ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗಾಯಗಳಿಗೆ ನೂತನ ಸಂಸದ ಡಾ.ಸಿ.ಎನ್ ಮಂಜುನಾಥ್ ಅವರು ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಸಂಸದರ ಈ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಈ ಮೂಲಕ ಮತ್ತೊಮ್ಮೆ ಜನರ ಮನಸ್ಸು ಗೆದ್ದಿದ್ದಾರೆ.

ರಾಮನಗರ, (ಜೂನ್ 17): ಬೆಂಗಳೂರು ಗ್ರಾಮಾಂತರ ಬಿಜೆಪಿ ಸಂಸದ ಡಾ.ಸಿ.ಎನ್ ಮಂಜುನಾಥ್ BJP MP Dr Manjunath) ಅವರು ರಸ್ತೆ ಅಪಘಾತದಲ್ಲಿ(Accident) ಗಂಭೀರವಾಗಿ ಗಾಯಗೊಂಡಿದ್ದ ಗಾಯಗಳಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ. ರಾಮನಗರದ (Ramanagar) ಕನಕಪುರ- ಸಾತನೂರು ಮಾರ್ಗ ಮಧ್ಯೆ ಡಾ.ಸಿ.ಎನ್. ಮಂಜುನಾಥ್ ಅವರು ಕಾರಿನಲ್ಲಿ ತೆರಳುವಾಗ ಅದೇ ಮಾರ್ಗದಲ್ಲೇ ಅಪಘಾತ ಸಂಭವಿಸಿತ್ತು. ಅಪಘಾತವನ್ನು ನೋಡಿ ನೋಡಿ ತಮ್ಮ ಕಾರನ್ನು ನಿಲ್ಲಿಸಿದ ಸಂಸದರು ಗಾಯಾಳುಗಳನ್ನು ಪರೀಕ್ಷಿಸಿದ್ದಾರೆ. ಬಳಿಕ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಅಲ್ಲದೇ ದೂರವಾಣಿ ಕರೆ ಮಾಡಿ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ. ಸಂಸದರ ಈ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಈ ಮೂಲಕ ಮತ್ತೊಮ್ಮೆ ಜನರ ಹೃದಯ ಗೆದ್ದಿದ್ದಾರೆ.
ಗಾಯಾಳುಗಳಿಗೆ ಸ್ಥಳದಲ್ಲೇ ಚಿಕಿತ್ಸೆ ನೀಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಸಂಸದರ ಈ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಮಂಜುನಾಥ್ ಅವರು ಖ್ಯಾತ ಹೃದ್ರೋಗ ವೈದ್ಯರಾಗಿದ್ದು, ಹಲವು ವರ್ಷಗಳ ಕಾಲ ಬೆಂಗಳೂರಿನ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿದ್ದರು. ಆ ವೇಳೆ ಸಾಕಷ್ಟು ಬಡರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಿ ಭಾರೀ ಜನ ಮನ್ನಣೆ ಗಳಿಸಿದ್ದಾರೆ. ಅಂದಿನ ಕಾರ್ಯವೇ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅವರ ಗೆಲುವಿಗೆ ಕಾರಣವಾಗಿದೆ.
ಡಾ ಮಂಜುನಾಥ್ ಅವರ ಅವಧಿ ಮುಗಿಯುತ್ತಿದ್ದಂತೆಯೇ ಮಂಜುನಾಥ್ ಅವರು ರಾಜಕೀಯ ಪ್ರವೇಶ ಮಾಡಿದ್ದಾರೆ. ಅವರು ರಾಜಕೀಯ ಪ್ರವೇಶಕ್ಕೆ ಸಾಮಅಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಗಳು ನಡೆದಿದ್ದವು. ಅಂತಿಮವಾಗಿ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಅವರ ಸಹೋದರ ಹಾಲಿ ಕಾಂಗ್ರೆಸ್ ಸಂಸದರಾಗಿದ್ದ ಪ್ರಭಾವಿ ನಾಯಕ ಡಿಕೆ ಸುರೇಶ್ ಅವರನ್ನು ಒಂದುವರೆ ಲಕ್ಷ ಮತಗಳಿಂದ ಮಣಿಸಿ ಸಂಸತ್ಗೆ ಪ್ರವೇಶ ಮಾಡಿದ್ದಾರೆ.