
ಚಿತ್ರದುರ್ಗ ಸೆ. 23: ಸಾಹಿತಿಗಳು, ಕ್ರೀಡಾಪಟುಗಳು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಾದ ಶ್ರೀಮತಿ ಎಂ.ಸುಷ್ಮಾರಾಣಿರವರಿಗೆ ಕನ್ನಡಾಂಬೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘದವತಿಯಿಂದ ನೀಡುವಂತ ಭಾರತ ಸೇವಾ ರತ್ನ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಸೆ. 21 ರಂದು ಮೈಸೂರಿನ ವಿಜಯನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಪ್ರಧಾನ ಮಾಡಲಾಯಿತು.
ಪಂಪ ಪ್ರಶಸ್ತಿ ಪುರಸ್ಕೃತರಾದ ಸಾಹಿತಿ ಸಿ.ಪಿ.ಕೆ.ರವರು ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ ನಾಡಿನ ಹೆಸರಾಂತ
ಸ್ವಾಮಿಗಳು, ಸಾಹಿತಿಗಳು, ವಿವಿಧ ಕ್ಷೇತ್ರದ ಬಹುಮುಖ ಗಣ್ಯರು ಭಾಗವಹಿಸಿದ್ದರು.
