Horoscope Today 06 March: ಅಪಾಯದ ಮುನ್ಸೂಚನೆಯಿಂದ ಈ ರಾಶಿಯವರಿಗೆ ಭಯ

Horoscope Today 06 March: ಅಪಾಯದ ಮುನ್ಸೂಚನೆಯಿಂದ ಈ ರಾಶಿಯವರಿಗೆ ಭಯ

ಮಾರ್ಚ್​ 06: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರಾ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಗುರು, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ರೋಹಿಣೀ, ಯೋಗ : ವಿಷ್ಕಂಭ, ಕರಣ : ತೈತಿಲ, ಸೂರ್ಯೋದಯ – 06 – 47 am, ಸೂರ್ಯಾಸ್ತ – 06 – 40 pm, ಇಂದಿನ ಶುಭಾಶುಭಕಾಲ : ರಾಹು ಕಾಲ 14:13 – 15:42, ಯಮಘಂಡ ಕಾಲ 06:47 – 08:17, ಗುಳಿಕ ಕಾಲ 09:46 – 11:15.

ಮೇಷ ರಾಶಿ: ಸ್ನೇಹವಲಯವು ವಿಸ್ತಾರ ಮಾಡಿಕೊಳ್ಳುವಿರಿ. ಉದ್ಯೋಗದ ಕಾರಣಕ್ಕೆ ಸಹೋದ್ಯೋಗಿಗಳ‌ ಜೊತೆ ಪ್ರಯಾಣ ಮಾಡುವಿರಿ. ಹಳೆಯ ವಸ್ತುಗಳನ್ನು ಮಾರಾಟ ಮಾಡಿ ಭಾರವನ್ನು ಕಡಿಮೆ ಮಾಡಿಕೊಳ್ಳುವಿರಿ. ನಿಮ್ಮ ವೃತ್ತಿಜೀವನದಲ್ಲಿ ನೀವು ಯಶಸ್ಸಿನ ಏಣಿಯನ್ನು ಏರುತ್ತೀರಿ. ವ್ಯವಹಾರದಲ್ಲಿ ಆರ್ಥಿಕ ಲಾಭಕ್ಕಾಗಿ ನಿಮಗೆ ಹೊಸ ಅವಕಾಶಗಳು ಸಿಗುತ್ತವೆ. ವಿವಾಹದ ಕಾರ್ಯದಲ್ಲಿ ನೀವು ಮಗ್ನರಾಗಿ ಮುಖ್ಯ ಕೆಲಸಗಳನ್ನು ಮರೆಯಬೇಕಾಗುವುದು. ಶುಭ ಸಮಾರಂಭಕ್ಕೆ ಹೋಗುವಿರಿ. ಯಾವುದೋ ಆಲೋಚನೆಯಲ್ಲಿ ನಿಮ್ಮ ಮನಸ್ಸು ಇರುವುದು. ಹೆಚ್ಚಿನ ಸೌಕರ್ಯದಿಂದ ನೀವು ಸೋಮಾರಿಯಾಗುವಿರಿ. ಎಷ್ಟೇ ತೊಂದರೆಯಾದರೂ ಇನ್ನೊಬ್ಬರಿಗೆ ನೋವನ್ನು ಕೊಡುವುದು ಇಷ್ಟವಾಗದು. ಕೇಳಿದವರಿಗೆ ನಿಮ್ಮ ಸಹಾಯವು ಸಿಗಲಿದೆ. ಕೇಳಿದ್ದಕ್ಕೆ ಮಾತ್ರ ನಿಮ್ಮ ಉತ್ತರವಿರಲಿ. ಕಳೆದ ಕೆಟ್ಟ ಕಾಲವನ್ನು ನೆನಪಿಸಿಕೊಳ್ಳುವಿರಿ. ಉದ್ಯೋಗದಲ್ಲಿ ನಿಮ್ಮ ಕೇಂದ್ರವಾಗಿ ಇರಿಸಿಕೊಂಡು ಮಾತನಾಡುವರು.

