ಚಿತ್ರದುರ್ಗ| ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು “ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.”


9ನೇ ತರಗತಿಯ ವಿದ್ಯಾರ್ಥಿಗಳಾದ ಜಾಗೃತ್ ಟಿ ಮತ್ತು ಹರ್ಷವರ್ಧನ್, ಧನುಷ್ ಮತ್ತು ಅನಿರುಧ್ ವಿ ಸಜ್ಜನ್ ತಂಡಗಳು ಭಾಗವಹಿಸಿ, ತಾಲ್ಲೂಕು ಮಟ್ಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ನಂತರ ಚಿತ್ರದುರ್ಗ ಡಯಟ್‌ನಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿ ಜಾಗೃತ್ ಟಿ ಮತ್ತು ಹರ್ಷವರ್ಧನ್ ಇಂಜಿನಿಯರಿಂಗ್ ವಿಭಾಗದಲ್ಲಿ ತಯಾರಿಸಿದ್ದ “ಆಧುನಿಕ ಎತ್ತಿನ ಬಂಡಿ ಮಾದರಿಗೆ’ ಮೆಚ್ಚುಗೆ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮಾರ್ಗದರ್ಶಿ ಶಿಕ್ಷಕರು ಆಶಾ.ಸಿ.ಹೆಚ್.ಎಂ (ವಿಜ್ಞಾನ ಸಹಶಿಕ್ಷಕರು)ಹಾಗೂ
ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ಈ ವಿದ್ಯಾರ್ಥಿಗಳಿಗೆ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ.ಬಿ.ವಿಜಯ್ ಕುಮಾರ್, ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಸುನಿತಾ.ಪಿ.ಸಿ ಮತ್ತು ಶ್ರೀ.ಎಸ್.ಎಂ ಪೃಥ್ವೀಶ್, ಮುಖ್ಯ ಶಿಕ್ಷಕರಾದ ತಿಪ್ಪೇಸ್ವಾಮಿ.ಎನ್.ಜಿ ,ಐಸಿಎಸ್‌ಇ ಪ್ರಾಂಶುಪಾಲರಾದ ಬಸವರಾಜಯ್ಯ.ಪಿ, ಐಸಿಎಸ್‌ಇ ಉಪಪ್ರಾಂಶುಪಾಲರಾದ ಅವಿನಾಶ್ ಬಿ, ಹಾಗೂ ಎಲ್ಲಾ ಶಿಕ್ಷಕ/ಶಿಕ್ಷಕೇತರ ವೃಂದದವರು ಶ್ಲಾಘಸಿ ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *