India vs Zimbabwe 2nd T20I : ಭಾರತ ಮತ್ತು ಜಿಂಬಾಬ್ವೆ ನಡುವೆ ಐದು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಸೋತಿತ್ತು. ಆ ಬಳಿಕ ಇಂದು ನಡೆದ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಕಮ್ ಬ್ಯಾಕ್ ಮಾಡಿದೆ. ಅಭಿಷೇಕ್ ಶರ್ಮಾ, ರುತುರಾಜ್ ಗಾಯಕ್ವಾಡ್ ಮತ್ತು ರಿಂಕು ಸಿಂಗ್ ಅವರ ಅಮೋಘ ಇನ್ನಿಂಗ್ಸ್ ಆಧಾರದ ಮೇಲೆ ಭಾರತ 100 ರನ್ಗಳಿಂದ ಪಂದ್ಯವನ್ನು ಗೆದ್ದುಕೊಂಡಿದೆ.

ಭಾರತ ಮತ್ತು ಜಿಂಬಾಬ್ವೆ ನಡುವೆ ಐದು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಸೋತಿತ್ತು. ಆ ಬಳಿಕ ಇಂದು ನಡೆದ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಕಮ್ ಬ್ಯಾಕ್ ಮಾಡಿದೆ. ಅಭಿಷೇಕ್ ಶರ್ಮಾ, ರುತುರಾಜ್ ಗಾಯಕ್ವಾಡ್ ಮತ್ತು ರಿಂಕು ಸಿಂಗ್ ಅವರ ಅಮೋಘ ಇನ್ನಿಂಗ್ಸ್ ಆಧಾರದ ಮೇಲೆ ಭಾರತ 100 ರನ್ಗಳಿಂದ ಪಂದ್ಯವನ್ನು ಗೆದ್ದುಕೊಂಡಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 234 ರನ್ ಗಳಿಸಿ ಗೆಲುವಿಗೆ 235 ರನ್ ಗಳ ಸವಾಲನ್ನು ನೀಡಿತು. ಗುರಿ ಬೆನ್ನಟ್ಟಿದ ಜಿಂಬಾಬ್ವೆ ತಂಡ 134 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಗೆಲುವಿನೊಂದಿಗೆ ಭಾರತ ಸರಣಿಯಲ್ಲಿ 1-1 ರಿಂದ ಸಮಬಲಗೊಳಿಸಿತು.