ಸಬಲೀಕರಣಕ್ಕೆ ಉಪಯುಕ್ತ ಬಜೆಟ್ : ಸೂರೇನಹಳ್ಳಿ ವಿಜಯಣ್ಣ ಹರ್ಷ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಫೆ. 03 : ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿರುವ ಬಜೆಟ್ ಮಧ್ಯಮ ವರ್ಗದ- ವೇತನದಾರ ಹಿತ ಕಾಯುವ ಬಜೆಟ್ ಆಗಿದೆ ಎಂದು ಬಿಜೆಪಿ ಜಿಲ್ಲಾ ಆರ್ಥಿಕ ಪ್ರಕೋಷ್ಟದ ಜಿಲ್ಲಾ ಸಂಚಾಲಕರಾದ ಸೂರೇನಹಳ್ಳಿ ವಿಜಯಣ್ಣ ಹರ್ಷ ವ್ಯಕ್ತಪಡಿಸಿದ್ದಾರೆ.

ವಿಕಸಿತ ಭಾರತ ನಿರ್ಮಾಣದ ನಿಟ್ಟಿನಲ್ಲಿ ಮತ್ತೊಂದು ಮೈಲಿಗಲ್ಲನ್ನು ಸ್ಥಾಪಿಸುವ ದೂರದೃಷ್ಟಿಯ ಬಜೆಟ್ ಇದಾಗಿದೆ. ಪ್ರಮುಖವಾಗಿ ರೈತರು, ಮಧ್ಯಮ ವರ್ಗ, ಸಣ್ಣ ಮತ್ತು ಮಾಧ್ಯಮ ವಲಯದ ಉದ್ಯಮಗಳ ಸಬಲೀಕರಣದ ಸಾಕಾರದ ಗುರಿ ಸಾಧಿಸಲು ಉಪಯುಕ್ತವಾಗಲಿದೆ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿರುವ ಬಜೆಟ್ ಮಧ್ಯಮ ವರ್ಗದ ವೇತನದಾರರಿಗೆ ಮೊದಲು 7 ಲಕ್ಷಕ್ಕೆ ತೆರಿಗೆ ಕಟ್ಟಬೇಕಿತ್ತು. ಈಗ 12 ಲಕ್ಷದವರೆಗೆ ಯಾರಿಗೂ ತೆರಿಗೆ ಇರುವುದಿಲ್ಲ. ಪತ್ರಕರ್ತರೂ
ಸೇರಿದಂತೆ ತಿಂಗಳಿಗೆ 1 ಲಕ್ಷದವರೆಗೆ ಸಂಬಳ ಪಡೆಯುವವರಿಗೆ ವಿನಾಯಿತಿ ಸಿಕ್ಕಿದೆ. ಎಲ್ಲರನ್ನೂ ಸರಿದೂಗಿಸಿಕೊಂಡು ಆತ್ಮನಿರ್ಭರ ಭಾರತವನ್ನು ಮಾಡುವಂಥ ಮಹಾನ್ ಕಾರ್ಯಕ್ಕೆ ಪ್ರಧಾನಿ ಮೋದಿ ಅವರ ಸರಕಾರ ಈ ಬಜೆಟ್‍ನಲ್ಲಿ ಒತ್ತು ನೀಡಿದ್ದಾರೆ ಎಂದಿದ್ದಾರೆ.

ಪ್ರಗತಿನಿಷ್ಠ ಮಾರ್ಗಸೂಚಿ, ರಜ್ಜಿಗೆ ಆದ್ಯತೆ, ಹೂಡಿಕೆ ಸ್ನೇಹಿ ಮತ್ತು ಸುಧಾರಣಾ ಕ್ರಮಗಳು, ಪರಿವರ್ತನೆಯ ನೀತಿಗಳ ಮೂಲಕ
ಸಶಕ್ತ, ಸಮಗ್ರ ಅಭಿವೃದ್ಧಿಯನ್ನು ಬಜೆಟ್ 2025-26 ಖಾತರಿಪಡಿಸುತ್ತಿದೆ. ಇದು ಉದ್ಯಮಸ್ನೇಹಿ ಬಜೆಟ್ ಆಗಿದ್ದು, ಉದ್ಯೋಗ ಸೃಷ್ಟಿಗೆ
ಹೆಚ್ಚಿನ ಪ್ರಾಮುಖ್ಯತೆ ಒದಗಿಸಿದೆ ಎಂದು ಗಮನಸೆಳೆದಿದ್ದಾರೆ.ಪ್ರಧಾನಮಂತ್ರಿ ಧನ-ಧಾನ್ಯ ಕೃಷಿ ಯೋಜನೆ, ಕೃಷಿ ಜಿಲ್ಲೆಗಳ ಅಭಿವೃದ್ಧಿ
ಕಾರ್ಯಕ್ರಮ, ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿಯನ್ನು 3 ಲಕ್ಷ ರೂ. ನಿಂದ 5 ಲಕ್ಷ ರೂ. ಗೆ ಹೆಚ್ಚಿಸಿರುವುದನ್ನು ಸ್ವಾಗತಿಸಿದ್ದಾರೆ.

ಯುವಶಕ್ತಿ ಸಬಲೀಕರಣ, ಹಾಗೂ ಮಹಿಳಾ ಕೇಂದ್ರ-ರಾಜ್ಯ ಮತ್ತಷ್ಟು ಪ್ರಾಮುಖ್ಯತೆ ನೀಡಲಾಗಿದ್ದು, ಸಹಯೋಗಗಳಿಗೆ ನಗರಾಭಿವೃದ್ಧಿ
ಮತ್ತು ಮೂಲಸೌಕರ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. 2025ರಲ್ಲಿ ಕ್ಷಯರೋಗ ನಿರ್ಮೂಲನೆಯ ಗುರಿ ಸೇರಿ
ಆರೋಗ್ಯಸೇವಾ ವಲಯಕ್ಕೆ ಕಾಯಕಲ್ಪ ಒದಗಿಸಲಾಗಿದೆ. ಹೊಸ ಪದ್ಧತಿಯಡಿಯಲ್ಲಿ ಬಂಡವಾಳ ಲಾಭದಂತಹ ವಿಶೇಷ ಆದಾಯ
ಹೊರತುಪಡಿಸಿ, 12 ಲಕ್ಷ ರೂ. ಆದಾಯದವರೆಗೆ ವೈಯಕ್ತಿಕ ಆದಾಯ ತೆರಿಗೆ ವಿನಾಯಿತಿಯ ಕ್ರಮ ಮಧ್ಯಮ ವರ್ಗಗಳಿಗೆ ಹೆಚ್ಚಿನ
ಆರ್ಥಿಕ ಬಲವನ್ನು ನೀಡಲಿದೆ. ಒಟ್ಟಿನಲ್ಲಿ ಈ ಸಾಲಿನ ಬಜೆಟ್ ಸ್ವಾವಲಂಬನೆ, ಪ್ರಗತಿ ಮತ್ತು ಜಾಗತಿಕ ಆರ್ಥಿಕತೆಯ
ಮುಂಚೂಣಿಯಲ್ಲಿ ಮುನ್ನಡೆಯಲು ಭಾರತವನ್ನು ಸಶಕ್ತಗೊಳಿಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Leave a Reply

Your email address will not be published. Required fields are marked *