ಭಾರತ- ಬಾಂಗ್ಲಾ ನಡುವೆ ಏಷ್ಯಾಕಪ್‌ ಫೈನಲ್; ಪಂದ್ಯ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?

ದುಬೈನಲ್ಲಿ ನಡೆಯುತ್ತಿರುವ ಎಸಿಸಿ ಪುರುಷರ ಅಂಡರ್-19 ಏಷ್ಯಾಕಪ್‌ ಫೈನಲ್‌ಗೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಪ್ರಶಸ್ತಿ ಜಯಿಸುವ ಸಲುವಾಗಿ ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ತೀವ್ರ ಹಣಾಹಣಿ ನಡೆಸಲು ಸಜ್ಜಾಗಿವೆ. ಒಂದೆಡೆ ಸೆಮಿಫೈನಲ್‌ನಲ್ಲಿ ಶ್ರೀಲಂಕಾವನ್ನು ಸೋಲಿಸುವ ಮೂಲಕ ಭಾರತ ತಂಡ ಫೈನಲ್‌ಗೆ ಲಗ್ಗೆ ಇಟ್ಟಿದ್ದರೆ, ಇನ್ನೊಂದೆಡೆ ಎರಡನೇ ಸೆಮಿಫೈನಲ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಬಾಂಗ್ಲಾದೇಶ ಫೈನಲ್​ ಟಿಕೆಟ್ ಪಡೆದುಕೊಂಡಿದೆ. ಟೂರ್ನಿಯಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯಗಳನ್ನು ಸೋತು ಫೈನಲ್​ಗೆ ಲಗ್ಗೆ ಇಟ್ಟಿದ್ದು, ನಾಳಿನ ಫೈನಲ್ ಪಂದ್ಯದಲ್ಲಿ ಯಾವ ತಂಡ ಮೇಲುಗೈ ಸಾಧಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

ಬಾಂಗ್ಲಾದೇಶ ಸತತ ಎರಡನೇ ಬಾರಿಗೆ ಫೈನಲ್‌ಗೆ ಲಗ್ಗೆ ಇಟ್ಟಿದೆ. ಹೀಗಾಗಿ ತಂಡದ ಕಣ್ಣು ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆಲ್ಲುವತ್ತ ನೆಟ್ಟಿದೆ. 2023 ರಲ್ಲಿ ಬಾಂಗ್ಲಾದೇಶ ಯುಎಇಯನ್ನು ಸೋಲಿಸುವ ಮೂಲಕ ಅಂಡರ್ ಏಷ್ಯಾಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. ಇಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾ ಕೂಡ ಬಾಂಗ್ಲಾದೇಶ ವಿರುದ್ಧ ಎಚ್ಚರಿಕೆ ವಹಿಸಬೇಕಿದೆ.

