ಊಟದ ಬಳಿಕ ಬಾಳೆಹಣ್ಣನ್ನು ತಿನ್ನುವುದು ಸಾಮಾನ್ಯ. ಬಾಳೆಹಣ್ಣನ್ನು ಬೆಳಿಗ್ಗೆ ತಿನ್ನುವುದರಿಂದ ಹೆಚ್ಚಿನ ಪ್ರಯೋಜನಗಳಿವೆ ಎಂದುಪೌಷ್ಟಿಕತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹಾಗಿದ್ದರೆ ಏನೆಲ್ಲ ಪ್ರಯೋಜನಗಳಿವೆ ಎಂಬುದನ್ನು ಇಲ್ಲಿ ತಿಳಿಯೋಣ.
ಮಕ್ಕಳಿಂದ ವೃದ್ಧರವರೆಗೆ ಬಹುತೇಕ ಮಂದಿ ಬಾಳೆಹಣ್ಣನ್ನು ತುಂಬಾ ಇಷ್ಟಪಡುತ್ತಾರೆ. ಬಹುತೇಕ ಮಂದಿ ಜನರು ಲಘುವಾಗಿ ಬಾಳೆಹಣ್ಣನ್ನು ಸೇವಿಸುತ್ತಾರೆ. ಊಟದ ಬಳಿಕ ಬಾಳೆಹಣ್ಣನ್ನು ತಿನ್ನುವುದು ಸಾಮಾನ್ಯ. ಅದರಲ್ಲೂ ಯಾವುದೇ ಶುಭ ಸಮಾರಂಭಗಳಲ್ಲಿ ಊಟದ ಕೊನೆಯಲ್ಲಿ ಬಾಳೆಹಣ್ಣು ಇದ್ದೇ ಇರುತ್ತದೆ. ದಿನಕ್ಕೆ ಒಂದು ಬಾಳೆಹಣ್ಣು ತಿನ್ನುವುದರಿಂದ ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಗಳಿವೆ. ಬಾಳೆಹಣ್ಣನ್ನು ದಿನದ ಯಾವುದೇ ಸಮಯದಲ್ಲಿ ತಿನ್ನಬಹುದು. ಆದರೆ, ಪೌಷ್ಟಿಕತಜ್ಞರು ಬಾಳೆಹಣ್ಣನ್ನು ಬೆಳಿಗ್ಗೆ ತಿನ್ನುವುದರಿಂದ ಹೆಚ್ಚಿನ ಪ್ರಯೋಜನಗಳಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಹಾಗಿದ್ದರೆ ಏನೆಲ್ಲ ಪ್ರಯೋಜನಗಳಿವೆ ಎಂಬುದನ್ನು ಇಲ್ಲಿ ತಿಳಿಯೋಣ.
ಬಾಳೆಹಣ್ಣು ಸೇವಿಸುವುದರ ಆರೋಗ್ಯ ಪ್ರಯೋಜನಗಳು
ವಿಟಮಿನ್ ಬಿ6: ಬಾಳೆಹಣ್ಣಿನಲ್ಲಿ ವಿಟಮಿನ್ ಬಿ6 ಇದೆ. ಇದು ಹಸಿವನ್ನು ನಿಗ್ರಹಿಸುತ್ತದೆ. ಮತ್ತು ದೇಹದಲ್ಲಿ ಸಿರೊಟೋನಿನ್ ಮತ್ತು ಡೋಪಮೈನ್ ಅನ್ನು ಉತ್ಪಾದಿಸುತ್ತದೆ. ಇದು ಹಿಮೋಗ್ಲೋಬಿನ್ ಅನ್ನು ಉತ್ಪಾದಿಸುತ್ತದೆ ಮತ್ತು ರಕ್ತಪರಿಚಲನೆಯನ್ನು ಸುಧಾರಿಸುತ್ತದೆ. ಪ್ರತಿದಿನ ಬಾಳೆಹಣ್ಣು ತಿನ್ನುವುದರಿಂದ ದೇಹಕ್ಕೆ ಬೇಕಾದ ಶಕ್ತಿಯೂ ಸಿಗುತ್ತದೆ.