ವೃಷಭ ರಾಶಿ: ನಿಮ್ಮ ಮಿತವಾದ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವ ಅಗತ್ಯವಿದೆ. ಸಮಾಜಮುಖಿಯಾಗಿ ನಿಮ್ಮ ಕಾರ್ಯಗಳು ಹೆಚ್ಚು ಪ್ರಬಲವಾಗಬಹುದು. ಹಳೆಯ ಆಸ್ತಿಯಿಂದ ಆರ್ಥಿಕ ಲಾಭ ದೊರೆಯಲಿದೆ. ಶೈಕ್ಷಣಿಕ ಕೆಲಸದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಆಗುವ ಬದಲಾವಣೆಗಳನ್ನು ನೀವು ಸಹಿಸುವುದು ಕಷ್ಟವಾದೀತು. ಮಿತ್ರರ ಕೋಪಕ್ಕೆ ಕ್ಷಮೆಯನ್ನು ಕೇಳುವಿರಿ. ವಿವಾಹಕ್ಕೆ ಸಂಬಂಧಿಸಿದ ದೋಷಗಳನ್ನು ದೈವಜ್ಞರ ಬಳಿ ಕೇಳಿ ಸರಿಪಡಿಸಿಕೊಳ್ಳಿ. ಊಹಾಪೋಹಗಳಿಗೆ ಕಿವಿಗೊಡದೇ ನಿಮ್ಮ ಕಾರ್ಯದಲ್ಲಿ ಮುಂದುವರಿಯಿರಿ. ಸತ್ಯವನ್ನೇ ಹೇಳುವುದಾದರೂ ನೋವಾಗದಂತೆ ಹೇಳಬೇಕು ಎನ್ನುವುದು ನಿಮ್ಮ ಕ್ರಮವಾಗಿರಲಿದೆ. ನೀವು ಇಂದು ಮಕ್ಕಳ ಜೊತೆ ಹೆಚ್ಚಿನ ಸಮಯವನ್ನು ಕಳೆಯುವಿರಿ. ವಿದ್ಯಾರ್ಥಿಗಳು ತಮಗೆ ಸಿಗಬೇಕಾದ ಲಾಭದಿಂದ ವಂಚಿತರಾಗುವರು. ಅನಪೇಕ್ಷಿತ ವಿಚಾರದಲ್ಲಿ ಹೆಚ್ಚು ಮನಸ್ಸು ಇರುವುದು. ಉಸಿರಾಟ ತೊಂದರೆಯು ಸ್ವಲ್ಪ ಕಾಣಿಸಿಕೊಳ್ಳಬಹುದು. ಉದರಬಾಧೆಯಿಂದ ನಿಮಗೆ ಕಷ್ಟವಾದೀತು.

ಮಿಥುನ ರಾಶಿ: ನಿಮ್ಮಿಂದ‌ಇಂದು ಹೊಸ ಆದಾಯ ಮೂಲದ ಹುಡುಕಾಟ. ಮೇಲಧಿಕಾರಿಗಳಿಗೆ ವರದಿಯನ್ನು ಕೊಡದೇ ತಪ್ಪು ಮಾಡಿ, ಅವರಿಂದ ನಿಂದನೆ ಕೇಳಬೇಕಾದೀತು. ದೂರದ ಊರಿನಲ್ಲಿ ಅನಾಥಪ್ರಜ್ಞೆಯು ನಿಮ್ಮನ್ನು ಕಾಡಬಹುದು. ವ್ಯವಹಾರದಲ್ಲಿ ವಿಸ್ತರಣೆ ಇರುತ್ತದೆ, ಆದರೆ ಇಂದು ಹೂಡಿಕೆ ನಿರ್ಧಾರಗಳನ್ನು ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಿ. ಅಗ್ನಿಯ ಬಳಿಯಲ್ಲಿ ಎಚ್ಚರಿಕೆಯಿಂದ ಓಡಾಡಿ. ಸ್ತ್ರೀಯರು ವಿಶೇಷವಾದ ಗಮನಕೊಡುವುದು ಅಗತ್ಯ. ಒತ್ತಡದಿಂದ ನಿಮ್ಮ ಕಾರ್ಯವು ಮಂದಗತಿಯಲ್ಲಿ ಸಾಗುವುದು. ತಂತ್ರಜ್ಞರು ಇಂದು ಬಹಳ ಒತ್ತಡದಿಂದ ಇರುವರು. ಸ್ವಲ್ಪ ಮಾನಸಿಕ ಆಲಸ್ಯವು ಇರುವುದು. ಗೊಂದಲವನ್ನು ಇನ್ನೊಬ್ಬರ ಬಳಿ ಹೇಳಿ. ನಿಮ್ಮ ಮಾತನ್ನು ಸಂಗಾತಿಯು ತಳ್ಳಿಹಾಕಿದ್ದು ನಿಮಗೆ ಬೇಸರ ತಂದೀತು. ಪರಿಹಾರವನ್ನು ಕಂಡುಕೊಳ್ಳಬಹುದು. ನಿಮ್ಮ ಜಾಣ್ಮೆಯಿಂದ ನಿಮ್ಮ ಸಂಸ್ಥೆಯು ಹೆಚ್ಚಿನ ಯಶಸ್ಸನ್ನು ಗಳಿಸಬಹುದು. ನಿಮ್ಮ ಆಲೋಚನೆಗಳೇ ನಿಮ್ಮನ್ನು ನಿರೂಪಿಸುತ್ತವೆ. ಎಂದೋ ಆದ ತಪ್ಪನ್ನು ಇಂದು ನೆನಪಿಸಿಕೊಳ್ಳುವ ಅಗತ್ಯವಿಲ್ಲ.

ಕರ್ಕಾಟಕ ರಾಶಿ: ಪರರ ಕುರಿತು ಚರ್ಚಿಸುತ್ತಾ ಇಂದಿನ ಸಮಯ ಹಾಳು. ಕುಟುಂಬ ಕೆಲವು ಸಮಸ್ಯೆಗಳನ್ನು ಮಾತುಕತೆಯ ಮೂಲಕ ಪರಿಹಾರವಾಗಲಿದೆ. ಸಾಮಾಜಿಕ ಕಾರ್ಯಗಳಲ್ಲಿ ಆಸಕ್ತಿ. ಸಂಗಾತಿಯ ಬಂಧುಗಳು ಮನೆಗೆ ಆಗಮಿಸಬಹುದು. ಹೊಸ ಯೋಜನೆಯನ್ನು ನಿಮ್ಮದಾಗಿಸಿಕೊಳ್ಳುವಿರಿ. ಶುಭ ಕಾರ್ಯದಲ್ಲಿ ನೀವು ಭಾಗವಹಿಸುವಿರಿ. ಕಳೆದುಕೊಂಡ ಸಂಪತ್ತು ಮತ್ತಾವುದೋ ರೀತಿಯಲ್ಲಿ ಬರಬಹುದು. ಸಣ್ಣ ಮಕ್ಕಳಿಂದ ನೆಮ್ಮದಿಯು ಸಿಗಲಿದೆ. ದಾಂಪತ್ಯದಲ್ಲಿ ಉಂಟಾದ ಕಲಹವನ್ನು ಕುಳಿತು ನೀವೇ ಸರಿ ಮಾಡಿಕೊಳ್ಳಿ. ಜೀವನವು ಸಪ್ಪೆಯಾದಂತೆ ಅನ್ನಿಸೀತು. ಹೊಸ ಜನ, ಹೊಸ ಸ್ಥಳ ಹಾಗೂ ಹೊಸ ವಿಚಾರದ ಕಡೆ ಗಮನವು ಬೇಕೆನಿಸುವುದು. ನಿಮ್ಮ ಯಶಸ್ಸನ್ನು ಮನೆಯವರು ಸಂಭ್ರಮಿಸಬಹುದು. ರಾಜಕಾರಣದತ್ತ ನಿಮ್ಮ ಒಲವು ಹೆಚ್ಚಾಗುವುದು. ಪ್ರಭಾವಿ ವ್ಯಕ್ತಿಗಳು ನಿಮ್ಮನ್ನು ಪರಿವರ್ತಿಸುವರು. ಆದಾಯದ ಮೂಲವು ಸರಿಯಾಗಿ ಇರಲಿದೆ. ನಿಮ್ಮ ಸಹೋದರನ ಆರೋಗ್ಯದಲ್ಲಿ ವ್ಯತ್ಯಾಸವು ಕಾಣಿಸಬಹುದು. ಹೂಡಕೆಯಲ್ಲಿ ನಿಮಗೆ ಆಸಕ್ತಿಯು ಇಂದು ಕಡಿಮೆ ಇರಲಿದೆ. ನೌಕರರಿಗೆ ಆತಿಥ್ಯ ನೀಡಿ ಅವರನ್ನು ಸಂತೋಷಪಡಿಸುವಿರಿ.

