಂದ ನಿಮಗೆ ಸುಖವಿರದು. ಕರ್ತವ್ಯಗಳನ್ನು ದೃಢ ಮನಸ್ಸಿನಿಂದ ಮಾಡುವಿರಿ. ಒಡ ಹುಟ್ಟಿದವರ ಬಗ್ಗೆ ಅಸೂಯೆ ತೋರಿಸುವಿರಿ. ಇಂದು ನಿಮ್ಮ ಮನೋಬಲವು ದುರ್ಬಲವಾಗಬಹುದು.
ತುಲಾ ರಾಶಿ :ಇಂದು ನಿಮ್ಮ ಸರ್ಕಾರದ ಕಾರ್ಯಗಳು ನಿಧಾನವಾಗುವುದು. ಮನಸ್ಸು ಅತಿಯಾದ ಗೊಂದಲದಿಂದ ಇರುವುದು. ಕಾರ್ಯದ ನಿಮಿತ್ತ ವ್ಯರ್ಥ ಓಡಾಟವನ್ನು ಮಾಡುವಿರಿ. ಸಂಗಾತಿಯ ಜೊತೆ ಸಂತೋಷದಿಂದ ಸಲ್ಲಾಪಮಾಡುತ್ತ ಸಮಯವು ಕಳೆದುಹೋಗುವುದು. ಇಂದು ಭೂಮಿಯನ್ನು ಮಾರುವುದಿದ್ದರೆ ಉತ್ಯಮ ಬೆಲೆಗೆ ಖರೀದಿಯಾಗುವುದು. ಅತಿಯಾದ ಸಿಹಿಯನ್ನು ತಿಂದು ದೇಹವನ್ನು ಕೆಡಿಸಿಕೊಳ್ಳಬೇಡಿ. ವ್ಯಾಪಾರದಲ್ಲಿ ತೊಡಕು ಬರಬಹುದು. ಆದರೆ ಇದನ್ನು ನಿವಾರಿಸಿಕೊಳ್ಳುವ ತಂತ್ರವು ನಿಮಗೆ ಅನುಭವದಿಂದ ಸಿದ್ಧವಾಗಿರುವುದು. ನಿಮ್ಮ ನಿಷ್ಠೆಯನ್ನು ಬದಲಾಯಿಸುವುದು ಬೇಡ. ನಿಮ್ಮ ಇಂದಿನ ಸ್ಥಿತಿಯು ಅಭಿವೃದ್ದಿಗೆ ಹಲವಾರು ದಾರಿಗಳನ್ನು ಹುಡುಕುವಿರಿ. ತಪ್ಪಿದ ಯೋಚನೆಯಿಂದ ನೀವು ಸರಿಯಾಗಬೆರಕಾಗುವುದು. ನಿಮಗಿರುವ ಚಂಚಲ ಮನಸ್ಸಿನಿಂದ ನಕಾರಾತ್ಮಕ ಯೋಚನೇಗಳೇ ಕಾಣಿಸಬಹುದು.
