Ration Card: ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಕೂಡ ಒಂದಾಗಿದೆ. ಇಷ್ಟು ದಿನ ಸರ್ವಸ್ ಸಮಸ್ಯೆ ಕಾರಣ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಸಾಧ್ಯವಿರಲಿರಲಿಲ್ಲ. ಆದರೆ ಇದೀಗ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮತ್ತೆ ಅರ್ಜಿ ಸಲ್ಲಿಕೆ ಕಾರ್ಯವನ್ನು ಆರಂಭಿಸಲಾಗಿದೆ.
ಹಾಗಾದರೆ ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖಲೆಗಳು ಬೇಕು ಹಾಗೂ ವಿಧಾನಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಬಿಪಿಎಲ್ ಕಾರ್ಡ್ ಹೊಂದಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ನಿಯಮ ಜಾರಿ ಮಾಡಲಾಗಿದ್ದು, ಈಗಾಗಲೇ ನಕಲಿ ದಾಖಲೆ ಸೃಷ್ಟಿಸಿ ಪಡೆದ ಅನೇಕರ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲಾಗಿದೆ. ಇದೀಹ ಇದರ ಬೆನ್ನಲ್ಲೇ ಅರ್ಹರಿಂದ ಹೊಸದಾಗಿ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ಸರ್ಕಾರ ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ಗುಡ್ ನ್ಯೂಸ್ ನೀಡಿದೆ.
ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?: ಕರ್ನಾಟಕದ ಎಲ್ಲಾ ಖಾಯಂ ನಿವಾಸಿಗಳು ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಬಹುದು. ಮಾನದಂಡಗಳಿಗೆ ಅನುಸಾರವಾಗಿ ಎಪಿಎಲ್ ಅಥವಾ ಬಿಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಮಾಡಹುದಾಗಿದೆ. ಕರ್ನಾಟಕದ ನಿವಾಸಿಗಳು ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಆಹಾರ ಇಲಾಖೆಯ ಕಚೇರಿಗೇ ಹೋಗಬೇಕೆಂದಿಲ್ಲ.
ಬದಲಾಗಿ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. Ahara.kar.nic.in ವೆಬ್‌ಸೈಟ್‌ನಲ್ಲಿ ಅರ್ಹ ಫಲಾನುಭವಿಗಳು ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ ಇ-ಪಡಿತರ ಚೀಟಿ ಪಡೆದುಕೊಳ್ಳಬಹುದು ಮತ್ತು ನಿಮ್ಮ ಪಡಿತರ ಚೀಟಿಯ ಸ್ಥಿತಿ-ಗತಿಯನ್ನು ಪರಿಶೀಲನೆ ಮಾಡಬಹುದಾಗಿದೆ.
ಬೇಕಾಗುವ ದಾಖಲೆಗಳು
* ಆಧಾರ್ ಕಾರ್ಡ್
* ಇ-ಮೇಲ್ ಐಡಿ
* ಮೊಬೈಲ್ ಸಂಖ್ಯೆ
* ವಿದ್ಯುತ್ ಬಿಲ್
* ಪ್ಯಾನ್ ಕಾರ್ಡ್
ಇಲ್ಲಿ ನೀಡಲಾಗಿರುವ ದಾಖಲೆಗಳೊಂದಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿ ಸಲ್ಲಿಸಿದ 15 ದಿನಗಳ ಬಳಿಕ ನಿಮ್ಮ ಪಡಿತರ ಚೀಟಿಯನ್ನು ನೀಡಲಾಗುತ್ತದೆ. ಇದಕ್ಕೆ 100 ರೂಪಾಯಿ ಶುಲ್ಕ ಪಾವತಿಸಿ ಪಡೆಯಬಹುದಾಗಿದೆ. ಒಂದು ವೇಳೆ ಪಡಿತರ ಚೀಟಿ ಕುರಿತ ಯಾವುದೇ ಗೊಂದಲಗಳಿದ್ದರೆ, ನೀವು ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್ 18004259339 ಅಥವಾ ಸಹಾಯವಾಣಿ 1967ಗೆ ಕರೆ ಮಾಹಿರಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ. ಇನ್ನು ಬೆಳಗ್ಗೆ 10 ಗಂಟೆಯಿಂದ ಸಂಜೆ 5:30ರ ವರಗೂ ಈ ನಂಬರ್‌ಗಳಿಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಆಹಾರ ಇಲಾಖೆ ತಿಳಿಸಿದೆ.