IND vs SL 1st ODI Live score: ಟೀಮ್ ಇಂಡಿಯಾ ಉತ್ತಮ ಆರಂಭ

IND vs SL 1st ODI Live score

ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ತಂಡದ ನಾಯಕ ದಸುನ್ ಶಾನಕ ಬೌಲಿಂಗ್ ಆಯ್ದುಕೊಂಡಿದ್ದಾರೆ. 3 ಪಂದ್ಯಗಳ ಸರಣಿಯ ಮೊದಲ ಪಂದ್ಯ ಇದಾಗಿದ್ದು, ಹೀಗಾಗಿ ಏಕದಿನ ಗೆಲುವಿನೊಂದಿಗೆ ಅಭಿಯಾನ ಆರಂಭಿಸುವ ಇರಾದೆಯಲ್ಲಿದೆ ಟೀಮ್ ಇಂಡಿಯಾ. ಇನ್ನು ಶ್ರೀಲಂಕಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಈ ಸರಣಿಯ ಮೂಲಕ ಕಂಬ್ಯಾಕ್ ಮಾಡಿದ್ದಾರೆ.

ಏಕದಿನ ಸರಣಿ ವೇಳಾಪಟ್ಟಿ:

  • ಜನವರಿ 10: ಮೊದಲ ಏಕದಿನ ಪಂದ್ಯ (ಸ್ಥಳ- ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗೌಹಾಟಿ)
  • ಜನವರಿ 12: ಎರಡನೇ ಏಕದಿನ ಪಂದ್ಯ (ಸ್ಥಳ- ಈಡನ್ ಗಾರ್ಡನ್ಸ್, ಕೋಲ್ಕತ್ತಾ)
  • ಜನವರಿ 15: ಮೂರನೇ ಏಕದಿನ ಪಂದ್ಯ (ಗ್ರೀನ್‌ಫೀಲ್ಡ್ ಸ್ಟೇಡಿಯಂ, ತಿರುವನಂತಪುರಂ)

ಶ್ರೀಲಂಕಾ ಏಕದಿನ ತಂಡ:

ದಸುನ್ ಶಾನಕ (ನಾಯಕ), ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೊ, ಸಧೀರ ಸಮರವಿಕ್ರಮ, ಕುಸಾಲ್ ಮೆಂಡಿಸ್ (ಉಪನಾಯಕ), ಚರಿತ್ ಅಸಲಂಕಾ, ಧನಂಜಯ್ ಡಿಸಿಲ್ವ, ವನಿಂದು ಹಸರಂಗ, ಮಹೀಶ್ ತೀಕ್ಷಣ , ಜೆಫ್ರಿ ವಾಂಡರ್ಸೆ, ಚಾಮಿಕಾ ಕರುಣಾರತ್ನೆ, ದಿಲ್ಶಾನ್ ಮಧುಶಂಕ, ಕಸುನ್ ರಜಿತ, ನುವಾನಿಡು ಫೆರ್ನಾಂಡೋ, ದುನಿತ್ ವೆಲಾಲಗೆ, ಪ್ರಮೋದ್ ಮದುಶನ್.

ಟೀಮ್ ಇಂಡಿಯಾ ಏಕದಿನ ತಂಡ:

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್.

source https://tv9kannada.com/sports/cricket-news/ind-vs-sl-1st-odi-live-score-india-vs-sri-lanka-live-cricket-score-from-barsapara-cricket-stadium-in-guwahati-kannada-zp-au50-498555.html

Leave a Reply

Your email address will not be published. Required fields are marked *