ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದವತಿಯಿಂದ ಅನಿರ್ಧಿಷ್ಠಾವದಿಯ ಮುಷ್ಕರ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಸೆ. 26 ಗ್ರಾಮ ಆಡಳಿತಾಧಿಕಾರಿಗಳಿಂದ ಕೆಲಸ ಬಹಿಷ್ಕರಿಸಿ ವಿವಿಧ ಬೇಡಿಕೆ, ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಸರ್ಕಾರಕ್ಕೆ ಆಗ್ರಹಿಸಿ ಇಂದಿನಿಂದ ರಾಜ್ಯಾದ್ಯಾದಂತ್ಯ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದವತಿಯಿಂದ ಅನಿರ್ಧಿಷ್ಠಾವದಿಯ ಮುಷ್ಕರವನ್ನು
ನಗರದ ತಹಶೀಲ್ದಾರ್ ರವರ ಕಚೇರಿ ಮುಂದೆ ಆರಂಭಿಸಿದ್ದಾರೆ.

ಕ್ಷೇತ್ರಗಳಲ್ಲಿ ನಿರಂತರವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳಿಗೆ ಯಾವುದೇ ರೀತಿಯ ಮೂಲಭೂತ ಸೌಲಭ್ಯ
ಇಲ್ಲದೆ ಕಾರ್ಯ ನಿರ್ವಹಿಸುತ್ತಿದ್ದಾರೆ, ಕೆಲಸದ ಒತ್ತಡವು ಹೆಚ್ಚಾಗಿದ್ದು ಸರ್ಕಾರದಿಂದ ಯಾವುದೇ ಸೌಲಭ್ಯಗಳು ದೊರೆತಿಲ್ಲ.ಕೆಲಸದ
ಒತ್ತಡದಿಂದ ಕಾರ್ಯನಿರ್ವಹಿಸಲು ಆಗದೆ ಅಧಿಕಾರಿಗಳು ಸಾವು ನೋವು ಉಂಟಾಗಿದೆ. ಬೆಳಿಗ್ಗೆ 6 ಗಂಟೆಯಿಂದ ಸಂಜೆ 8 ಗಂಟೆಯವರೆಗೆ
ಕೆಲಸ ನಿರ್ವಹಿಸುತ್ತಿದ್ದು, ನಮಗೆ ಸರ್ಕಾರ ಯಾವುದೇ ರೀತಿಯ ಸೌಲಭ್ಯ ನೀಡುತ್ತಿಲ್ಲ ಆದ್ದರಿಂದ ಮುಷ್ಕರ ಕೈಗೊಳ್ಳಲಾಗಿದೆ. ಗ್ರಾಮ
ಆಡಳಿತ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ಬಗೆಯ ಮೊಬೈಲ್ ಆಪ್‍ಗಳನ್ನು ಇಂದಿನಿಂದ ಸ್ಥಗಿತಗೊಳಿಸಲಾಗುವುದು ಎಂದು
ಜಿಲ್ಲಾಧ್ಯಕ್ಷರಾದ ಮಾಲತೇಶ್ ಮುದ್ದಜ್ಜಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದವತಿಯಿಂದ ಇಂದಿನಿಂದ ರಾಜ್ಯದ್ಯಂತ ಕೆಲಸ ಬಹಿಷ್ಕರಿಸಿ ಮುಷ್ಕರ ನಡೆಸಲು
ಸೆ. 22ರಂದು ನಡೆದ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ತೀರ್ಮಾನದಂತೆ ಇಂದಿನಿಂದ ತಾಲೂಕಿನ ಎಲ್ಲಾ ತಾಲೂಕು ಕಚೇರಿಗಳು ಮತ್ತು
ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ. ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ
ಹುದ್ದೆಗಳಿಗೆ ನೀಡುವ ವೇತನಶ್ರೇಣಿ ನಿಗದಿಪಡಿಸಿ ಆದೇಶ ನೀಡ ಬೇಕು, ಕಂದಾಯ ಇಲಾಖೆಯಿಂದ ನಿರಂತರವಾಗಿ ಸರ್ಕಾರದಿಂದ
ಅಭಿವೃದ್ಧಿಪಡಿಸಿರುವ ಎಲ್ಲಾ ವೆಬ್/ಮೊಬೈಲ್ ತಂತ್ರಾಂಶಗಳಿಗೂ ಅಭಿವೃದ್ಧಿಪಡಿಸಿರುವ ಮೊಬೈಲ್/ವೆಬ್ ತಂತ್ರಾಂಶಗಳ ಮೂಲಕ
ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹಾಗೂ ಸಿ-ವೃಂದ ನೌಕರರ ಹತ್ತು ಪಟ್ಟು ಕೆಲಸಗಳ ಜವಾಬ್ದಾರಿಯನ್ನು ವಹಿಸುತ್ತಿರುವುದರಿಂದ
ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿಯನ್ನು ನೀಡಬೇಕು, ಕೆಲಸ ನಿರ್ವಹಿಸಲು
ಅಗತ್ಯವಾದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಛೇರಿಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ ಮತ್ತು ಅಲೈರಾ
ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್ (12ಜಿಬಿ/256ಜಿಬಿ), ಸಿಯುಜಿ ಸಿಮ್ ಮತ್ತು ಡೇಟಾಗೂಗಲ್ ಕ್ರೋಮ್ ಬುಕ್/ ಲ್ಯಾಪ್
ಟಾಪ್ ಪ್ರಿಂಟರ್ ಮತ್ತು ಸ್ಕ್ಯಾನರ್ ಮೂಲಭೂತ ಸೌಲಭ್ಯಗಳನ್ನು ಕಲ್ಪಸುವಂತೆ ಆಗ್ರಹಿಸಲಾಯಿತು.

ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಮೊಬೈಲ್ ತಂತ್ರಾಂಶಗಳ ಕೆಲಸದ ವಿಚಾರವಾಗಿ ಇದುವರೆಗೂ ಆಗಿರುವ ಎಲ್ಲಾ
ಅಮಾನತ್ತುಗಳನ್ನು ತಕ್ಷಣವೇ ರದ್ದುಪಡಿಸಿ ಹಿಂಪಡೆಯ ಬೇಕು, ಕೆ.ಸಿ.ಎಸ್.ಆರ್ ನಿಯಮಾವಳಿಗಳಂತೆ ಸರ್ಕಾರಿ ರಜಾ ದಿನಗಳಲ್ಲಿ
ಕರ್ತವ್ಯಕ್ಕೆ ಮೆಮೋ ಹಾಕದಿರಲು, ಹಾಗೂ ಮೆಮೋ ಹಾಕುವ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ಜರುಗಿಸುವಂತೆ ಸೂಕ್ತ ಆದೇಶ
ನೀಡಬೇಕು, ಕರ್ನಾಟಕ ಉಚ್ಚನ್ಯಾಯಾಲಯದ ರಿಟ್ ಪಿಟಿಷನ್ ಸಂಖ್ಯೆ: 329/23 ರ ಅಂತಿಮ ತೀರ್ಪಿಗೆ ಒಳಪಡಿಸಿ ರಾಜ್ಯಾದ್ಯಂತ ಎಲ್ಲಾ
ಜಿಲ್ಲೆಗಳಲ್ಲಿ ಖಾಲಿ ಇರುವ ಪ್ರ.ದ.ಸ/ರಾ.ನಿ ಹುದ್ದೆಗಳಿಗೆ ತಕ್ಷಣವೇ ಪದೊನ್ನತಿ ನೀಡಲು ಕ್ರಮವಹಿಸುವುದು. ಅಂತರ್ ಜಿಲ್ಲಾ ಪತಿ-ಪತ್ನಿ
ಪ್ರಕರಣಗಳ ವರ್ಗಾವಣೆಯ ಚಾಲನೆ ನೀಡಿ ಅಂತಿಮ ಆದೇಶಕ್ಕಾಗಿ ಬಾಕಿ ಇರುವ ಪ್ರಕರಣಗಳ ವರ್ಗಾವಣೆ ಆದೇಶ ನೀಡಬೇಕು,ಅಂತರ್
ಜಿಲ್ಲಾ ವರ್ಗಾವಣೆಯ ಕೆ.ಸಿ.ಎಸ್.ಆರ್ ನಿಯಮ 16ಎ ರ ಉಪಖಂಡ(2)ನ್ನು ಮರುಸ್ಥಾಪಿಸ ಬೇಕು, ಕೆಲವು ವಿಶೇಷ ಚೇತನ, ತೀವ್ರ

ಅನಿವಾರ್ಯ ಹಾಗೂ ಆರೋಗ್ಯದ ಸಮಸ್ಯೆ ಇರುವ ಪ್ರಕರಣಗಳ ನಿಯೋಜನೆಗಳನ್ನು ಕೌನ್ಸಿಲಿಂಗ್ ಮೂಲಕ ನಿಯೋಜನೆ ಆದೇಶಗಳನ್ನು
ಮಾಡುವಂತೆ ಸರ್ಕಾರವನ್ನು ಒತ್ತಾಯಿಸಲಾಯಿತು

