ನವದೆಹಲಿ : ನೋಡ ನೋಡುತ್ತಿದ್ದಂತೆಯೇ ರೈಲೊಂದು ಹೊತ್ತಿ ಉರಿದ ಘಟನೆ ನವದೆಹಲಿಯಲ್ಲಿ ನಡೆದಿದೆ.

ದಕ್ಷಿಣ ದೆಹಲಿಯ ತುಘಲಕಾಬಾದ್ ರೈಲು ನಿಲ್ದಾಣದ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಪ್ರಯಾಣಿಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವಷ್ಟರಲ್ಲಿ ಪಕ್ಕದಲ್ಲಿದ್ದ ಮತ್ತೊಂದು ರೈಲು ಬೆಂಕಿ ತಗುಲಿದೆ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲವಾದರೂ ಇದು ಯಾರದಾದರೂ ಕುಕೃತ್ಯವೇ ಅಥವಾ ಶಾರ್ಟ್ ಸರ್ಕ್ಯೂಟ್ ನಿಂದ ಕಾಣಿಸಿಕೊಂಡ ಬೆಂಕಿಯೇ ಎಂಬುದು ತನಿಖೆಯ ನಂತರ ಗೊತ್ತಾಗಬೇಕಿದೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯವನ್ನು ಮಾಡುತ್ತಿದ್ದು ಈ ಘಟನೆಯಲ್ಲಿ ಯಾವುದೇ ಪ್ರಾಣಪಾಯಗಳು ಸಂಭವಿಸಿಲ್ಲ ಎಂದು ವರದಿಯಾಗಿದೆ.