2025ನೇ ಸಾಲಿನ SSLC, IIPUC ಪರೀಕ್ಷೆಯ ವಿಷಯವಾರು ತಾತ್ಕಾಲಿಕ ವೇಳಾಪಟ್ಟಿ ಪ್ರಕಟ.

ಹೈಲೈಟ್ಸ್‌:

  • ಎಸ್‌ಎಸ್‌ಎಲ್‌ಸಿ, ಪಿಯುಸಿ 2025 ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ.
  • ತಾತ್ಕಾಲಿಕ ವೇಳಾಪಟ್ಟಿ ಇದಾಗಿದ್ದು, ಆಕ್ಷೇಪಣೆ ಸಲ್ಲಿಸಬಹುದು.
  • ವಿಷಯವಾರು ವೇಳಾಪಟ್ಟಿ ಇಲ್ಲಿದೆ ನೋಡಿ.

2024-25ನೇ ಸಾಲಿನ ಕರ್ನಾಟಕ ರಾಜ್ಯ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಯನ್ನು ಇದೀಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಬಿಡುಗಡೆ ಮಾಡಿದೆ. ವಿಷಯವಾರು ತಾತ್ಕಾಲಿಕ ವೇಳಾಪಟ್ಟಿ ಇದಾಗಿದ್ದು, ಮಂಡಲಿಯ ಜಾಲತಾಣದಲ್ಲಿ ದಿನಾಂಕ 02-12-2024 ರಂದು ಪ್ರಕಟಿಸಲಾಗಿದೆ.

ರಾಜ್ಯದ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ತಮ್ಮ ಶಾಲಾ/ಕಾಲೇಜುಗಳ ಪ್ರಕಟಣಾ ಫಲಕ ದಲ್ಲಿ ಈ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ಮಂಡಳಿ ತಿಳಿಸಿದೆ.

2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ತಾತ್ಕಾಲಿಕ ವೇಳಾಪಟ್ಟಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ವಿಷಯವಾರು ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ ಮಾರ್ಚ್‌ 20ರಿಂದ ಏಪ್ರಿಲ್ 02 ರವರೆಗೆ ಪರೀಕ್ಷೆ ನಡೆಸಲಾಗುತ್ತದೆ.

20-03-2025ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ (ಪ್ರಥಮ ಭಾಷೆ).
22-03-2025ಸಮಾಜ ವಿಜ್ಞಾನ
24-03-2025ಇಂಗ್ಲಿಷ್, ಕನ್ನಡ (ದ್ವಿತೀಯ ಭಾಷೆ)
27-03-2025ಗಣಿತ
29-03-2025ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ (ತೃತೀಯ ಭಾಷೆ).
02-04-2025ವಿಜ್ಞಾನ

ಎನ್‌ಎಸ್‌ಕ್ಯೂಎಫ್‌ ವಿಷಯಗಳು, ಜೆಟಿಎಸ್‌ ವಿಷಯಗಳು, ಇತರೆ ಕೋರ್‌ ಸಬ್ಜೆಕ್ಟ್‌ಗಳ ಪರೀಕ್ಷೆ ಬರೆಯುವವರು, ವಿಷಯವಾರು ತಾತ್ಕಾಲಿಕ ವೇಳಾಪಟ್ಟಿಗೆ ವೆಬ್‌ಸೈಟ್‌ https://kseab.karnataka.gov.in ಗೆ ಭೇಟಿ ನೀಡಬಹುದು.

2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ತಾತ್ಕಾಲಿಕ ವೇಳಾಪಟ್ಟಿ

ದ್ವಿತೀಯ ಪಿಯುಸಿ ಪರೀಕ್ಷೆ-1 ಅನ್ನು ದಿನಾಂಕ 01-03-2025 ರಿಂದ 19-03-2025 ರವರೆಗೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ.