ಕೆಲಸದ ಅವಧಿಯ ಮುನ್ನ ಹಾಗೂ ಕೆಲಸದ ಮುಕ್ತಾಯದ ನಂತರ ನಡೆಸಲಾಗುವ ಎಲ್ಲಾ ಬಗೆಯ ವರ್ಚುವಲ್ ಸಭೆಗಳನ್ನು ಕಡ್ಡಾಯವಾಗಿ
ನಿಷೇಧಿಸ ಬೇಕು, ಕಂದಾಯ ಇಲಾಖೆಯ 3 ವರ್ಷಗಳ ಸೇವೆಯನ್ನು ಪರಿಗಣಿಸಿ ಅಂತರ್ ಜಿಲ್ಲಾ ವರ್ಗಾವಣೆಗಾಗಿ ಕಂದಾಯ ಇಲಾಖೆಯಲ್ಲಿ
ಹೊಸ ಮಾರ್ಗಸೂಚಿಯನ್ನು ರಚಿಸಬೇಕು ದಿನನಿತ್ಯ ಸಾರ್ವಜನಿಕ ವಲಯದಲ್ಲಿ ನೂರಾರು ಸೇವೆಗಳನ್ನು ನೀಡುವಾಗ ಮಾರಣಾಂತಿಕ
ದೈಹಿಕ ಹಲ್ಲೆ, ಕೊಲೆ ಪ್ರಕರಣಗಳು ಈಗಾಗಲೇ ನಿರಂತರವಾಗಿ ನಡೆಯುತ್ತಿದ್ದು, ಅರಣ್ಯ ಇಲಾಖೆ ಹಾಗೂ ಪೋಲಿಸ್ ಇಲಾಖೆಯಲ್ಲಿರುವಂತೆ
3000/- ರೂಗಳನ್ನು ಆಪತ್ತಿನ ಭತ್ಯೆ ಪ್ರಯಾಣ ಭತ್ಯೆ ದರವನ್ನು 500/- ರೂಗಳಿಂದ 3000/- ರೂಗಳಿಗೆ ಹೆಚ್ಚುವರಿ ಮಾಡಬೇಕು, ಮನೆ
ಹಾನಿ ಪ್ರಕರಣಗಳ ಜವಾಬ್ದಾರಿಯಿಂದ ಗ್ರಾಮ ಆಡಳಿತ ಅಧಿಕಾರಿಗಳನ್ನು ಕೈಬಿಡುವಂತೆ ಆಗ್ರಹಿಸಲಾಯಿತು.

ದತ್ತರ್ ಹಾಗೂ ಜಮಾಬಂದಿಯನ್ನು ರದ್ದುಪಡಿಸಬೇಕು, ಅನ್ಯ ಇಲಾಖೆಯ ಕೆಲಸ ನಿರ್ವಹಿಸದಂತೆ ಸೂಕ್ತ ಆದೇಶ ನೀಡುಬೇಕು,ಹಾಲಿ
ಇರುವ ಬ್ಯಾಂಕಿಂಗ್ ವ್ಯವಸ್ಥೆಯನ್ನು ರದ್ದುಪಡಿಸಬೇಕು ಮ್ಯುಟೇಷನ್ ಅವಧಿ ದಿನವನ್ನು ವಿಸ್ತರಣೆ ಮಾಡಬೇಕು ರಾಜ್ಯದ ಗ್ರಾಮ
ಸಹಾಯಕರಿಗೆ ಸೇವಾಭದ್ರತೆಯನ್ನು ಒದಗಿಸುವಂತೆ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ಪಾಂಡುರಂಗಪ್ಪ, ಕಂದಾಯ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಸಿದ್ದೇಶ್, ತಾಲ್ಲೂಕು ಅಧ್ಯಕ್ಷ
ಸಂಪತ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮದ್ ಇರ್ಫಾನ್, ಉಪಾಧ್ಯಕ್ಷರಾದ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ
ರಾಘವೇಂದ್ರ ವಡೇರ್ ಖಂಜಾಚಿ ಸುರೇಶ್ ಸೇರಿದಂತೆ ಗ್ರಾಮ ಆಡಳಿತ ಅಧಿಕಾರಿಗಳು ಧರಣಿಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *