ಜನವರಿ 21ರಂದು ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,ಜ. 19 : ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಕಾಲೇಜು ವಾರ್ಷಿಕೋತ್ಸವ ಸಮಾರಂಭವನ್ನು ಜನವರಿ 21ರಂದು ಬೆಳಿಗ್ಗೆ 11.30ಕ್ಕೆ ಚಿತ್ರದುರ್ಗ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಉದ್ಘಾಟಿಸುವರು. ಕಾಲೇಜಿನ ಪ್ರಾಂಶುಪಾಲ ಹೆಚ್.ನಾಗರಾಜ್ ಪ್ರಾಸ್ತಾವಿಕ ನುಡಿಗಳನ್ನಾಡುವರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಮುಖ್ಯ ಸಚೇತಕ ವೈ.ಎ.ನಾರಾಯಣಸ್ವಾಮಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ರಾಜು, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಮಂಜುನಾಥ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯೆ ಗಾಯತ್ರಿ ಶಿವರಾಮ್, ರೊ.ಕೆ.ಮಧು ಪ್ರಸಾದ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಪರಶುರಾಂಪುರ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಬ್ಯಾಲಹಾಳ್ ನಾಗರಾಜ್ ಸಮಾರೋಪ ಭಾಷಣ ಮಾಡುವರು. ಉಪನ್ಯಾಸಕರ ಸಂಘದ ಅಧ್ಯಕ್ಷ ಬಿ.ಆರ್.ಮಲ್ಲೇಶಪ್ಪ ಉಪಸ್ಥಿತಿವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

The post ಜನವರಿ 21ರಂದು ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ first appeared on Kannada News | suddione.

from ಚಿತ್ರದುರ್ಗ – Kannada News | suddione https://ift.tt/e2ngpFQ
via IFTTT

Leave a Reply

Your email address will not be published. Required fields are marked *