ಸಿಂಹ ರಾಶಿ: ಯಾರೋ ಟೀಕಿಸಿದ ಮಾತ್ರಕ್ಕೆ ನಿಮ್ಮ ಆತ್ಮವಿಶ್ವಾಸವನ್ನು ಕಳೆದುಕೊಳ್ಳುವ ಅಗತ್ಯವಿಲ್ಲ. ನಿಮ್ಮ ಬಗ್ಗೆ ಒಂದು ಅವಲೋಕನವನ್ನು ನೀವು ಮಾಡಿಕೊಳ್ಳಿ ಸಾಕು. ಹತ್ತಾರು ವೃತ್ತಿಕ್ಷೇತ್ರಗಳು ನಿಮ್ಮ ಕೈಬೀಸಿ ಕರೆದರೂ ಯಾವುದಕ್ಕೂ ಹೋಗಲು ನಿಮಗೆ ಆಸಕ್ತಿ ಇರದು.‌ ನೀವಂದುಕೊಂಡಿದ್ದನ್ನೇ ಮಾಡುವ ಛಾತಿ ಇರುವುದು. ವಿದ್ಯಾರ್ಥಿಗಳು ಅಹಂಕಾರದ ವರ್ತನೆಯನ್ನು ತೋರಿಸಬಹುದು. ಇಂದಿನ ಓಡಾಟದ ದಣಿವು ನಿಮ್ಮ ಉತ್ಸಾಹವನ್ನು ಕುಗ್ಗಿಸೀತು. ನಿಮ್ಮ ಜೀವನ ಸಂಗಾತಿಯಿಂದ ನಿಮಗೆ ಅಚ್ಚರಿಯೊಂದು ಸಿಗಬಹುದು. ವ್ಯವಹಾರದಲ್ಲಿ ಯಾರನ್ನೂ ಕುರುಡಾಗಿ ನಂಬಬೇಡಿ. ತಿಳಿವಳಿಕೆಯನ್ನು ಹೇಳಬೇಕಾದೀತು. ಎಲ್ಲವನ್ನೂ ನಂಬಿಕೆಯ ಆಧಾರದ ಮೇಲೆ ಸ್ವೀಕರಿಸಬೇಕಿಲ್ಲ. ಸರ್ಕಾರಿ ಉದ್ಯೋಗಿಗಳಿಗೆ ನಿಮ್ಮ ಚಾತುರ್ಯದ ಕಾರಣದಿಂದ ಹೆಚ್ಚಿನ ಅಧಿಕಾರವು ಪ್ರಾಪ್ತವಾಗುವುದು. ಧೈರ್ಯದಿಂದ ಮುನ್ನಡೆದರೆ ಯಾವ ತೊಂದರೆಯೂ ತೊಂದರೆಯಾಗಿ ಉಳಿಯದು. ಬಾರದ ಭಾಗ್ಯವನ್ನು ಬಯಸುತ್ತ ಬಳಲುವುದು ಬದುಕಾಗದು. ಪ್ರಯಾಣದಲ್ಲಿ ಯಾವುದೇ ತೊಂದರೆಯು ಬಾರದಂತೆ ದೈವವನ್ನು ಪ್ರಾರ್ಥಿಸಿ.