ವೃಶ್ಚಿಕ ರಾಶಿ :ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯರ ಸಲಹೆಗಳನ್ನು ತಿರಸ್ಕರಿಸಬೇಡಿ. ಇಂದು ನಿಮ್ಮ ಪ್ರತಿಭೆಯ ಪ್ರದರ್ಶನವಾಗಲಿದೆ. ಸ್ನೇಹಿತರ ಜೊತೆ ಹೆಚ್ಚು ಕಾಲವನ್ನು ಕಳೆದು ನೋವನ್ನು ಹಂಚಿಕೊಳ್ಳುವರು. ಬಹಳ ದಿನಗಳಿಂದ ಹೋಗಬೇಕೆಂದುಕೊಂಡ ಸ್ಥಳಕ್ಕೆ ಹೋಗುವಿರಿ. ನಿಮ್ಮ ಬಗ್ಗೆ ಪೂರ್ವಾಗ್ರಹದಿಂದ ಇಟ್ಟುಕೊಂಡವರಿಗೆ ನಿಜಸ್ಥಿತಿಯನ್ನು ತಿಳಿಸುವಿರಿ. ಆರ್ಥಿಕಸ್ಥಿತಿಯು ಸುಧಾರಿಸುವುದು. ನಿಮ್ಮ ನೆಚ್ಚಿನ ವ್ಯಕ್ತಿಯನ್ನು ಭೇಟಿ ಮಾಡುವಿರಿ. ಸೋಮಾರಿತನ ಬಿಟ್ಟು ಕೆಲಸಕ್ಕೆ ಪ್ರಯತ್ನಿಸಿ. ನಿಮ್ಮವರ ಆರೋಗ್ಯದ ವ್ಯತ್ಯಾಸದಿಂದ ಹಣವನ್ನು ಖರ್ಚು ಮಾಡಬೇಕಾಗುವುದು. ತೊಂದರೆಗೆ ಸಿಕ್ಕಿಕೊಳ್ಳಲು ನೀವೇ ಕಾರಣ. ಇದೇ ನಿಮಗೆ ಮುಳುವಾಗಬಹುದು. ಇನ್ನೊಬ್ಬರಿಗೆ ನಿಮ್ಮನ್ನು ಹೋಲಿಸಿಕೊಂಡು ಬೇಸರಿಸುವಿರಿ. ಕುಟುಂಬದ ಬಗ್ಗೆ ನಿಮಗೆ ಅಭಿಮಾನದ ಕೊರತೆ ಕಾಣುವುದು. ಸಾಲಗಾರರಿಂದ ಹಿಂಸೆ ಹೆಚ್ಚಾಗುವುದು. ನಿಮಗೆ ಸಿಕ್ಕ ಪ್ರಶಂಸೆಯಿಂದ ಸಹೋದ್ಯೋಗಿಗಳು ತೊಂದರೆಯನ್ನು ಕೊಡಬಹುದು.
ಧನು ರಾಶಿ :ನಿಮಗಾದ ವಂಚನೆಯನ್ನು ಸರಿ ಮಾಡಿಕೊಳ್ಳಲು ಕಾನೂನಿಗೆ ವಿರುದ್ಧವಾಗಿ ಹೋಗುವಿರಿ. ವ್ಯಾಪಾರದಲ್ಲಿ ಅಧಿಕಲಾಭವನ್ನು ಗಳಿಸಲಿದ್ದೀರಿ. ಸರ್ಕಾರಿ ಅಧಿಕಾರಿಗಳು ಸಂಕಷ್ಟದಲ್ಲಿ ಸಿಲುಕಿಕೊಳ್ಳುವರು. ತಂದೆ ಹಾಗೂ ತಾಯಿಯರ ಸೇವೆಯ ಅವಕಾಶ ಸಿಗುವುದು. ನಿಮ್ಮ ಪ್ರೇಮನಿವೇದನೆಯಿಂದ ನಕಾರಾತ್ಮಕ ಪ್ರತಿಕ್ರಿಯೆಗಳು ಬರಬಹುದು. ಯಾವುದೂ ನಿಮ್ಮ ಆಲೋಚನೆಗೆ ಅನುಸಾರವಾಗಿ ನಡೆಯುತ್ತಿಲ್ಲವೆಂಬ ಬೇಸರವೂ ಆಗಬಹುದು. ಬೇರೆಯವರಿಗೆ ನಿಮ್ಮ ಬಗ್ಗೆ ನಕಾರಾತ್ಮಕ ಭಾವವು ಇರಬಹುದು. ಗುರಿಯನ್ನು ಬದಲಿಸದೇ ಮುನ್ನಡೆಯುವಿರಿ. ಮಕ್ಕಳಿಗೆ ಪ್ರೋತ್ಸಾಹವನ್ನು ಕೊಡುವಿರಿ. ನಿಮ್ಮ ಉಳಿಕೆಯ ಹಣದ ಬಗ್ಗೆ ಎಚ್ಚರವಿರಲಿ. ಆಪ್ತರ ಬಗ್ಗೆ ಇರುವ ನಕಾರತ್ಮಕ ಭಾವವನ್ನು ನೀವು ಅವರಿಗೆ ಹೇಳುವಿರಿ. ಭೂಮಿಯ ಉತ್ಪನ್ನದಿಂದ ಲಾಭವು ಸಿಗುವುದು. ಆತುರದಲ್ಲಿ ಯಾವ ನಿರ್ಧಾರವನ್ನೂ ಮಾಡದೇ ಯೋಚಿಸಿ ಮುಂದುವರಿಯಬೇಕಾಗುವುದು.
