IND vs SL, 3rd ODI Live Score: ಟೀಮ್ ಇಂಡಿಯಾ ಇನಿಂಗ್ಸ್ ಆರಂಭ

IND vs SL, 3rd ODI Live Score

IND vs SL, 3rd ODI Live Score: IND vs SL, 3rd ODI: ತಿರುವನಂತಪುರದ ಗ್ರೀನ್​ಫೀಲ್ಡ್​ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮೂರು ಪಂದ್ಯಗಳ ಸರಣಿಯ ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಟೀಮ್ ಇಂಡಿಯಾ ಈಗಾಗಲೇ ಸರಣಿ ವಶಪಡಿಸಿಕೊಂಡಿದೆ. ಹೀಗಾಗಿ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಔಪಚಾರಿಕ. ಮತ್ತೊಂದೆಡೆ ಕ್ಲೀನ್ ಸ್ವೀಪ್ ಸೋಲಿನ ಅವಮಾನ ತಪ್ಪಿಸಿಕೊಳ್ಳಲು ಶ್ರೀಲಂಕಾ ತಂಡವು ಇಂದು ಕಠಿಣ ಪೈಪೋಟಿ ನೀಡುವ ನಿರೀಕ್ಷೆಯಿದೆ.

ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಶ್ರೀಲಂಕಾವನ್ನು 67 ರನ್​ಗಳಿಂದ ಸೋಲಿಸಿತ್ತು. ಹಾಗೆಯೇ 2ನೇ ಏಕದಿನ ಪಂದ್ಯದಲ್ಲಿ ಭಾರತ ತಂಡವು 4 ವಿಕೆಟ್​ಗಳ ಜಯ ಸಾಧಿಸಿತ್ತು. ಇದೀಗ ಮೂರನೇ ಏಕದಿನ ಪಂದ್ಯದಲ್ಲಿ ಗೆದ್ದರೆ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಅವಕಾಶ ಟೀಮ್ ಇಂಡಿಯಾ ಮುಂದಿದೆ.

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್

ಶ್ರೀಲಂಕಾ ಪ್ಲೇಯಿಂಗ್ ಇಲೆವೆನ್: ಅವಿಷ್ಕಾ ಫೆರ್ನಾಂಡೊ, ನುವಾನಿಡು ಫೆರ್ನಾಂಡೊ, ಕುಸಲ್ ಮೆಂಡಿಸ್, ಅಶೆನ್ ಬಂಡಾರ, ಚರಿತ್ ಅಸಲಂಕಾ, ದಸುನ್ ಶಾನಕ (ನಾಯಕ), ವನಿಂದು ಹಸರಂಗ, ಜೆಫ್ರಿ ವಾಂಡರ್ಸೆ, ಚಾಮಿಕಾ ಕರುಣಾರತ್ನೆ, ಕಸುನ್ ರಜಿತಾ, ಲಹಿರು ಕುಮಾರ

ಟೀಮ್ ಇಂಡಿಯಾ ಏಕದಿನ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್.

ಶ್ರೀಲಂಕಾ ಏಕದಿನ ತಂಡ:
ದಸುನ್ ಶಾನಕ (ನಾಯಕ), ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೊ, ಸಧೀರ ಸಮರವಿಕ್ರಮ, ಕುಸಾಲ್ ಮೆಂಡಿಸ್ (ಉಪನಾಯಕ), ಚರಿತ್ ಅಸಲಂಕಾ, ಧನಂಜಯ್ ಡಿಸಿಲ್ವ, ವನಿಂದು ಹಸರಂಗ, ಮಹೀಶ್ ತೀಕ್ಷಣ , ಜೆಫ್ರಿ ವಾಂಡರ್ಸೆ, ಚಾಮಿಕಾ ಕರುಣಾರತ್ನೆ, ದಿಲ್ಶಾನ್ ಮಧುಶಂಕ, ಕಸುನ್ ರಜಿತ, ನುವಾನಿಡು ಫೆರ್ನಾಂಡೋ, ದುನಿತ್ ವೆಲಾಲಗೆ, ಪ್ರಮೋದ್ ಮದುಶನ್.

 

 

source https://tv9kannada.com/sports/cricket-news/ind-vs-sl-3rd-odi-live-score-from-greenfield-international-stadium-in-thiruvananthapuram-kannada-zp-au50-501610.html

Leave a Reply

Your email address will not be published. Required fields are marked *