ಶಿವಮೊಗ್ಗ: ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ನೇರ ಸಂದರ್ಶನ; ಇಲ್ಲಿದೆ ವಿವರ .

ಶಿವಮೊಗ್ಗ: ಜಿಲ್ಲೆಯ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗಳ ನೇಮಕಾತಿ ನಡೆಸಲಾಗುತ್ತಿದ್ದು, ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಯಾವ ವಿಭಾಗದಲ್ಲಿದೆ ಹುದ್ದೆ: ಅಭ್ಯರ್ಥಿಗಳು ಪ್ರಾಣಿ ಆಹಾರ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಔಷಧ ಹಾಗೂ ಜಾನುವಾರು ಉತ್ಪನ್ನಗಳ ತಾಂತ್ರಿಕತೆ ವಿಭಾಗ, ಪಶುವೈದ್ಯಕೀಯ ಸಾರ್ವಜನಿಕ ಆರೋಗ್ಯ ಮತ್ತು ಸಮುದಾಯ ರೋಗ ಅಧ್ಯಯನ ಶಾಸ್ತ್ರ ವಿಭಾಗ, ಜಾನುವಾರು ಸಾಕಾಣಿಕೆ ಸಂಕೀರ್ಣ ವಿಭಾಗ, ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಶಾಸ್ತ್ರ ಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ ವಿಭಾಗ, ಪಶು ವೈದ್ಯಕೀಯ ಚಿಕಿತ್ಸಾ ಸಂಕೀರ್ಣ ವಿಭಾಗಗಳಲ್ಲಿ ನೇಮಕ ಪ್ರಕ್ರಿಯೆ ನಡೆಸಲಾಗುತ್ತದೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರಬೇಕು.

ವೇತನ: ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಪ್ರಮಾಣಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ.56,700/- ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆಯ (ಎನ್‌ಇಟಿ) ಪ್ರಮಾಣಪತ್ರ ಹೊಂದಿರದ ಅಭ್ಯರ್ಥಿಗಳಿಗೆ ಮಾಸಿಕ ರೂ.50,000 ಮಾಸಿಕ ವೇತನ ಸಿಗಲಿದೆ.

ಆಯ್ಕೆ: ಅಭ್ಯರ್ಥಿಗಳು ಡಿ. 23ರಂದು 11ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗಿಯಾಗಬಹುದಾಗಿದೆ.

ಸಂದರ್ಶನದ ಸ್ಥಳ: ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ.

ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ವಿವರಗಳಿಗೆ ಅಭ್ಯರ್ಥಿಗಳು ದೂರವಾಣಿ ಸಂಖ್ಯೆ 08182-200872 ಸಂಪರ್ಕಿಸಬಹುದು ಹಾಗೂ ವಿಶ್ವವಿದ್ಯಾಲಯದ ಜಾಲತಾಣ kvafsu.edu.in ಭೇಟಿ ನೀಡಿ.

Source : https://www.etvbharat.com/kn/!education-and-career/assistant-professor-jobs-in-shivamogga-veterinary-college-kas24121804224

Leave a Reply

Your email address will not be published. Required fields are marked *