ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಜು. 23 : ಎಸ್.ಎಸ್.ಎಲ್.ಸಿ.ಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದಿದ್ದಕ್ಕಾಗಿ ಸರಸ್ವತಿ ಪುರಸ್ಕಾರ ಹಾಗೂ ಕನ್ನಡದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದಿದ್ದಕ್ಕಾಗಿ ಕನ್ನಡ ಕುವರ-ಕುವರಿ ಪ್ರಶಸ್ತಿಗಾಗಿ ಚಿತ್ರದುರ್ಗ ನಗರದ ಗುಮಾಸ್ತ ಕಾಲೋನಿಯ ಬಿ,ವಿ.ವಿರಾಜ್‌ಕುಮಾರ್ ಹಾಗೂ ಬಿ.ವಿ.ಶಿವಲೀಲಾ ರವರ ಮಗಳಾದ ಕುಮಾರಿ ಸಮೃದ್ದಿ ಬಿ.ವಿ.ಯನ್ನು ಆಯ್ಕೆ ಮಾಡಲಾಗಿದೆ ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಹಾಗೂ ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನದ ಸಂಸ್ಥಾಪಕರಾದ ಸಾಲಿಗ್ರಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಈ ಬಗ್ಗೆ ಪ್ರಕಟಣೆಯನ್ನು ನೀಡಿರುವ ಅವರು, ನಮ್ಮ ಸಂಸ್ಥೆಯವತಿಯಿಂದ ಈ ರೀತಿಯಾದ ಕಾರ್ಯಕ್ರಮವನ್ನು ಹಲವಾರು ವರ್ಷಗಳಿಂದ ನಿರಂತರವಾಗಿ ಮಾಡಿಕೊಂಡು ಬರಲಾಗುತ್ತಿದೆ, ಈ ಸಾರಿಯು ಸಹಾ ಕಾರ್ಯಕ್ರಮ ನಡೆಯಲಿದ್ದು, ಎಸ್.ಎಸ್.ಎಲ್.ಸಿ.ಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದಿದ್ದಕ್ಕಾಗಿ ಸರಸ್ವತಿ ಪುರಸ್ಕಾರ ಹಾಗೂ ಕನ್ನಡದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದಿದ್ದಕ್ಕಾಗಿ ಕನ್ನಡ ಕುವರ-ಕುವರಿ ಪ್ರಶಸ್ತ್ರಿಗಾಗಿ ನಿಮ್ಮನ್ನು ಆಯ್ಕೆ ಮಾಡಲಾಗಿದೆ, ಜು. 27 ರಂದು ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಗಣ್ಯರ ಸಮ್ಮುಖದಲ್ಲಿ ನಡೆಯಲಿದೆ ಎಂದಿದ್ದಾರೆ.