‘ಕರ್ನಾಟಕ, ಕನ್ನಡಿಗರನ್ನು ಅವಮಾನಿಸುವ ಉದ್ದೇಶವಿರಲಿಲ್ಲ’: ಕ್ಷಮೆಯಾಚಿಸಿದ ಫೋನ್​ಪೇ ಸಿಇಒ ಸಮೀರ್ ನಿಗಂ.

ಬೆಂಗಳೂರು, ಜುಲೈ 21: ಕರ್ನಾಟಕದಲ್ಲಿ ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಸರ್ಕಾರದ ನಿರ್ಧಾರಕ್ಕೆ, ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಈ ಪೈಕಿ ಫೋನ್ ಪೇ ಕಂಪನಿ ಸಿಇಒ ಸಮೀರ್​​​​​​​​​ ನಿಗಮ್​ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೆ ಕರ್ನಾಟಕ, ಕನ್ನಡಿಗರ ಬಗ್ಗೆ ಕುಹುಕವಾಡಿದ್ದರು. ಹೀಗಾಗಿ ಬಾಯ್ಕಾಟ್ ಬಿಸಿ ಮುಟ್ಟಿಸಿದ್ದರು. ಇದೀಗ ಸಮಸ್ತ ಕರುನಾಡಿನ ಜನರಲ್ಲಿ ಕ್ಷಮೆಯಾಚಿಸಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಫೋನ್ ಪೇ ಸಿಇಒ ಸಮೀರ್​​​​​​​​​ ನಿಗಮ್, ಕರ್ನಾಟಕ, ಕನ್ನಡಿಗರನ್ನು ಅವಮಾನಿಸುವ ಉದ್ದೇಶವಿರಲಿಲ್ಲ. ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ, ಯಾರದ್ದಾದರೂ ಭಾವನೆಗಳಿಗೆ ಧಕ್ಕೆಯಾಗಿದ್ದರೆ ಕ್ಷಮೆಯಾಚಿಸುವೆ. ಸಮಸ್ತ ಕರುನಾಡಿನ ಜನರಲ್ಲಿ ಕ್ಷಮೆಯಾಚಿಸುತ್ತೇನೆಂದು ಹೇಳಿದ್ದಾರೆ.

Source : https://tv9kannada.com/karnataka/no-intention-to-insult-karnataka-kannadigas-phonepe-ceo-sameer-nigam-apologizes-taja-suddi-ggs-869993.html

Leave a Reply

Your email address will not be published. Required fields are marked *