ಕೇರಳವಲ್ಲ, ಇನ್ಮೇಲೆ ಕೇರಳಂ!

ತಿರುವನಂತಪುರಂ: ಕೇರಳ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಅಧಿಕೃತವಾಗಿ ಬದಲಿಸುವ ನಿರ್ಣಯವನ್ನು ಕೇರಳ ವಿಧಾನಸಭೆಯಲ್ಲಿ ಸೋಮವಾರ ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ಈ ನಿರ್ಣಯವನ್ನು ಅನುಮೋದನೆಗಾಗಿ ಸಿಎಂ ಪಿಣರಾಯಿ ವಿಜಯನ್ ನೇತೃತ್ವದ ಸರಕಾರ ಕೇಂದ್ರ ಸರಕಾರಕ್ಕೆ ಕಳುಹಿಸಿಕೊಡಲಿದೆ.

2ನೇ ಬಾರಿಗೆ ಕೇರಳ ವಿಧಾನಸಭೆಯು ಈ ನಿರ್ಣಯ ಅಂಗೀಕರಿಸಿದೆ. ಮೊದಲ ನಿರ್ಣಯವನ್ನು ಪರಿಶೀಲಿಸಿದ್ದ ಕೇಂದ್ರದ ಗೃಹ ಸಚಿವಾಲಯವು ಕೆಲವು ತಾಂತ್ರಿಕ ಬದಲಾವಣೆಗಳಿಗೆ ಸೂಚಿಸಿತ್ತು.

Leave a Reply

Your email address will not be published. Required fields are marked *