ಬೆಂಗಳೂರು : ನಾವಿದ್ದರೆ ಬೆಂಗಳೂರು. ಹಾಗೇನಾದರೂ ನಾವೆಲ್ಲರೂ ಬೆಂಗಳೂರು ಬಿಟ್ಟು ಹೋದರೆ, ಇಡೀ ಊರೇ ಖಾಲಿಯಾಗುತ್ತದೆ. ಕೋರಮಂಗಲದ ಪಬ್ಗಳೆಲ್ಲಾ ಖಾಲಿ ಹೊಡೆಯುತ್ತದೆ ಎಂದಿದ್ದ ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಸುಗಂಧ್ ಶರ್ಮ ತನ್ನ ಕೆಲಸವನ್ನೇ ಕಳೆದುಕೊಂಡಿದ್ದಾಳೆ.
ಹೌದು ಕಳೆದ ಕೆಲವು ದಿನಗಳ ಹಿಂದೆ ಸುಗಂಧ ಶರ್ಮ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕನ್ನಡಿಗರನ್ನು ಕೆಣಕಿ, ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಳು. ಆಕೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ನೀವು ಬೆಂಗಳೂರು ಬಿಟ್ಟು ತೊಲಗಿ ಎಂದು ಸಾಕಷ್ಟು ಮಂದಿ ಹೇಳಿದ್ದರು. ಕರ್ನಾಟಕದ ಬಗ್ಗೆ ಮಾತನಾಡಿದ್ದ ಸುಗಂಧ ಶರ್ಮ ವಿರುದ್ದ ದೊಡ್ಡ ಮಟ್ಟದ ಆಕ್ರೋಶ ವ್ಯಕ್ತವಾಗಿತ್ತು.
ಇದೀಗ ಆಕೆ ಕೆಲಸ ಮಾಡುತ್ತಿದ್ದ ಕಂಪನಿ ಕೂಡ ಎಚ್ಚೆತ್ತುಕೊಂಡಿದೆ. ವಿಡಿಯೋ ವೈರಲ್ ಆಗ್ತಿದ್ದಂತೆ ಸುಗಂಧ ಶರ್ಮರನ್ನ ಕಂಪನಿ ಕೆಲಸದಿಂದ ತೆಗೆದುಹಾಕಿದೆ. ಫ್ರೀಡಂ ಕಂಪನಿಯಲ್ಲಿ ಸುಗಂಧ ಶರ್ಮ ಕೆಲಸ ಮಾಡುತ್ತಿದ್ದರು. ಸದ್ಯ ಮಹಿಳೆಯನ್ನ ಫ್ರೀಡಂ ಕಂಪನಿ ಟರ್ಮಿನೇಟ್ ಮಾಡಿದೆ. ಫ್ರೀಡಂ ಕಂಪನಿಗೆ ತೆರಳಿ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಇದರ ಮಾಹಿತಿ ಪಡೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ಆಕೆ ಬೇರೆ ಯಾವುದೇ ಕಂಪನಿಯಲ್ಲಿ ಕೆಲಸ ನಿರ್ವಹಿಸಿದರೂ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಯಾವಾಗ ಕನ್ನಡಿಗರು ಸಿಡಿದೆದ್ದರೊ ಆಗ ಮೆತ್ತಗಾಗಿ ಸುಗಂಧ್ ಶರ್ಮ ಮತ್ತೆ ಎರಡು ದಿನ ಬಳಿಕ ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ ಮಾಡಿ ನನಗೆ ಬೆಂಗಳೂರು ಅಂದರೆ ತುಂಬಾ ಇಷ್ಟ. ನಾನು ಟ್ರಾವೆಲರ್ ಆಗಿದ್ದು ಆಗಾಗ ಎಲ್ಲ ಊರುಗಳನ್ನು ಸುತ್ತುತ್ತಿರುತ್ತೇನೆ. ಹಾಗಾಗಿ ಉತ್ತರ ಭಾರತ, ದಕ್ಷಿಣ ಭಾರತ ಎಂಬ ಯಾವುದೇ ಭೇದ ಭಾವ ಇಲ್ಲ. ನನಗೆ ಬೆಂಗಳೂರು ಅಂದರೆ ತುಂಬಾ ಇಷ್ಟ ಎಂದು ಹೇಳಿ ಬೆಣ್ಣೆ ಸವರುವ ಕೆಲಸ ಮಾಡಿದ್ದಾಳೆ.