
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಫೆ. 06 : ಭಾರತೀಯ ರೆಡ್ ಕ್ರಾಸ್ ಸೊಸೈಟಿ ಚಿತ್ರದುರ್ಗ ಜಿಲ್ಲಾ ಶಾಖೆ ಶ್ರವಣ ಸಾಧನ ವಿತರಣಾ ಕಾರ್ಯಕ್ರಮವು ಫೆ. 07ರ ಶುಕ್ರವಾರ ಸಂಜೆ 5.30ಕ್ಕೆ ನಗರದ ಎಸ್.ಆರ್.ಜಿ.ಎಂ.ಎಸ್. ರೋಟರಿ ಬಾಲ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ರೆಡ್ ಕ್ರಾಸ್
ಸಂಸ್ಥೆ, ಚಿತ್ರದುರ್ಗ ಜಿಲ್ಲಾ ಶಾಖೆಯ ಕಾರ್ಯದರ್ಶಿಗಳಾದ ಮಜಹರ್ ಉಲ್ಲಾ. ಎನ್ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ತಿಳಿಸಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಅಪರ ಜಿಲ್ಲಾಧಿಕಾರಿಗಳಾದ ಬಿ.ಟಿ. ಕುಮಾರಸ್ವಾಮಿ ನರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷರಾದ ಈ. ಅರುಣ್ ಕುಮಾರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಜಕ ನಿರ್ದೆಶಕರಾದ ಬಿ.ವಿ.ತುಕರಾಂ ರಾವ್, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶ್ರೀಮತಿ. ಜೆ. ವೈಶಾಲಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯ ಆಡಳಿತ ಮಂಡಳಿ ಸದಸ್ಯರಾದ ಕೆ.ಮಧುಪ್ರಸಾದ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಚಿತ್ರದುರ್ಗ ಶಾಖೆಯ ಖಜಾಂಚಿಗಳಾದ ಎಸ್. ವಿರೇಶ್ ಭಾಗವಹಿಸಲಿದ್ದಾರೆ