ವೈಭವ್ ಸೂರ್ಯವಂಶಿಯತ್ತ ಎಲ್ಲರ ಚಿತ್ತ

ಎಸಿಸಿ ಪುರುಷರ ಅಂಡರ್-19 ಏಷ್ಯಾಕಪ್‌ನಲ್ಲಿ ವೈಭವ್ ಸೂರ್ಯವಂಶಿ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಏಕೆಂದರೆ ಶ್ರೀಲಂಕಾ ವಿರುದ್ಧದ ಸೆಮಿಫೈನಲ್‌ನಲ್ಲಿ 13 ವರ್ಷದ ವೈಭವ್ ಸೂರ್ಯವಂಶಿ ತಮ್ಮ ಸ್ಫೋಟಕ ಬ್ಯಾಟಿಂಗ್‌ ಮೂಲಕ ಸಂಚಲನ ಮೂಡಿಸಿದ್ದರು. ಅವರ ಬಿರುಸಿನ ಇನ್ನಿಂಗ್ಸ್‌ನಿಂದಾಗಿ ಭಾರತ 170 ಎಸೆತಗಳು ಬಾಕಿ ಇರುವಂತೆಯೇ ಗುರಿ ತಲುಪಿತ್ತು. ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 36 ಎಸೆತಗಳನ್ನು ಎದುರಿಸಿದ ವೈಭವ್ 67 ರನ್‌ಗಳ ಬಿರುಸಿನ ಇನ್ನಿಂಗ್ಸ್ ಆಡಿ​ದರು. ಈ ಪಂದ್ಯದಲ್ಲಿ ಅವರು ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಇದರಲ್ಲಿ 6 ಬೌಂಡರಿ ಮತ್ತು 5 ಸಿಕ್ಸರ್‌ಗಳು ಸೇರಿದ್ದವು. ಹೀಗಾಗಿ ನಾಳಿನ ಪಂದ್ಯದಲ್ಲೂ ಅವರು ಮಿಂಚಿದರೆ ಟೀಂ ಇಂಡಿಯಾ ಚಾಂಪಿಯನ್‌ ಪಟ್ಟಕೇರುವುದು ಖಚಿತ. ಉಳಿದಂತೆ ಪಂದ್ಯ ಯಾವಾಗ, ಎಲ್ಲಿ ಎಷ್ಟು ಗಂಟೆಗೆ ಆರಂಭವಾಗಲಿದೆ ಎಂಬಿತ್ಯಾದಿ ಮಾಹಿತಿಗಳನ್ನು ನೋಡುವುದಾದರೆ…

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಅಂ-19 ಏಷ್ಯಾಕಪ್‌ ಫೈನಲ್ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಅಂ-19 ಏಷ್ಯಾಕಪ್‌ ಫೈನಲ್ ಪಂದ್ಯ ಡಿಸೆಂಬರ್ 8 ರಂದು ನಡೆಯಲ್ಲಿದೆ.

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಅಂ-19 ಏಷ್ಯಾಕಪ್‌ ಫೈನಲ್ ಪಂದ್ಯ ಎಲ್ಲಿ ನಡೆಯಲ್ಲಿದೆ?

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಅಂ-19 ಏಷ್ಯಾಕಪ್‌ ಫೈನಲ್ ಪಂದ್ಯ ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಅಂ-19 ಏಷ್ಯಾಕಪ್‌ ಫೈನಲ್ ಪಂದ್ಯ ಎಷ್ಟು ಗಂಟೆಗೆ ಆರಂಭ?

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಅಂ-19 ಏಷ್ಯಾಕಪ್‌ ಫೈನಲ್ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಬೆಳಗ್ಗೆ 10.30ಕ್ಕೆ ಆರಂಭವಾಗಲಿದೆ.

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಅಂ-19 ಏಷ್ಯಾಕಪ್‌ ಫೈನಲ್ ಪಂದ್ಯವನ್ನು ಟಿವಿಯಲ್ಲಿ ಎಲ್ಲಿ ವೀಕ್ಷಿಸಬೇಕು?

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಅಂ-19 ಏಷ್ಯಾಕಪ್‌ ಫೈನಲ್ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದೆ.

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಅಂ-19 ಏಷ್ಯಾಕಪ್‌ ಫೈನಲ್ ಪಂದ್ಯದ ಲೈವ್​ಸ್ಟ್ರೀಮಿಂಗ್ ವೀಕ್ಷಿಸುವುದು ಹೇಗೆ?

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಅಂ-19 ಏಷ್ಯಾಕಪ್‌ ಫೈನಲ್ ಪಂದ್ಯ ಸೋನಿ ಲೈವ್ ಅಪ್ಲಿಕೇಶನ್​ನಲ್ಲಿ ವೀಕ್ಷಿಸಬಹುದು.

Source : https://tv9kannada.com/sports/cricket-news/u19-asia-cup-india-vs-bangladesh-final-live-streaming-psr-946556.html

Leave a Reply

Your email address will not be published. Required fields are marked *