India vs Bangladesh 1st T20I Highlights in kannada: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಗ್ವಾಲಿಯರ್ನಲ್ಲಿ ನಡೆಯಿತು. ಈ ಪಂದ್ಯವನ್ನು ಭಾರತ 7 ವಿಕೆಟ್ಗಳಿಂದ ಗೆದ್ದುಕೊಂಡಿದೆ. ಟೀಂ ಇಂಡಿಯಾ 3 ವಿಕೆಟ್ ಕಳೆದುಕೊಂಡು 11.5 ಓವರ್ಗಳಲ್ಲಿ 128 ರನ್ ಕಲೆ ಹಾಕಿ ಗೆಲುವಿನ ನಗೆಬೀರಿತು.
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಗ್ವಾಲಿಯರ್ನಲ್ಲಿ ನಡೆಯಿತು. ಈ ಪಂದ್ಯವನ್ನು ಭಾರತ 7 ವಿಕೆಟ್ಗಳಿಂದ ಗೆದ್ದುಕೊಂಡಿದೆ. ಟೀಂ ಇಂಡಿಯಾ 3 ವಿಕೆಟ್ ಕಳೆದುಕೊಂಡು 11.5 ಓವರ್ಗಳಲ್ಲಿ 128 ರನ್ ಕಲೆ ಹಾಕಿ ಗೆಲುವಿನ ನಗೆಬೀರಿತು. ಟೀಂ ಇಂಡಿಯಾ ಪರ ಹಾರ್ದಿಕ್ ಪಾಂಡ್ಯ 16 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್ಗಳ ಸಹಿತ 39 ರನ್ ಸಿಡಿಸಿದರು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡ 127 ರನ್ಗಳಿಗೆ ಕುಸಿದಿತ್ತು. ಬಾಂಗ್ಲಾದೇಶ ಪರ ಮೆಹದಿ ಹಸನ್ ಮಿರಾಜ್ 35 ರನ್ ಗಳಿಸಿ ಗರಿಷ್ಠ ರನ್ ಕಲೆಹಾಕಿದ್ದರು.
ಭಾರತಕ್ಕೆ ಸುಲಭ ಜಯ
ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಅದ್ಭುತ ಬ್ಯಾಟಿಂಗ್ನಿಂದ ಭಾರತ ತಂಡವು ಗ್ವಾಲಿಯರ್ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಏಳು ವಿಕೆಟ್ಗಳಿಂದ ಸೋಲಿಸಿ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.