ಕನ್ನಡ01-03-2025
ಗಣಿತಶಾಸ್ತ್ರ, ಶಿಕ್ಷಣಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ03-03-2025
ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ05-03-2025
ಇತಿಹಾಸ, ಭೌತಶಾಸ್ತ್ರ07-03-2025
ಹಿಂದಿ08-03-2025
ಐಚ್ಛಿಕ ಕನ್ನಡ, ಲೆಕ್ಕ ಶಾಸ್ತ್ರ , ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ10-03-2025
ಮೂಲ ಗಣಿತ, ಮನಃಶಾಸ್ತ್ರ, ರಸಾಯನಶಾಸ್ತ್ರ12-03-2025
ಅರ್ಥಶಾಸ್ತ್ರ13-03-2025
ಇಂಗ್ಲಿಷ್15-03-2025
ಭೂಗೋಳಶಾಸ್ತ್ರ, ಜೀವಶಾಸ್ತ್ರ17-03-2025
ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ18-03-2025
ಮಾಹಿತಿ ತಂತ್ರಜ್ಞಾನ, ರೀಟೈಲ್ ಆಟೋಮೊಬೈಲ್ , ಹೆಲ್ತ್‌ಕೇರ್ , ಬ್ಯೂಟಿ ಅಂಡ್ ವೆಲ್‌ನೆಸ್‌ , ಹಿಂದುಸ್ತಾನಿ ಸಂಗೀತ19-03-2025

ತಾತ್ಕಾಲಿಕ ವೇಳಾಪಟ್ಟಿಗೆ ಆಕ್ಷೇಪಣೆ ಆಹ್ವಾನ

ಮಂಡಲಿಯಿಂದ ಬಿಡುಗಡೆ ಮಾಡಲಾದ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಆಕ್ಷೇಪಣೆಗೆ ದಿನಾಂಕ: 02-12-2024 ರಿಂದ 16-12-2024 ರವರೆಗೆ 15 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ.

ಆಕ್ಷೇಪಣೆಯನ್ನು ಮಂಡಲಿಯ ಇಮೇಲ್ ವಿಳಾಸ: chairpersonksea@gmail.com ಕ್ಕೆ ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560 00) ಇಲ್ಲಿಗೆ ನಿಗದಿತ ಸಮಯದೊಳಗಾಗಿ ಕಳುಹಿಸುವುದು.

ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ. ನಿಗದಿತ ಸಮಯದೊಳಗಾಗಿ ಕಳುಹಿಸುವುದು.

ಈ ಮೇಲಿನ ತಾತ್ಕಾಲಿಕ ವೇಳಾಪಟ್ಟಿಗೆ ಯಾವುದೇ ರೀತಿಯ ಗಂಭೀರ ಆಕ್ಷೇಪಣೆಗಳು ಕಾರಣ ಸಹಿತ ಸ್ವೀಕೃತವಾದಲ್ಲಿ ಮಾತ್ರ ದಿನಾಂಕ ಬದಲಾವಣೆ ಸಾಧ್ಯತೆ ಇರುತ್ತದೆ. ಒಂದು ವೇಳೆ ಇತರೆ ಪರೀಕ್ಷೆಗಳ ದಿನಗಳು, ಇತರೆ ಕಾರಣಗಳು ಗಂಭೀರವಾಗಿ ಪರಿಣಾಮ ಬೀರುವುದಿಲ್ಲ ಎಂದಲ್ಲಿ ಇದೇ ದಿನಾಂಕಗಳಂದು ಪರೀಕ್ಷೆ ನಡೆಸುವ ಸಾಧ್ಯತೆ ಇರುತ್ತದೆ.

Source : https://vijaykarnataka.com/education/board-exams/news/karnataka-sslc-exam-1-and-2nd-puc-exam-1-2025-provisional-date-sheet-subjectwise-released-now/articleshow/115895577.cms

Leave a Reply

Your email address will not be published. Required fields are marked *