
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಜ. 28 : ಚಿತ್ರದುರ್ಗ ನಗರದ ಹೊರವಲಯದ ಶ್ರೀ ಇಮ್ಮಡಿಗಿರಿ ನಗರದ ಭೋವಿ ಗುರು,ಪೀಠದ ಎಸ್. ಜೆ. ಎಸ್. ಸಮೂಹ ಸಂಸ್ಥೆವತಿಯಿಂದ ಜ. 29ರ ಬುಧವಾರ ಬೆಳಿಗ್ಗೆ 10.30ಕ್ಕೆ ಎಸ್ ಜೆ ಎಸ್ ಸಭಾಂಗಣದಲ್ಲಿ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಠದ ಸಿಇಓ ಗೋವಿಂದಪ್ಪ ತಿಳಿಸಿದ್ದಾರೆ.
ವಿಚಾರ ಸಂಕಿರಣದ ಸಾನಿಧ್ಯವನ್ನು ಭೋವಿಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ವಹಿಸಲಿದ್ದಾರೆ. ”ವೈಜ್ಞಾನಿಕತೆಗಿರುವ ಸವಾಲು ಹಾಗೂ ಪರಿಹಾರೋಪಾಯಗಳು”ಬಗ್ಗೆ ರಾಷ್ಟ್ರೀಯ ವಿಚಾರವಾದಿಗಳ ಸಂಘ, ಕರ್ನಾಟಕದ ಅಧ್ಯಕ್ಷರಾದ ಪ್ರೊ. ನರೇಂದ್ರ ನಾಯಕ್ ಮಾತನಾಡುವರು.