KEA Recruitment: 2882 ಹುದ್ದೆಗಳ ನೇಮಕಾತಿ, SSLC ಪಾಸಾದವರು ಅರ್ಜಿ ಹಾಕಿ, ಮಾಸಿಕ ವೇತನ ವಿವರ.

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಹೊಸ ವರ್ಷದ ಸಂದರ್ಭದಲ್ಲಿ ಉದ್ಯೋಗಕಾಂಕ್ಷಿಗಳಿಗೆ ಸಿಹಿ ಸುದ್ದಿ ಕೊಟ್ಟಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಬಿಇ, ಬಿಟೆಕ್ ಹಾಗೂ ಎಂಬಿಎ ವಿದ್ಯಾರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ.

ಸರ್ಕಾರಿ ಉದ್ಯೋಗ ಪಡೆಯಲು ಬಯಸುವ ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಹಾಕಬೇಕು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇತ್ತೀಚೆಗೆ ಬೃಹತ್ ಉದ್ಯೋಗ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಪ್ರಾಧಿಕಾರವು ಎಸ್‌ಡಿಎ, ಎಫ್‌ಡಿಎ, ಲೈಬ್ರಿಯನ್ ಸೇರಿ ಒಟ್ಟು 2882 ವಿವಿಧ ಹುದ್ದೆಗಳು ಖಾಲಿ ಇವೆ. ಇದಕ್ಕೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಫೆಬ್ರವರಿ 28 ಒಳಗಾಗಿ ಅರ್ಜಿ ಸಲ್ಲಿಸುವಂತೆ ತಿಳಿಸಿದೆ.

ಅರ್ಜಿ ಸಲ್ಲಿಕೆಗೂ ಮೊದಲು ಮಾಸಿಕ ವೇತನ, ಪ್ರಮುಖ ದಿನಾಂಕ, ಶೈಕ್ಷಣಿಕ ಅರ್ಹತೆಗಳು, ನೇಮಕಾತಿ ಪ್ರಕ್ರಿಯೆ ಪೂರ್ಣ ವಿವರ ಇಲ್ಲಿ ತಿಳಿದು ಅರ್ಜಿ ಸಲ್ಲಿಸಬೇಕು.

ನೇಮಕಾತಿ ಪೂರ್ಣ ಮಾಹಿತಿ

ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)

ಹುದ್ದೆಗಳ ಹೆಸರು: ಸಹಾಯಕ ಲೆಕ್ಕಾಧಿಕಾರಿ, ಗ್ರಂಥಪಾಲ, ಇತ್ಯಾದಿ

ಒಟ್ಟು ಹುದ್ದೆಗಳು: 2882 ಹುದ್ದೆಗಳು

ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 2025 ಫೆಬ್ರವರಿ 28

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್

ಉದ್ಯೋಗ ಸ್ಥಳ: ಕರ್ನಾಟಕ

ಶೈಕ್ಷಣಿಕ ಅರ್ಹತೆ

ಕೆಇಎ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶೈಕ್ಷಣಿಕ ಸಂಸ್ಥೆ ಇಲ್ಲವೇ ವಿಶ್ವವಿದ್ಯಾಲಯದಲ್ಲಿ SSLC, PUC, ITI ಮತ್ತು ಡಿಪ್ಲೋಮೋ, ಪದವಿ, ಹಾಗೂ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರುವುದು ಕಡ್ಡಾಯವಾಗಿದೆ. ಈ ಅರ್ಹರು ಮಾತ್ರವೇ ಅರ್ಜಿ ಸಲ್ಲಿಸಬೇಕಿದೆ.

ವಯಸ್ಸಿನ ಮಿತಿ ವಿವರ

ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಕನಿಷ್ಠ ವಯಸ್ಸು 18ರಿಂದ ಗರಿಷ್ಠ 35 ವರ್ಷದೊಳಗಿರುವವರು ಆಗಿರಬೇಕು. ಜಾತಿ ಆಧಾರದಲ್ಲಿ ಆಯಾ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಕೊಂಚ ಸಡಿಲಿಕೆ ಇರುತ್ತದೆ ಎಂದು ಕೆಇಎ ನೇಮಕಾತಿ ಅಧಿಸೂಚನೆ ಮಾಹಿತಿ ನೀಡಿದೆ.

ಅಭ್ಯರ್ಥಿಗಳ ಆಯ್ಕೆ ಹೇಗೆ?

ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ಬಳಿಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅವರಿಗೆ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ನಡೆಸಲಿದೆ. ಅಲ್ಲಿ ಆಯ್ಕೆ ಆದವರನ್ನು ಮತ್ತೆ ನೇರಳ ಸಂದರ್ಶನಕ್ಕೆ ಆಹ್ವಾನಿಸಿ, ನಿಯಮಗಳ ಪ್ರಕಾರ, ಮಾನದಂಡ ಅನುಸರಿಸಿ ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ ಮಾಹಿತಿ

ಈ ಮೇಲಿನ 2882 ವಿವಿಧ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಕನಿಷ್ಠ 21, 800 ರೂಪಾಯಿಯಿಂದ ಗರಿಷ್ಠ 63,870 ರೂಪಾಯಿ ನೀಡಲಾಗುವುದು. ಆಯ್ಕೆ ಆಗುವವರಿಗೆ ಕರ್ನಾಟಕದಲ್ಲಿಯೇ ಪೋಸ್ಟಿಂಗ್ ನೀಡಲಾಗುತ್ತದೆ ಎಂದು ಕೆಇಎ ನೇಮಕಾತಿ ಅಧಿಸೂಚನೆ ತಿಳಿಸಿದೆ.

ಅರ್ಜಿ ಸಲ್ಲಿಕೆ ಹೇಗೆ?

ಅರ್ಜಿ ಸಲ್ಲಿಕೆ ಆದಷ್ಟು ಶೀಘ್ರವೇ ಆರಂಭವಾಗಲಿದ್ದು, ಕೆಇಎ ವೆಬ್‌ಸೈಟ್ ನಲ್ಲಿ ನೀಡಲಾಗುವ ಲಿಂಕ್‌ಗಳ ಮೂಲಕವೇ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ https://cetonline.karnataka.gov.in/kea/?utm_source=DH-MoreFromPub&utm_medium=DH-app&utm_campaign=DH ಅಧಿಕೃತ ಜಾಲತಾಣ ವೀಕ್ಷಿಸಬಹುದು.

Leave a Reply

Your email address will not be published. Required fields are marked *