ರಾಜ್ಯ ಸರ್ಕಾರದಿಂದ ‘ಅತಿಥಿ ಉಪನ್ಯಾಸಕ’ರ ನೇಮಕಾತಿಗೆ ಅರ್ಜಿ ಆಹ್ವಾನ: 40,000 ವೇತನ, ಸೆ.7 ಲಾಸ್ಟ್ ಡೇಟ್.

ಈ ಕುರಿತಂತೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2024-25ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳೂ ಒಳಗೊಂಡಂತೆ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಒಳಗೊಂಡಂತೆ) ಆನ್‌ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಳ್ಳುವ ಸಂಬಂಧ ಈ ಕೆಳಕಂಡಂತೆ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುವುದು ಎಂದಿದೆ.

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 31-08-2024ರಿಂದ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-09-2024 ಆಗಿದೆ. ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ದಿನಾಂಕ 08-09-2024ರಂದು ಪ್ರಕಟಿಸಲಾಗುತ್ತದೆ. ಅರ್ಜಿಯಲ್ಲಿ ಏನಾದರೂ ಎಡಿಟ್ ಮಾಡುವುದಿದ್ದರೇ ಸೆ.9 ಮತ್ತು 10ರಂದು ಅವಕಾಶ ನೀಡಲಾಗುತ್ತಿದೆ. ಕಾರ್ಯಭಾರವನ್ನು ಸೆ.11, 2024ರಂದು ಪ್ರಕಟಿಸಲಾಗುತ್ತದೆ. ಮೆರಿಟ್ ಪಟ್ಟಿಯನ್ನು ಕಾಲೇಜು ಆಯ್ಕೆ ಕೌನ್ಸಿಲಿಂಗ್ ನಡೆಸುವ ದಿನಾಂಕ 17-09-2024 ಆಗಿದೆ.

ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲುwww.dce.karnataka.gov.inಗೆ ಭೇಟಿ ನೀಡಿ. ಅಲ್ಲದೇ ಹೆಚ್ಚಿನ ಮಾಹಿತಿಯನ್ನು ಇದೇ ಲಿಂಕ್ ನಲ್ಲಿ ಪಡೆಯಬಹುದಾಗಿದೆ.

ಗೌರವಧನದ ಮೊತ್ತ

  • 5 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ -35,000/-
  • 5 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ – 31,000/-
  • 5 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ಮತ್ತು 10 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ – 38,000/-
  • 5 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ಮತ್ತು 10 ವರ್ಷಕ್ಕಿಂತ ಕಡಿಮೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ -34,000/-
  • 10 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ಮತ್ತು 15 ವರ್ಷಕ್ಕಿಂತ ಕಡಿಮೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ -39,000/-
  • 10 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ಮತ್ತು 15 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ ಹೊಂದಿಲ್ಲದವರಿಗೆ – 39,000/-
  • 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ – 40,000/-
  • 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ – 36,000/-

ಅತಿಥಿ ಉಪನ್ಯಾಸಕರಿಗೆ ಕಲಾ/ವಾಣಿಜ್ಯ/ಭಾಷಾ ವಿಷಯಗಳಿಗೆ ಗರಿಷ್ಠ 15 ಗಂಟೆಗಳ ಹಾಗೂ ವಿಜ್ಞಾನ ವಿಷಯಗಳು/ಪ್ರಾಯೋಗಿಕ ತರಗತಿಗಳಿರುವ ವಿಷಯಗಳಿಗೆ ಗರಿಷ್ಠ 19 ಗಂಟೆಗಳ ಕಾರ್ಯಭಾರವನ್ನು ಮಾತ್ರ ಹಂಚಿಕೆ ಮಾಡಲಾಗುವುದು ಹಾಗೂ 15/19 ಗಂಟೆಗಳಿಗಿಂತ ಕಡಿಮೆ ಕಾರ್ಯಭಾರವಿದ್ದಲ್ಲಿ ಎಷ್ಟು ಗಂಟೆಗಳ ಕಾರ್ಯಭಾರ ಲಭ್ಯವಿದೆಯೋ ಅದಕ್ಕೆ ಅನುಗುಣವಾಗಿ ಗೌರವಧನವನ್ನು ಪರಿಗಣಿಸಲಾಗುವುದು.

Source : https://m.dailyhunt.in/news/india/kannada/kannadanewsnow-epaper-kanowcom/udyoga+vaarte+raajya+sarkaaradindha+atithi+upanyaasaka+ra+nemakaatige+arji+aahvaana+40+000+vetana+se+7+laast+det+guest+lecturer+recruitment-newsid-n628865235?listname=topicsList&topic=news&index=22&topicIndex=1&mode=pwa&action=click

 

Leave a Reply

Your email address will not be published. Required fields are marked *