ಹೊಳಲ್ಕೆರೆ: ರೈಲು ಡಿಕ್ಕಿಯಾಗಿ ಯುವಕ ಸಾವು

ಚಿತ್ರದುರ್ಗ, ಸೆಪ್ಟೆಂಬರ್‌, 25: ಇತ್ತೀಚೆಗೆ ಅಪಘಾತ ಪ್ರಕರಣಗಳು ಮತ್ತೆ ಹೆಚ್ಚಾಗಿವೆ. ಇದರ ನಡುವೆಯೇ ಇದೀಗ ಗಣೇಶ ಮೂರ್ತಿ ವಿಸರ್ಜನೆ ಮಾಡಿ, ವಾಪಸ್ ಬರುತ್ತಿದ್ದಾಗ ರೈಲು ಡಿಕ್ಕಿಯಾಗಿ ಯುವಕ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಂದವಾಡಿ ಸಮೀಪದಲ್ಲಿ ಈ ಘಟನೆ ಜರುಗಿದೆ. ಮೃತ ಯುವಕನನ್ನ 24 ವರ್ಷದ ತಿಪ್ಪೇಸ್ವಾಮಿ ಎಂದು ಗುರುತಿಸಲಾಗಿದೆ.

ಗಣೇಶನ ವಿಸರ್ಜನೆ ಮುಗಿಸಿ, ವಾಪಸ್ ಮನೆಗೆ ತೆರಳುತ್ತಿದ್ದ ವೇಳೆ ರೈಲ್ವೆ ಹಳಿ ದಾಟುವ ಸಂದರ್ಭದಲ್ಲಿ ಈ ದುರಂತ ನಡೆದಿದೆ. ಇನ್ನು ಸ್ಥಳಕ್ಕೆ ರೈಲ್ವೆ ಪೊಲೀಸರು ಹಾಗೂ ಚಿಕ್ಕಜಾಜೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.

Source : https://kannada.oneindia.com/news/chitradurga/a-young-man-death-due-to-train-hit-near-holalkere-taluk-377215.html

Leave a Reply

Your email address will not be published. Required fields are marked *