ಮಕರ ರಾಶಿ :ಇಂದು ನೀವು ಮಾಡಿದ ಪ್ರಯಾಣದಿಂದ ಸುಖವಿಲ್ಲ. ಹತಾಶೆಯಿಂದ ಹೊರಬಂದು ಒಳ್ಳೆಯ ಕಾರ್ಯದವನ್ನು ಮಾಡುವತ್ತ ಗಮನಹರಿಸಿ. ನಕಾರಾತ್ಮಕ ಭಾವನೆಗಳಿಗೆ ದಾರಿ ಮಾಡಿ ಕೊಡಬೇಡಿ. ಎಲ್ಲವನ್ನೂ ಸಮಾಧಾನಚಿತ್ತದಿಂದ ಸ್ವೀಕರಿಸುವುದನ್ನು ಇಂದಿನಿಂದ ಬೆಳೆಸಿಕೊಳ್ಳಿ. ಮಾನಸಿಕ ನೆಮ್ಮದಿಯೂ ಸಿಗುವುದು. ಜೀವನೂ ಸರಳವಾಗುವುದು. ಕುಟುಂಬದವರೊಂದಿಗೆ ನಗುತ್ತಾ ಇರಿ. ಕಾರ್ಯದ ಒತ್ತಡವು ಇಂದು ಅಧಿಕವಾಗಿರಲಿದೆ. ಆರೋಗ್ಯವನ್ನೂ ಗಮನಿಸಿಕೊಳ್ಳಿ. ನಿಮ್ಮ ಯೋಜನೆಯು ಪೂರ್ಣ ವ್ಯತ್ಯಾಸವಾದ ಕಾರಣ ಮನೆಯಲ್ಲಿ ಕಲಹವಾಡುವಿರಿ. ಸೂಕ್ತ ಪರಿಹಾರದ ಕಡೆ ಗಮನವಿರಲಿ. ನಿವೃತ್ತಿಯ ಅಂಚಿನಲ್ಲಿದ್ದು ನಡತೆಯನ್ನು ಸರಿಯಾಗಿ ಇಟ್ಟುಕೊಳ್ಳಿ. ಮನೆಮಂದಿಯವರ ಜೊತೆ ಸಿಟ್ಟಗೊಂಡರೆ ನಿಮಗೇ ತೊಂದರೆಯಾದೀತು. ನಿಮ್ಮ ಇಂದಿನ ಕಾರ್ಯದಿಂದ ಕಛೇರಿಯಲ್ಲಿ ನಿರೀಕ್ಷೆ ಮೀರಿ ಪ್ರಶಂಸೆ ಸಿಗುವುದು.
