96 ವರ್ಷದ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಶನಿವಾರ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯ ಹದಗೆಟ್ಟ ಕಾರಣ ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿಯ ಮುಂಚೂಣಿ ನಾಯಕ 96 ವರ್ಷದ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಶುಕ್ರವಾರ ತಡರಾತ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅಡ್ವಾಣಿ ಅವರನ್ನು ತೀವ್ರ ನಿಗಾದಲ್ಲಿರಿಸಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
Views: 0