ಅಮ್ಮ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತೆ, ಕ್ಷಮಿಸಿ. ನಿನ್ನ ಕನಸು, ನನ್ನ ಧೈರ್ಯ ಎಲ್ಲ ಛಿದ್ರವಾಯಿತು. ನನ್ನ ಧೈರ್ಯ ಸಂಪೂರ್ಣ ಕುಗ್ಗಿದೆ, ಈಗ ಹೆಚ್ಚಿನ ಶಕ್ತಿ ಉಳಿದಿಲ್ಲ…

ನವದೆಹಲಿ: ನನ್ನ ವಿರುದ್ಧ ಕುಸ್ತಿ ಗೆದ್ದಿದೆ. ನಾನು ಸೋತಿದ್ದೇನೆ. ಕ್ಷಮಿಸಿ, ಈಗ ನನ್ನಲ್ಲಿ ಹೆಚ್ಚಿನ ಶಕ್ತಿ ಇಲ್ಲ ಎಂದು ಹೇಳುವ ಮೂಲಕ ಕುಸ್ತಿಪಟು ವಿನೇಶ್ ಫೋಗಟ್ ಭಾವುಕ ಸಂದೇಶದೊಂದಿಗೆ ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಭಾವುಕ ಸಂದೇಶ ಪ್ರಕಟಿಸಿರುವ ಅವರು, ಅಮ್ಮ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತೆ, ಕ್ಷಮಿಸಿ. ನಿನ್ನ ಕನಸು, ನನ್ನ ಧೈರ್ಯ ಎಲ್ಲ ಛಿದ್ರವಾಯಿತು. ನನ್ನ ಧೈರ್ಯ ಸಂಪೂರ್ಣ ಕುಗ್ಗಿದೆ, ಈಗ ಹೆಚ್ಚಿನ ಶಕ್ತಿ ಉಳಿದಿಲ್ಲ ಎಂದು ಬರೆದುಕೊಂಡಿದ್ದಾರೆ. ಇದೇ ವೇಳೆ ಕುಸ್ತಿಗೆ ವಿದಾಯ. ನಿಮ್ಮೆಲ್ಲರಿಗೂ ನಾನು ಸದಾ ಋಣಿಯಾಗಿರುತ್ತೇನೆ, ಕ್ಷಮಿಸಿ ಎಂದು ವಿನೇಶ್ ಫೋಗಟ್ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.