ಸೌತ್ ಆಫ್ರಿಕಾ ವಿರುದ್ಧದ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ಲೇಯಿಂಗ್ 11

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟಿ20 ಸರಣಿಯು ನಾಳೆಯಿಂದ (ನ.8) ಶುರುವಾಗಲಿದೆ. ಡರ್ಬನ್​ನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪಡೆಯನ್ನೇ ರೂಪಿಸಲಿದೆ. ಅದರಂತೆ ಭಾರತ ತಂಡದ ಪರ ಆರಂಭಿಕರಾಗಿ ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ಕಣಕ್ಕಿಳಿಯುವುದು ಖಚಿತ.

ಏಕೆಂದರೆ ಭಾರತ ತಂಡದ ಖಾಯಂ ಓಪನರ್​ಗಳಾದ ಯಶಸ್ವಿ ಜೈಸ್ವಾಲ್ ಹಾಗೂ ಶುಭ್​​ಮನ್ ಗಿಲ್ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗಾಗಿ ಸಜ್ಜಾಗುತ್ತಿದ್ದು, ಹೀಗಾಗಿ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ.

ಇನ್ನು ಮೂರನೇ ಕ್ರಮಾಂಕದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಎಡಗೈ ದಾಂಡಿಗ ತಿಲಕ್ ವರ್ಮಾ ಬ್ಯಾಟ್ ಬೀಸಲಿದ್ದಾರೆ.

ಐದನೇ ಕ್ರಮಾಂಕದಲ್ಲಿ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಕಣಕ್ಕಿಳಿಯಲಿದ್ದು, ಆರನೇ ಕ್ರಮಾಂಕವು ರಿಂಕು ಸಿಂಗ್ ಪಾಲಾಗಲಿದೆ. ಹಾಗೆಯೇ ಏಳನೇ ಕ್ರಮಾಂಕದಲ್ಲಿ ಸ್ಪಿನ್ ಆಲ್​ರೌಂಡರ್ ಆಗಿ ಅಕ್ಷರ್ ಪಟೇಲ್​ಗೆ ಚಾನ್ಸ್ ಸಿಗಲಿದೆ.

ಇನ್ನು ಬೌಲರ್​ಗಳಾಗಿ ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಯಶ್ ದಯಾಳ್ ಹಾಗೂ ಅವೇಶ್ ಖಾನ್ ತಂಡದಲ್ಲಿ ಸ್ಥಾನ ಪಡೆದಯಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  1. ಅಭಿಷೇಕ್ ಶರ್ಮಾ
  2. ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್)
  3. ಸೂರ್ಯಕುಮಾರ್ ಯಾದವ್ (ನಾಯಕ)
  4. ತಿಲಕ್ ವರ್ಮಾ
  5. ಹಾರ್ದಿಕ್ ಪಾಂಡ್ಯ
  6. ರಿಂಕು ಸಿಂಗ್
  7. ಅಕ್ಷರ್ ಪಟೇಲ್
  8. ಅರ್ಷದೀಪ್ ಸಿಂಗ್
  9. ವರುಣ್ ಚಕ್ರವರ್ತಿ
  10. ಯಶ್ ದಯಾಳ್
  11. ಅವೇಶ್ ಖಾನ್

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ , ಅಕ್ಷರ್ ಪಟೇಲ್, ರಮಣ್​ದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್ , ಅರ್ಷದೀಪ್ ಸಿಂಗ್, ವಿಜಯಕುಮಾರ್ ವೈಶಾಕ್, ಅವೇಶ್ ಖಾನ್, ಯಶ್ ದಯಾಳ್.

ಭಾರತ ಮತ್ತು ಸೌತ್ ಆಫ್ರಿಕಾ ಟಿ20 ಸರಣಿ ವೇಳಾಪಟ್ಟಿ:

ತಂಡಗಳುದಿನಾಂಕಸಮಯಸ್ಥಳ
1ನೇ ಟಿ20, ಸೌತ್ ಆಫ್ರಿಕಾ vs ಭಾರತಶುಕ್ರವಾರ, 8 ನವೆಂಬರ್ 20248:30 PMಡರ್ಬನ್
2ನೇ ಟಿ20, ಸೌತ್ ಆಫ್ರಿಕಾ vs ಭಾರತಭಾನುವಾರ, 10 ನವೆಂಬರ್ 20248:30 PMಗ್ಕೆಬರ್ಹಾ
3ನೇ ಟಿ20, ಸೌತ್ ಆಫ್ರಿಕಾ vs ಭಾರತಬುಧವಾರ, 13 ನವೆಂಬರ್ 20248:30 PMಸೆಂಚುರಿಯನ್
4ನೇ ಟಿ20, ಸೌತ್ ಆಫ್ರಿಕಾ vs ಭಾರತಶುಕ್ರವಾರ, 15 ನವೆಂಬರ್ 20248:30 PMಜೋಹಾನ್ಸ್‌ಬರ್ಗ್

Source : https://tv9kannada.com/sports/cricket-news/india-playing-11-vs-south-africa-1st-t20i-cricket-news-in-kannada-zp-930760.html

Leave a Reply

Your email address will not be published. Required fields are marked *