ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಜು. 11 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಜು. 13 ರ ಶನಿವಾರ ಬೆಳಿಗ್ಗೆ 10.30ಕ್ಕೆ ನಗರದ ಜಿ.ಪಂ. ಮುಖ್ಯ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಸಮಾರಂಭವನ್ನು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಉದ್ಘಾಟಿಸಿದ್ದು, ಶಾಸಕರಾದ ಕೆ.ಸಿ. ವೀರೇಂದ್ರರವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸಂಸದರಾದ ಗೋವಿಂದ ಎಂ. ಕಾರಜೋಳ, ಕರ್ನಾಟಕ ರಾಜ್ಯ ವಕ್ಸ್ ಮಂಡಳಿಯ ಅಧ್ಯಕ್ಷರಾದ ಕೆ. ಅನ್ವರ್ ಭಾಷಾ, ಶಾಸಕರು, ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಅಧ್ಯಕ್ಷರಾದ ಬಿ.ಜಿ. ಗೋವಿಂದಪ್ಪ ಶಾಸಕರು, ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ. ರಘುಮೂರ್ತಿ, ಶಾಸಕರಾದ ಎನ್.ವೈ. ಗೋಪಾಲಕೃಷ್ಣ, ಡಾ. ಎಂ. ಚಂದ್ರಪ್ಪ ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ. ಗೌಡ, ಕೆ.ಎಸ್. ನವೀನ್, ಡಿ.ಟಿ. ಶ್ರೀನಿವಾಸ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷರಾದ ಡಾ. ಬಿ. ಯೋಗೇಶ್ ಬಾಬು, ಆದಿಜಾಂಭವ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಎಸ್. ಮಂಜುನಾಥ, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಶ್ರೀಮತಿ ಸವಿತಾ ರಘು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಕೆ.ತಾಜ್‍ಪೀರ್ ಭಾಗವಹಿಸಲಿದ್ದಾರೆ.
ದಿಕ್ಕೂಚಿ ಭಾಷಣವನ್ನು ಕನ್ನಡಪ್ರಭ ಹಾಗೂ ಏಷ್ಯಾ ನೆಟ್ ಸುವರ್ಣ ನ್ಯೂಸ್‍ನ ಪ್ರಧಾನ ಸಂಪಾದಕರಾದ ರವಿ ಹೆಗಡೆ ನಡೆಸಿಕೊಡಲಿದ್ದಾರೆ. ಪತ್ರಕರ್ತರು, ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಬಗ್ಗೆ ಕವಿಗಳು ಹಾಗೂ ಜನಪರ ಹೋರಾಟಗಾರರಾದ ಬಂಜೆಗೆರೆ ಜಯಪ್ರಕಾಶ್ ಮಾತನಾಡಲಿದ್ದಾರೆ.
ಜಿಲ್ಲಾಧಿಕಾರಿಗಳಾದ ವೆಂಕಟೇಶ್ ಟಿ. ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ್ ಎಸ್.ಜೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಧರ್ಮೇಂಧರ್ ಕುಮಾರ್ ಮೀನಾ ಹಾಗೂ ಜಿಲ್ಲಾ ವಾರ್ತಾಧಿಕಾರಿಗಳಾದ ಬಿ.ವಿ.ತುಕಾರಾಂರಾವ್,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾಧ್ಯಕ್ಷರಾದ ಬಿ. ದಿನೇಶ್‍ಗೌಡಗೆರೆ, ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷರಾದ ರವಿ ಮಲ್ಲಾಪುರ ಆಗಮಿಸಲಿದ್ದಾರೆ.