![](https://samagrasuddi.co.in/wp-content/uploads/2025/01/Photo-2-1024x710.jpeg)
“ವಿದ್ಯಾ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವತಿಯಿಂದ 2024- 25 ನೇ ಸಾಲಿನ ಸಡಗರದ ವಾರ್ಷಿಕ ಕ್ರೀಡಾ ಕೂಟ ”
ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವತಿಯಿಂದ ದಿನಾಂಕ : 10.01.2025ರ ಶುಕ್ರವಾರದಂದು ಒನಕೆ ಓಬವ್ವ ಕ್ರೀಡಾಂಗಣದಲ್ಲಿ 2024-25ನೇ ಸಾಲಿನ “ವಾರ್ಷಿಕ ಕ್ರೀಡಾ ಕೂಟ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
![](https://samagrasuddi.co.in/wp-content/uploads/2025/01/Photo-1-1024x418.jpeg)
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಯುತ ರಂಜಿತ್ ಕುಮಾರ್ ಬಂಡಾರು, ಚಿತ್ರದುರ್ಗ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಮಾತನಾಡುತ್ತಾ ಈ ಶಾಲೆಯು ವಾರ್ಷಿಕ ಕ್ರೀಡಾಕೂಟವನ್ನು ಬಹಳ ಅಚ್ಚುಕಟ್ಟಾಗಿ ಆಯೋಜಿಸಿದ್ದಾರೆ ಅಲ್ಲದೇ ಮಕ್ಕಳಲ್ಲಿ ಶಿಸ್ತನ್ನು ಮೈಗೂಡಿಸಿ ಪಠ್ಯದ ಜೊತೆ ಆಟವೂ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುವುದಲ್ಲದೇ, ಮಾನಸಿಕ ಹಾಗೂ ದೈಹಿಕ ಸದೃಢತೆ ಹೆಚ್ಚಿಸುವುದು ಎಂದರು. ಕ್ರೀಡೆಗಳು ಕೇವಲ ಈ ವಾರ್ಷಿಕ ಕ್ರೀಡಾಕೂಟಕ್ಕೇ ಸೀಮಿತವಾಗದೇ ನಮ್ಮ ದೈನಂದಿನ ದಿನಚರಿಗಳಲ್ಲಿ ಇವು ಒಂದಾಗಬೇಕು ಎಂದರು. ಮುಂದುವರೆದು ಪೋಷಕರಿಗೆ ಹಾಗೂ ಮಕ್ಕಳಿಗೆ ಸಂದೇಶವನ್ನು ನೀಡುತ್ತಾ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖಾ ವತಿಯಿಂದ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಬಗ್ಗೆ ಪೋಷಕರು ಎಚ್ಚೆತ್ತುಕೊಂಡು ಮಕ್ಕಳು ಮೊಬೈಲ್ ಟಿ.ವಿ ಬಳಕೆ ಕಡಿಮೆ ಮಾಡುವುದರ ಜೊತೆಗೆ ಇಂತಹ ಕ್ರೀಡೆಗಳಲ್ಲಿ ಭಾಗ ವಹಿಸುವುದು ಎಲ್ಲಾ ದೃಷ್ಠಿಯಿಂದಲೂ ಒಳ್ಳೆಯದು ಎಂದರು.