ಅಜೀರ್ಣ ಸಮಸ್ಯೆಗಳು ಕಡಿಮೆಯಾಗುತ್ತವೆ: ಬಾಳೆಹಣ್ಣಿನಲ್ಲಿರುವ ಫೈಬರ್ ಕರುಳಿನ ಚಲನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಬಾಳೆಹಣ್ಣು ಪೆಕ್ಟಿನ್ ಅನ್ನು ಹೊಂದಿರುತ್ತದೆ. ಇದು ಕರಗಬಲ್ಲ ಫೈಬರ್ ಆಗಿರುವುದರಿಂದ ಜೀರ್ಣಾಂಗ ವ್ಯವಸ್ಥೆಯನ್ನು ನಿಯಂತ್ರಿಸುತ್ತದೆ. ಇದು ಕರುಳಿನ ಆರೋಗ್ಯವನ್ನೂ ಸಹ ಕಾಪಾಡುತ್ತದೆ.
ಚರ್ಮದ ಆರೋಗ್ಯ: ಬಾಳೆಹಣ್ಣಿನಲ್ಲಿರುವ ಮೆಗ್ನೀಸಿಯಮ್ ಅಂಶವು ಚರ್ಮದಲ್ಲಿ ಕಾಲಜನ್ ಉತ್ಪಾದನೆಗೆ ಸಹಾಯ ಮಾಡುತ್ತದೆ. ಇದು ನಿಮ್ಮ ಚರ್ಮವನ್ನು ಕಾಂತಿಯುತವಾಗಿ ಮತ್ತು ಆರೋಗ್ಯಕರವಾಗಿರಿಸಲು ಸಹಾಯ ಮಾಡುತ್ತದೆ. ಬೆಳಿಗ್ಗೆ ಬಾಳೆಹಣ್ಣು ತಿನ್ನುವುದರಿಂದ ತ್ವಚೆಯ ಹೊಳಪಿಗೂ ಸಹಕಾರಿಯಾಗಿದೆ.
ನೈಸರ್ಗಿಕ ಸಕ್ಕರೆ: ಬಾಳೆಹಣ್ಣಿನಲ್ಲಿರುವ ಫೈಬರ್ ಮತ್ತು ನೈಸರ್ಗಿಕ ಸಕ್ಕರೆ ದೇಹಕ್ಕೆ ಅಗತ್ಯವಿರುವ ಶಕ್ತಿಯನ್ನು ಒದಗಿಸುತ್ತದೆ. ಈ ಹಣ್ಣು ನಿಮ್ಮ ಹಸಿವನ್ನು ಹಠಾತ್ತನೆ ನಿಗ್ರಹಿಸುವುದರ ಜೊತೆಗೆ ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ ಬಾಳೆಹಣ್ಣು ತಿನ್ನುವುದು ಉತ್ತಮ.
ಸ್ನಾಯುಗಳ ಕಾರ್ಯನಿರ್ವಹಣೆಗೆ ಸಹಕಾರಿ: ಬಾಳೆಹಣ್ಣಿನಲ್ಲಿರುವ ಪೊಟ್ಯಾಸಿಯಮ್ ನಿಮಗೆ ನೋವನ್ನು ನಿವಾರಿಸುತ್ತದೆ. ಇದು ನಿಮ್ಮ ಸ್ನಾಯುಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ. ವಿಶೇಷವಾಗಿ ನಿಮ್ಮ ಬೆಳಗಿನ ತಾಲೀಮು ನಂತರ ಬಾಳೆಹಣ್ಣು ತಿನ್ನುವುದು ನಿಮ್ಮ ಸ್ನಾಯುಗಳು ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ.
ಸ್ಮರಣೆ ಸುಧಾರಿಸಲು ಸಹಕಾರಿ: ಬಾಳೆಹಣ್ಣು ತಿನ್ನುವುದರಿಂದ ದೇಹದಲ್ಲಿ ಸಿರೊಟೋನಿನ್ ಉತ್ಪತ್ತಿಯಾಗುತ್ತದೆ. ಇದು ನಿಮ್ಮ ಏಕಾಗ್ರತೆ, ಮನಸ್ಥಿತಿ ಮತ್ತು ಸ್ಮರಣೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಮೂತ್ರಪಿಂಡದ ಆರೋಗ್ಯ: ಪ್ರತಿದಿನ ಬಾಳೆಹಣ್ಣು ತಿನ್ನುವುದರಿಂದ ಕಿಡ್ನಿಯ ಆರೋಗ್ಯಕ್ಕೂ ಬಹಳ ಉತ್ತಮ. ಬಾಳೆಹಣ್ಣಿನಲ್ಲಿರುವ ಹೆಚ್ಚಿನ ಪೊಟ್ಯಾಸಿಯಮ್ ಅಂಶವು ರಕ್ತದೊತ್ತಡವನ್ನು ನಿಯಂತ್ರಿಸುವ ಮೂಲಕ ನಿಮ್ಮ ಮೂತ್ರಪಿಂಡಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.