ಕುಂಭ ರಾಶಿ :ನಿಮ್ಮ ಯೋಜನೆಗೆ ಇಂದು ಎಲ್ಲವೂ ವಿರುದ್ಧವಾಗಬಹುದು. ಯಾರ ಮೇಲೂ ದ್ವೇಷವನ್ನು ಸಾಧಿಸುವುದು ಬೇಡ. ಮನಸ್ಸು ಕೆಡುತ್ತದೆಯಷ್ಟೇ. ಇನ್ನೊಬ್ಬರು ಆಡುವ ಮಾತುಗಳು ಅಸತ್ಯವೆನಿಸುವುದು. ನಿಮ್ಮವರನ್ನು ಪ್ರೀತಿಸಿ. ಆಗದಿದ್ದರೆ ಸುಮ್ಮನಿರಿ. ನಿಮಗೆ ಬರುವ ಹಣವಿಂದು ಬರಬಹುದು. ಸಂಗಾತಿಯ ಜೊತೆಗಿರುವ ಮನಸ್ತಾಪ ದೂರಾಗುವುದು. ನಿಮ್ಮ ಸಲಹೆಯನ್ನು ಕುಟುಂಬವು ತಿರಸ್ಕರಿಸಬಹುದು. ಇಷ್ಟವಾದ ವಸ್ತುಗಳನ್ನು ಖರೀದಿಸುವಿರಿ. ಉದ್ಯೋಗದ ಕಾರಣಕ್ಕೆ ದೂರಪ್ರಯಾಣವನ್ನು ಮಾಡುವಿರಿ. ಬಂಧುಗಳ ಒಡನಾಟ ನಿಮಗೆ ಸಿಗಲಿದೆ. ಸ್ನೇಹಿತರ ಜಗಳದಲ್ಲಿ ತಲೆ ಹಾಕಿ ಅಪಾಯಕ್ಕೆ ಸಿಕ್ಕಿಕೊಳ್ಳುವಿರಿ. ಹೊಸ ವಿಷಯಗಳತ್ತ ಉತ್ಸಾಹವೇ ಇರಲಿದ್ದು, ಇದು ತಾತ್ಕಾಲಿಕ ಅಷ್ಟೇ. ನೀವು ಖರೀದಿಸುವ ಭೂಮಿಯ ದಾಖಲೆಯನ್ನು ಸಮಾಧಾನಚಿತ್ತದಿಂದ ಕೂಲಂಕಷವಾಗಿ ಪರಿಶೀಲಿಸಿ. ದಾಂಪತ್ಯದಲ್ಲಿನ ವಿರಸದಿಂದ ಮಾನಸಿಕ ಆರೋಗ್ಯವನ್ನು ಕೆಡಿಸುವುದು.
ಮೀನ ರಾಶಿ :ನಿಮಗೆ ಯಾರಾದರೂ ಆಸರೆ ಬೇಕೆನಿಸಬಹುದು. ನಿಮ್ಮ ಬುದ್ಧಿ, ಮನಸ್ಸುಗಳಿಗೆ ಕೆಲಸವನ್ನು ಕೊಡಿ. ಸಂಗಾತಿಯ ಜೊತೆ ವಿವಾದವಾಗುವುದು. ಯಾವುದೇ ವಿವಾದವನ್ನು ಎಳೆದುಕೊಳ್ಳಬೇಡಿ. ಇಂದು ನಿಮಗೆ ಕೊಟ್ಟಿರುವ ಜವಾಬ್ದಾರಿಯನ್ನು ಯೋಗ್ಯರೀತಿಯಲ್ಲಿ ಮಾಡಿ ಮುಗಿಸುವಿರಿ. ಹಣವನ್ನು ಉಳಿಸಲು ಪ್ರಯತ್ನಿಸಿದಷ್ಟೂ ಅನಿರೀಕ್ಷಿತವಾದ ದಾರಿಯಲ್ಲಿ ಖರ್ಚಾಗುವುದು. ಆತಂಕ ಮತ್ತು ಉದ್ವೇಗ ಇರುತ್ತದೆ. ಪ್ರವಾಸದಿಂದ ಉತ್ಸಾಹವು ಹೆಚ್ಚಾಗುವುದು. ದುಷ್ಟ ಜನರಿಂದ ದೂರವಿರಿ. ದಾಂಪತ್ಯದ ವಾಗ್ವಾದವು ಅತಿರೇಕಕ್ಕೆ ಹೋಗಬಹುದು. ಮಿತ್ರರು ನಿಮ್ಮಆಸಕ್ತಿಯ ಕ್ಷೇತ್ರವನ್ನು ಬದಲಿಸಬಹುದು. ಇಂದಿನ ಕಾರ್ಯವನ್ನು ಮುಂದೂಡುವುದು ಬೇಡ. ನಿಮ್ಮ ಗುಣಗಳನ್ನು ಇತರರು ಆಡಿಕೊಳ್ಳಬಹುದು. ಪೋಷಕರನ್ನು ಕಡೆಗಣಿಸಿದ್ದು ನಿಮಗೆ ಪಾಪಪ್ರಜ್ಞೆ ಕಾಡಬಹುದು. ಕುಟುಂಬದಲ್ಲಿ ಸಂತಸದ ವಾತಾವರಣವು ಇರುವಂತೆ ಮಾಡುವಿರಿ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsAppGroup:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1