ಎಸ್.ಎಸ್.ಎಲ್.ಸಿ. ಪರೀಕ್ಷೆ-2 ನೋಂದಣಿ ದಿನಾಂಕ ವಿಸ್ತರಣೆ: ವೇಳಾಪಟ್ಟಿ ಬಗ್ಗೆ ಇಲ್ಲಿದೆ ಮಾಹಿತಿ.

ಈ ಮೊದಲು ಎಸ್‌ಎಸ್‌ಎಲ್ಸಿ ಪರೀಕ್ಷೆ-2ಗೆ ನೋಂದಾಯಿಸಲು ಮೇ 16 ಕೊನೆಯ ದಿನವಾಗಿತ್ತು. ಇದುವರೆಗೆ ಸುಮಾರು 2 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್ಸಿ ಪರೀಕ್ಷೆ -2ಗೆ ನೋಂದಾಯಿಸಿಕೊಂಡಿದ್ದಾರೆ. ಈ ಬಾರಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದ ಮತ್ತು ಕಡಿಮೆ ಫಲಿತಾಂಶ ಪಡೆದ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಪಡೆದು ಫಲಿತಾಂಶ ವೃದ್ಧಿಸಿಕೊಳ್ಳಲು ಎರಡನೇ ಮತ್ತು ಮೂರನೇ ಪರೀಕ್ಷೆ ನಡೆಸಲಾಗುತ್ತದೆ.

ವೇಳಾಪಟ್ಟಿ

ಜೂನ್ 7 ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಇಂಗ್ಲಿಷ್, ಸಂಸ್ಕೃತ

ಜೂನ್ 8 ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಎನ್.ಎಸ್.ಕ್ಯೂ.ಎಫ್. ವಿಷಯಗಳು

ಜೂನ್ 10 ಗಣಿತ

ಜೂನ್ 11 ಅರ್ಥಶಾಸ್ತ್ರ, ಇಂಜಿನಿಯರಿಂಗ್ ವಿಷಯಗಳು

ಜೂನ್ 12 ವಿಜ್ಞಾನ, ರಾಜ್ಯಶಾಸ್ತ್ರ, ಹಿಂದುಸ್ತಾನಿ, ಕರ್ನಾಟಕ ಸಂಗೀತ

ಜೂನ್ 13 ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ

ಜೂನ್ 14 ಸಮಾಜ ವಿಜ್ಞಾನ ವಿಷಯದ ಪರೀಕ್ಷೆ ನಡೆಯಲಿದೆ.

 

Source : https://m.dailyhunt.in/news/india/kannada/kannadadunia-epaper-kannadad/es+es+el+si+parikshe+2+nondani+dinaanka+vistarane+velaapatti+bagge+illide+maahiti-newsid-n609250496?listname=topicsList&topic=news&index=45&topicIndex=1&mode=pwa&action=click

Leave a Reply

Your email address will not be published. Required fields are marked *