ಮುಂಬರುವ ಫೈನಲ್ ನನ್ನ ಕೊನೆಯ ನಿರೂಪಣೆ. ನಿಮ್ಮನ್ನು ಒಳ್ಳೆಯ ರೀತಿಯಲ್ಲಿ ರಂಜಿಸಿದ್ದೇನೆ ಎಂದು ನಾನು ಭಾವಿಸುತ್ತೇನೆ.
![](https://samagrasuddi.co.in/wp-content/uploads/2025/01/image-147.png)
ಬೆಂಗಳೂರು: ಬಿಗ್ ಬಾಸ್ ಕನ್ನಡ 11 ಕಾರ್ಯಕ್ರಮ ಅಂತಿಮ ಘಟ್ಟ ತಲುಪಿದ್ದು, ಗ್ರ್ಯಾಂಡ್ ಫಿನಾಲೆಗೆ ದಿನಗಣನೆ ಶುರುವಾಗಿದೆ. ಈ ನಡುವಲ್ಲೇ ಕಾರ್ಯಕ್ರಮದ ನಿರೂಪಣೆಗೆ ಕಿಚ್ಚ ಸುದೀಪ್ ಗುಡ್ ಬೈ ಹೇಳಿದ್ದು, ಭಾವನಾತ್ಮಕ ಪೋಸ್ಟ್’ವೊಂದನ್ನು ಹಂಚಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮುಂಬರುವ ಫೈನಲ್ ನನ್ನ ಕೊನೆಯ ನಿರೂಪಣೆ. ನಿಮ್ಮನ್ನು ಒಳ್ಳೆಯ ರೀತಿಯಲ್ಲಿ ರಂಜಿಸಿದ್ದೇನೆ ಎಂದು ನಾನು ಭಾವಿಸುತ್ತೇನೆಂದು ಹೇಳಿದ್ದಾರೆ.
ಬಿಗ್ ಬಾಸ್ನ ಕಳೆದ 11 ಸೀಸನ್‌ಗಳಿಂದ ನಾನು ಆನಂದಿಸಿದ್ದೇನೆ. ನೀವು ತೋರಿದ ಎಲ್ಲಾ ಪ್ರೀತಿಗಾಗಿ ನಿಮ್ಮೆಲ್ಲರಿಗೂ ಧನ್ಯವಾದಗಳು. ಮುಂಬರುವ ಫಿನಾಲೆ, ಹೋಸ್ಟ್ ಆಗಿ ನನ್ನ ಕೊನೆಯ ಸೀಸನ್. ನಿಮ್ಮನ್ನು ಒಳ್ಳೆಯ ರೀತಿಯಲ್ಲಿ ರಂಜಿಸಿದ್ದೇನೆ ಎಂದು ನಾನು ಭಾವಿಸುತ್ತೇನೆ. ಇದೊಂದು ಅವಿಸ್ಮರಣೀಯ ಪಯಣ. ಅದನ್ನು ನನ್ನ ಕೈಲಾದಷ್ಟು ನಿಭಾಯಿಸಿದ್ದಕ್ಕೆ ನನಗೆ ಖುಷಿ ಇದೆ. ಈ ಅವಕಾಶಕ್ಕಾಗಿ ಕಲರ್ಸ್ ಕನ್ನಡಕ್ಕೆ ಧನ್ಯವಾದ’ ಎಂದು ತಿಳಿಸಿದ್ದಾರೆ.
ಬಿಗ್ ಬಾಸ್ ಕಾರ್ಯಕ್ರಮವನ್ನ ನಟ ಕಿಚ್ಚ ಸುದೀಪ್ ಅವರು ನಡೆಸಿಕೊಡುತ್ತಿದ್ದು, ಆರಂಭದಿಂದಲೂ ಬಿಗ್ ಬಾಸ್ ಕನ್ನಡದ ಹೋಸ್ಟ್ ಆಗಿ 11 ಸೀಸನ್ಗಳನ್ನು ನಡೆಸಿಕೊಟ್ಟಿದ್ದಾರೆ.
ಈ ಹಿಂದೆಯೂ ಸುದೀಪ್ ಅವರು ಇದು ನನ್ನ ಕೊನೆಯ ಸೀಸನ್ ಎಂದು ಹೇಳಿದ್ದರು. ಈಗ ಅಧಿಕೃತವಾಗಿ ಬಿಗ್ ಬಾಸ್ ತೊರೆಯುವ ಬಗ್ಗೆ ಘೋಷಣೆ ಮಾಡಿದ್ದಾರೆ.