Bangalore Rains: ಕಳೆದ ನಾಲ್ಕೈದು ದಿನಗಳಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಹಲವು ಏರಿಯಾಗಳಲ್ಲಿ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಮರ ಬಿದ್ದು, ಮ್ಯಾನ್ ಹೋಲ್ ಓಪನ್ ಆಗಿ ಅವಾಂತರಳು ಸೃಷ್ಟಿಯಾಗಿವೆ. ಇಷ್ಟಾದರೂ ಸಹ ಮುಂದಿನ ಮೂರ್ನಾಲ್ಕು ದಿನ ಸಹ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿಸಲಾಗಿದೆ.
ಬೆಂಗಳೂರು, (ಅಕ್ಟೋಬರ್ 22): ಸತತ ಮಳೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಾಳೆ(ಅಕ್ಟೋಬರ್ 23) ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಿಸಿ ಜಗದೀಶ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ನಾಳೆ(ಅಕ್ಟೋಬರ್ 23) ಆರೆಂಜ್ ಅಲರ್ಟ್ ಇರುವ ಕಾರಣ ಮುಂಜಾಗ್ರತಾ ಕ್ರಮವಾಗಿ ನಗರದ ಎಲ್ಲಾ ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಜಗದೀಶ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ನೀಡುವಂತೆ ಆದೇಶಿಸಿದ್ದು, ಶನಿವಾರ ಮಧ್ಯಾಹ್ನ ಅಥವಾ ಭಾನುವಾರ ಹೆಚ್ಚುವರಿ ತರಗತಿ ನಡೆಸಲು ಸೂಚಿಸದ್ದಾರೆ.
ಬೆಂಗಳೂರಿನ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗೀ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದ್ದು, ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಇರಲ್ಲ. ಇನ್ನು ರಜೆ ನೀಡಲಾಗಿರುವ ಶಾಲೆಗಳಿಗೆ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರ ಹೆಚ್ಚುವರಿ ತರಗತಿ ನಡೆಸಲು ಸೂಚನೆ ನೀಡಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ನಾಳೆಯೂ ಸಹ ಅರೆಂಜ್ ಅಲರ್ಟ್ ಇರುವ ಕಾರಣ ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗೀ/ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣಾರ್ಭಟ ಮುಂದುವರಿದಿದೆ. ಇಂದು (ಅಕ್ಟೋಬರ್ 22) ಸಹ ಮಧ್ಯಾಹ್ನದಿಂದ ಭಾರೀ ಮಳೆಯಾಗುತ್ತಿದ್ದು, ರಸ್ತೆಗಳು ಜಲಾವೃತವಾಗಿವೆ. ಇದರಿಂದ ಶಾಲೆಗೆ ಹೋಗಿದ್ದ ಮಕ್ಕಳು ನೀರಿನಲ್ಲೇ ನಡೆದುಕೊಂಡು ಮನೆ ಸೇರಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ನಾಳೆ ಅಂದರೆ ಅಕ್ಟೋಬರ್ 23ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮುಂದಿನ 5 ದಿನಗಳಿಗೆ ಹವಾಮಾನ ಇಲಾಖೆ ಮೂನ್ಸುಚನೆ
ಈಗಾಗಲೇ ಮಳೆರಾಯ ಸಿಲಿಕಾನ್ ಸಿಟಿ ಮಂದಿಗೆ ಬೇಸರವಾಗಿದ್ದಾನೆ. ಮಳೆ ಸಾಕಪ್ಪ ಸಾಕು ಎನ್ನುತ್ತಿದ್ದಾರೆ. ಆದರೂ ಸಹ ಮುಂದಿನ 5 ದಿನಗಳಲ್ಲಿ ಬೆಂಗಳೂರಿನಲ್ಲಿ ಸಾಧಾರಣದಿಂದ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.