WTC Final: ಎರಡು ಸ್ಥಾನ.. ಐದು ತಂಡಗಳು ಕಣಕ್ಕೆ.. ಯಾರಿಗೆ ಒಲಿಯಲಿದೆ ಅವಕಾಶ?

wtc final qualification scenarios Of team India: ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲನ್ನು ಅನುಭವಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಪುಣೆ ಹಾಗೂ ಮುಂಬೈನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲೂ ಟೀಂ ಇಂಡಿಯಾ 8 ವಿಕೆಟ್‌ಗಳಿಂದ ಸೋಲು ಕಂಡಿತ್ತು. ಈ ಮೂರು ಸೋಲಿನೊಂದಿಗೆ ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಣಾಹಣಿಯೂ ತಲೆಕೆಳಗಾಗಿದೆ.

ಏಕೆಂದರೆ, ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳನ್ನು ಗೆದ್ದಿದ್ದರೇ… ಟೀಂ ಇಂಡಿಯಾಗೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ನೇರವಾಗಿ ಫೈನಲ್ ಪ್ರವೇಶಿಸುವ ಅವಕಾಶವಿತ್ತು. ಆದರೆ, ಭಾರತ ತಂಡ ಡಬ್ಲ್ಯುಟಿಸಿ ಪಾಯಿಂಟ್ಸ್ ಪಟ್ಟಿಯಲ್ಲಿ ಶೇ 15.91 ಅಂಕಗಳನ್ನು ಕಳೆದುಕೊಂಡಿದೆ, ಇದುವರೆಗೆ ಆಡಿದ ಎಲ್ಲಾ ಮೂರು ಪಂದ್ಯಗಳಲ್ಲಿ ಸೋತಿದೆ. ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದೆ.

ಆದರೆ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂತಿಮ ರೇಸ್‌ನಿಂದ ಟೀಂ ಇಂಡಿಯಾ ಹೊರಗುಳಿಯದಿರುವುದು ಗಮನಾರ್ಹ. ಭಾರತ ತಂಡ ಮುಂದಿನ ಐದು ಪಂದ್ಯಗಳ ಪೈಕಿ 4ರಲ್ಲಿ ಗೆದ್ದರೆ ಫೈನಲ್ ಪ್ರವೇಶಿಸುವ ಅವಕಾಶವಿದೆ. ಇದರರ್ಥ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಸರಣಿಯನ್ನು ಭಾರತ 4-0 ಅಂತರದಿಂದ ಗೆಲ್ಲಬೇಕಾಗಿದೆ. ಈ ಮೂಲಕ ನೇರವಾಗಿ ಫೈನಲ್ ಪ್ರವೇಶಿಸಬಹುದು.

ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 1 ಅಥವಾ 2 ಪಂದ್ಯಗಳನ್ನು ಸೋತರೆ, ಫೈನಲ್ ಪ್ರವೇಶಿಸಲು ಇತರ ತಂಡಗಳ ಫಲಿತಾಂಶಕ್ಕಾಗಿ ಕಾಯಬೇಕಾಗಿದೆ. ಅಂದರೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಶ್ರೀಲಂಕಾ (55.56%), ಮೂರನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ (54.550%) ಮತ್ತು ನಾಲ್ಕನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ (54.17%) ಮುಂದಿನ ಪಂದ್ಯಗಳ ಫಲಿತಾಂಶಕ್ಕಾಗಿ ಎದುರು ನೋಡಬೇಕಾಗುತ್ತದೆ..

ಆದ್ದರಿಂದ ಭಾರತ ತಂಡ ನೇರವಾಗಿ ಫೈನಲ್ ಪ್ರವೇಶಿಸಲು ಆಸ್ಟ್ರೇಲಿಯಾ ತಂಡವನ್ನು 4-0 ಅಂತರದಿಂದ ಸೋಲಿಸಬೇಕಾಗಿದೆ. 65.79% ಅಂಕಗಳನ್ನು ಗಳಿಸುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಪ್ರವೇಶಿಸಬಹುದು. ಇದರೊಂದಿಗೆ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಸರಣಿ ಟೀಂ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ.

Source : https://zeenews.india.com/kannada/sports/wtc-final-qualification-scenarios-of-team-india-after-ind-vs-nz-test-series-258132

Leave a Reply

Your email address will not be published. Required fields are marked *