ಹಗಲು-ರಾತ್ರಿ ಟೆಸ್ಟ್ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಎಷ್ಟು ಗಂಟೆಗೆ ಆರಂಭ?

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಸರಣಿಯ ಎರಡನೇ ಟೆಸ್ಟ್ ಪಂದ್ಯ ನಾಳೆಯಿಂದ ಆರಂಭವಾಗಲಿದೆ. ಅಡಿಲೇಡ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಹಗಲು-ರಾತ್ರಿ ಟೆಸ್ಟ್ ಪಂದ್ಯವನ್ನು ಗುಲಾಬಿ ಬಣ್ಣದ ಚೆಂಡಿನೊಂದಿಗೆ ಆಡಲಾಗುತ್ತದೆ. ಪರ್ತ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 295 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದ ಭಾರತ ತಂಡ ಪ್ರಸ್ತುತ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ 1-0 ಮುನ್ನಡೆಯಲ್ಲಿದೆ. ತಂಡಕ್ಕೆ ಖಾಯಂ ನಾಯಕ ರೋಹಿತ್ ಶರ್ಮಾ ವಾಪಸಾಗಿದ್ದು, ಶುಭ್​ಮನ್ ಗಿಲ್ ಕೂಡ ಸಂಪೂರ್ಣ ಫಿಟ್ ಆಗಿದ್ದಾರೆ. ಹೀಗಾಗಿ ಎರಡನೇ ಟೆಸ್ಟ್ ಪಂದ್ಯಕ್ಕೆ ತಂಡದಲ್ಲಿ ಬದಲಾವಣೆಗಳಾಗುವುದು ಖಚಿತ. ಆದರೆ ಅದಕ್ಕೂ ಮುನ್ನ ಈ ಟೆಸ್ಟ್ ಭಾರತೀಯ ಕಾಲಮಾನದ ಪ್ರಕಾರ ಯಾವ ಸಮಯಕ್ಕೆ ಪ್ರಾರಂಭವಾಗುತ್ತದೆ? ಉಚಿತವಾಗಿ ವೀಕ್ಷಿಸುವುದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ.

ಪಂದ್ಯದ ಬಗ್ಗೆ ಪೂರ್ಣ ವಿವರ ಇಲ್ಲಿದೆ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಡಿಸೆಂಬರ್ 6 ರಿಂದ ಡಿಸೆಂಬರ್ 10 ರವರೆಗೆ ನಡೆಯಲಿದೆ. ಆಸ್ಟ್ರೇಲಿಯನ್ ಕಾಲಮಾನದ ಪ್ರಕಾರ, ಈ ಟೆಸ್ಟ್ ಪಂದ್ಯ ಮಧ್ಯಾಹ್ನ 2:30 ಕ್ಕೆ ಪ್ರಾರಂಭವಾಗಲಿದೆ. ಅಂದರೆ ಭಾರತೀಯ ಕಾಲಮಾನದ ಪ್ರಕಾರ, ಈ ಟೆಸ್ಟ್ ಪಂದ್ಯವು ಬೆಳಿಗ್ಗೆ 9:30 ರಿಂದ ಪ್ರಾರಂಭವಾಗಲಿದ್ದು, ಬೆಳಿಗ್ಗೆ 9 ಗಂಟೆಗೆ ಟಾಸ್ ನಡೆಯಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಎಲ್ಲಿ ನಡೆಯುತ್ತದೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಅಡಿಲೇಡ್‌ನ ಅಡಿಲೇಡ್ ಓವಲ್ ಮೈದಾನದಲ್ಲಿ ನಡೆಯಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ ಟೆಸ್ಟ್ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬೇಕು?

ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2 ನೇ ಟೆಸ್ಟ್ ಪಂದ್ಯದ ನೇರ ಪ್ರಸಾರ ಲಭ್ಯವಿರುತ್ತದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ ಟೆಸ್ಟ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬೇಕು?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ ಟೆಸ್ಟ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಹಾಟ್‌ಸ್ಟಾರ್‌ನಲ್ಲಿ ಲಭ್ಯವಿರುತ್ತದೆ.

ಮೂರು ಸೆಷನ್​ಗಳ ಅವದಿ ವಿವರ

ಅಡಿಲೇಡ್ ಟೆಸ್ಟ್‌ನ ಮೊದಲ ಸೆಷನ್ ಭಾರತೀಯ ಕಾಲಮಾನ ಬೆಳಿಗ್ಗೆ 9:30 ರಿಂದ 11:30 ರವರೆಗೆ ನಡೆಯಲಿದ್ದು, ನಂತರ ಭೋಜನ ವಿರಾಮವಿರುತ್ತದೆ. 40 ನಿಮಿಷಗಳ ವಿರಾಮದ ನಂತರ ಎರಡೂ ತಂಡಗಳು 12 ಗಂಟೆಗೆ ಎರಡನೇ ಸೆಷನ್‌ ಆರಂಭಿಸಲಿವೆ. ಎರಡನೇ ಸೆಷನ್ ಮಧ್ಯಾಹ್ನ 2:10 ರವರೆಗೆ ನಡೆಯಲಿದ್ದು, ಆ ನಂತರ 20 ನಿಮಿಷಗಳ ಚಹಾ ವಿರಾಮ ಇರುತ್ತದೆ. ಕೊನೆಯ ಸೆಷನ್ 2:30 ರಿಂದ ಪ್ರಾರಂಭವಾಗಲಿದ್ದು, 4:30 ಕ್ಕೆ ದಿನದಾಟವನ್ನು ಕೊನೆಗೊಳಿಸಲಾಗುತ್ತದೆ. ಪಂದ್ಯದ ವೇಳೆ ಮಳೆ ಬಂದರೆ, ಅಥವಾ ಬೇರೆ ಕಾರಣಗಳಿಂದ ಪಂದ್ಯವನ್ನು ನಿಲ್ಲಿಸಬೇಕಾದರೆ, ಅಂತಹ ಪರಿಸ್ಥಿತಿಯಲ್ಲಿ ಸೆಷನ್ ಸಮಯದಲ್ಲಿ ಬದಲಾವಣೆಯಾಗಬಹುದು.

Source : https://tv9kannada.com/sports/cricket-news/india-vs-australia-adelaide-test-live-streaming-psr-945460.html

Leave a Reply

Your email address will not be published. Required fields are marked *