ಶ್ರೀಯುತ ಎಂ ಆರ್ ಮಂಜುನಾಥ್ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಚಿತ್ರದುರ್ಗ ಇವರು ಮಾತನಾಡುತ್ತಾ ವಾರ್ಷಿಕ ಕ್ರೀಡಾಕೂಟವನ್ನು ಹಮ್ಮಿಕೊಳ್ಳುವುದರ ಜೊತೆಗೆ ಈ ಶಾಲೆಯಿಂದ ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಿಸುತ್ತಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ ಅಲ್ಲದೇ ಕ್ರೀಡಾಕೂಟವನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡಿರುವುದು ಮಕ್ಕಳಲ್ಲಿರುವ ಶಿಸ್ತನ್ನು ತೋರಿಸುತ್ತದೆ. ಕ್ರೀಡಾಕೂಟದಲ್ಲಿ ಎಲ್ಲರಿಗೂ ಯಶಸ್ಸು ಸಿಗಲಿ, ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಎಂದು ಮಕ್ಕಳಿಗೆ ಕಿವಿ ಮಾತು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಾಧಕರ ಸಾಲಿನಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಖ್ಯಾತ ಪರ್ವತಾರೋಹಿ ಜ್ಯೋತಿರಾಜ್, ಕ್ರೀಡೆಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದವರಿಗೆ ಇಂದಿನ ದಿನಗಳಲ್ಲಿ ಯಾವುದೇ ಮಹತ್ವ ನೀಡುತ್ತಿರುವುದು ಅಷ್ಟಕ್ಕಷ್ಟೇ, ಆದರೆ ಈ ಶಾಲೆಯು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಹೆಮ್ಮೆಯ ವಿಚಾರ. ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ನನಗೆ ಇಂದು ಈ ಮಕ್ಕಳ ಮುಂದೆ ಸನ್ಮಾನಿಸುತ್ತಿರುವುದು ಖುಷಿ ತಂದಿದೆ. ಮುಂದಿನ ದಿನಗಳಲ್ಲಿ ಪರ್ವತಾರೋಹಣ ವಿಭಾಗದ ಒಲಂಪಿಕ್ಸ್ ನಲ್ಲಿ ಚಿತ್ರದುರ್ಗ ಮಣ್ಣಿಗೆ ಪದಕ ತರುವುದು ನನ್ನ ಮಹದಾಸೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಿ.ವಿಜಯ್ ಕುಮಾರ್ ಕಾರ್ಯದರ್ಶಿಗಳು ವಿದ್ಯಾ ವಿಕಾಸ ವಿದ್ಯಾ ಸಂಸ್ಥೆ, ಇವರು ಮಾತನಾಡುತ್ತಾ ಶಾಲೆಯ ವಾರ್ಷಿಕ ಕ್ರೀಡಾಕೂಟ ಯಶಸ್ವಿಯಾಗಲು ಪೋಷಕರ ಸಹಕಾರ ಹಾಗೂ ಮಕ್ಕಳ ಭಾಗವಹಿಸುವಿಕೆ ಕಾರಣವಾಗಿದೆ. ಮಕ್ಕಳು ಆಟದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದರ ಮೂಲಕ ಕ್ರೀಡೆಗಳಲ್ಲಿ ಪಾಲ್ಗೊಂಡು ವಿಜೇರಾಗಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ 9 ಜನ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ನೃತ್ಯಗಳು ಹಾಗೂ ಟ್ವೆಕ್ವೋಂಡೊ ಪ್ರದರ್ಶನ ನೋಡುಗರ ಮನಸೂರೆಗೊಂಡಿತು.
ಕಾರ್ಯಕ್ರಮವನ್ನು ಶ್ರೀ. ಅವಿನಾಶ್ ಬಿ ನಿರೂಪಿಸಿದರು. ಶ್ರೀಮತಿ ಅಫ್ರೀನ್ ಸಬಾ ಸ್ವಾಗತಿಸಿದರು, ಶ್ರೀ ಖಾನ್ ಖಾದರ್ ವಲಿ ಅವರು ವಂದಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಶ್ರೀಯುತ.ಎಸ್.ಎಂ ಪೃಥ್ವೀಶ ಹಾಗೂ ಶ್ರೀಮತಿ ಸುನಿತಾ.ಪಿ.ಸಿ, ಸ್ನೇಹಾ ಎನ್ ಎಸ್ ವ್ಯವಸ್ಥಾಪಕ ನಿರ್ದೇಶಕರುಗಳು, ಮುಖ್ಯ ಶಿಕ್ಷಕರಾದ ಎನ್.ಜಿ.ತಿಪ್ಪೇಸ್ವಾಮಿ ಐಸಿಎಸ್‌ಇ ಪ್ರಾಚಾರ್ಯರಾದ ಬಸವರಾಜಯ್ಯ.ಪಿ, ಐಸಿಎಸ್‌ಇ ಉಪಪ್ರಾಚಾರ್ಯರಾದ ಅವಿನಾಶ್ ಬಿ, ಮತ್ತು ಎಲ್ಲಾ ಶಿಕ್ಷಕ/ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.