ICC ODI Rankings: ಟಾಪ್-10 ನಲ್ಲಿ ಟೀಮ್ ಇಂಡಿಯಾದ ನಾಲ್ವರು ಬ್ಯಾಟರ್​ಗಳು.

ICC ODI Rankings: ಪ್ರಸ್ತುತ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಈ ಪ್ರದರ್ಶನದ ಫಲವಾಗಿ ಇದೀಗ ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ಭಾರತದ ನಾಲ್ವರು ಬ್ಯಾಟರ್​ಗಳು ಅಗ್ರ ಹತ್ತರಲ್ಲಿ ಕಾಣಿಸಿಕೊಂಡಿದ್ದಾರೆ. ಆ ಬ್ಯಾಟರ್​ಗಳು ಯಾರೆಲ್ಲಾ ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…

ICC ODI Rankings: ಐಸಿಸಿ ಏಕದಿನ ಬ್ಯಾಟರ್​ಗಳ ನೂತನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಟಾಪ್-10 ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾದ ನಾಲ್ವರು ಬ್ಯಾಟರ್​ಗಳು ಇರುವುದು ವಿಶೇಷ. ಅದರಲ್ಲೂ ಈ ನಾಲ್ವರಲ್ಲಿ ಮೂವರು ಅಗ್ರ-5 ರಲ್ಲಿ ಕಾಣಿಸಿಕೊಂಡಿದ್ದಾರೆ.

ಐಸಿಸಿ ಒಡಿಐ ಬ್ಯಾಟರ್​ಗಳ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್​ಮನ್ ಗಿಲ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಗಿಲ್ ಒಟ್ಟು 817 ಅಂಕಗಳೊಂದಿಗೆ ಅಗ್ರಾಸ್ಥಾನ ಕಾಯ್ದುಕೊಂಡಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಪಾಕಿಸ್ತಾನ್ ತಂಡದ ಬ್ಯಾಟರ್ ಬಾಬರ್ ಆಝಂ. ಚಾಂಪಿಯನ್ಸ್ ಟ್ರೋಫಿಯಲ್ಲಿನ ಕಳಪೆ ಪ್ರದರ್ಶನದ ಹೊರತಾಗಿಯೂ ಬಾಬರ್ ಒಟ್ಟು 770 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿರುವುದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ. ಹಿಟ್​ಮ್ಯಾನ್ 757 ಅಂಕಗಳೊಂದಿಗೆ ತೃತೀಯ ಸ್ಥಾನದಲ್ಲಿದ್ದರೆ, ಸೌತ್ ಆಫ್ರಿಕಾದ ಬ್ಯಾಟರ್ ಹೆನ್ರಿಕ್ ಕ್ಲಾಸೆನ್ 749 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.

ಇನ್ನು ಪಾಕಿಸ್ತಾನ್ ವಿರುದ್ಧ ಭರ್ಜರಿ ಶತಕ ಸಿಡಿಸಿ ಮಿಂಚಿದ್ದ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿ 743 ಅಂಕಗಳನ್ನು ಪಡೆದಿದ್ದಾರೆ. ಹಾಗೆಯೇ 717 ಅಂಕಗಳನ್ನು ಹೊಂದಿರುವ ನ್ಯೂಝಿಲೆಂಡ್​ನ ಡೇರಿಲ್ ಮಿಚೆಲ್ ಆರನೇ ಸ್ಥಾನವನ್ನು ಪಡೆದಿದ್ದಾರೆ.

ಐರ್ಲೆಂಡ್​ನ ಹ್ಯಾರಿ ಟೆಕ್ಟರ್ (713) ಹಾಗೂ ಶ್ರೀಲಂಕಾದ ಚರಿತ್ ಅಸಲಂಕಾ (694) ಕ್ರಮವಾಗಿ 7ನೇ ಮತ್ತು 8ನೇ ಸ್ಥಾನದಲ್ಲಿದ್ದಾರೆ. ಹಾಗೆಯೇ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ 679 ಅಂಕಗಳೊಂದಿಗೆ 9ನೇ ಸ್ಥಾನ ಅಲಂಕರಿಸಿದ್ದಾರೆ. 672 ಅಂಕಗಳನ್ನು ಹೊಂದಿರುವ ವೆಸ್ಟ್ ಇಂಡೀಸ್​ನ ಶಾಯ್ ಹೋಪ್ ಟಾಪ್-10 ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

Source : https://tv9kannada.com/photo-gallery/cricket-photos/icc-odi-rankings-4-indian-players-in-the-top-10-zp-984091-6.html

Leave a Reply

Your email address will not be published. Required fields are marked *