ಕನ್ಯಾ ರಾಶಿ: ವಿವಾಹದ ವಿಚಾರಕ್ಕೆ ಶತ್ರುಗಳ ಅಡ್ಡಿಯು ಬರಬಹುದು. ವಾಹನವನ್ನು ಚಲಾಯಿಸುವಾಗ ಸಾವಧಾನತೆ ಇರಲಿ. ಬಂಧುಗಳು ನಿಮ್ಮನ್ನು ಆಡಿಕೊಳ್ಳುವುದು ನಿಮಗೆ ಸಹಿಸಲಾಗದು. ನಿಮ್ಮ ಶ್ರಮದ‌ ಸಾಧನೆಯನ್ನು ಇತರರ ಜೊತೆ ಹಂಚಿಕೊಳ್ಳುವಿರಿ. ದುಡುಕಿ ಏನನ್ನಾದರೂ ತಪ್ಪನ್ನು ಮಾಡಿಕೊಳ್ಳುವುದು ಬೇಡ. ಕಛೇರಿಯಲ್ಲಿ ನಿಮ್ಮ ಅನುಪಸ್ಥಿತಿಯಿಂದ ಗೊಂದಲವಾದೀತು. ನಿಮ್ಮ ಕೆಲಸದಲ್ಲಿ ಅಜಾಗರೂಕರಾಗಿರಬೇಡಿ. ಇದು ಸವಾಲುಗಳಿಗೆ ಕಾರಣವಾಗಬಹುದು. ಒಂದೇ ಬಾರಿಗೆ ಹಲವು ಕೆಲಸಗಳಿಗೆ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಡಿ. ನ್ಯಾಯಾಲಯದ ವಿಚಾರದಲ್ಲಿ ನಿಮಗೆ ಹಿನ್ನಡೆಯ ಸಾಧ್ಯತೆ ಇದೆ. ನಿಮಗೆ ಬರಬೇಕಾದ ಹಣದ ವಿಚಾರದಲ್ಲಿಯೂ ನಿಮಗೆ ಸೋಲಾಗುವುದು. ಮನೆಯಲ್ಲಿಯೂ ನಿಮ್ಮ ಮಾತಿಗೆ ಸರಿಯಾದ ಬೆಲೆಯೂ ಸಿಗದು. ಕಛೇರಿಯಲ್ಲಿ ಇಂದು ನಿಮ್ಮಿಂದ ತಪ್ಪಾಗಿದ್ದು ಅದನ್ನು ನೀವು ಒಪ್ಪಿಕೊಳ್ಳಲಾರಿರಿ. ಅಪಾಯದ ಮನ್ಸೂಚನೆಯಿಂದ ಭಯ. ದುರ್ವ್ಯಸನದಿಂದ ಸಂಪತ್ತನ್ನು ನಷ್ಟ ಮಾಡಿಕೊಳ್ಳುವಿರಿ. ನಿಮ್ಮ ತಪ್ಪಿಗೆ ಪಶ್ಚಾತ್ತಾಪವಾದರೂ ಕೊನೆಯ ಹಂತವಾಗಿ ಇರಲಿ.

ತುಲಾ ರಾಶಿ: ಪ್ರಶಾಂತವಾದ ಸ್ಥಳಗಳಲ್ಲಿ ಇಂದಿನ ಸಮಯವು ಕಳೆದುಹೋಗುವುದು. ನಿಮ್ಮ ಉತ್ಪನ್ನಗಳನ್ನು ಮಾರಾಟ ಮಾಡಿ ಧನವನ್ನು ಸಂಪಾದಿಸುವಿರಿ. ವಿದೇಶದಲ್ಲಿ ಅಧ್ಯಯನ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಒಳ್ಳೆಯ ಸುದ್ದಿ ಸಿಗಬಹುದು. ಮಂಗಲ ಕಾರ್ಯದಲ್ಲಿ ಇಂದು ನೀವು ಸಂತೋಷದಿಂದ ಪಾಲ್ಗೊಳ್ಳುವಿರಿ. ಇದರಿಂದ ನಿಮ್ಮ ನೆಮ್ಮದಿಯೂ ದೂರವಾದೀತು. ವಿದ್ಯಾಭ್ಯಾಸದಲ್ಲಿ ಯಶಸ್ಸನ್ನು ಸಾಧಿಸಲು ಅನೇಕ ಮಾರ್ಗಗಳು ಇರಲಿದೆ. ಜೀವನಕ್ಕೆ ಸಂಬಂಧಿಸಿದ ವಿಚಾರದಲ್ಲಿ ಗಟ್ಟಿಯಾದ ತೀರ್ಮಾನವನ್ನು ಪಡೆಯುವುದು ಕಷ್ಟವಾಗುವುದು. ನಿಮ್ಮನ್ನು ಬಳಸಿಕೊಳ್ಳಬಹುದು, ಯಾರನ್ನೂ ಅತಿಯಾಗಿ ನಂಬಿ ನೀವು ಮೋಸಹೋಗಬಹುದು. ವಿವಾಹಕ್ಕೆ ಸಂಬಂಧಿಸಿದಂತೆ ತುರ್ತಾಗಿ ತೀರ್ಮಾನವನ್ನು ತೆಗೆದುಕೊಳ್ಳುವುದು ಸೂಕ್ತ. ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವ ಭೀತಿಯು ಇರಲಿದೆ. ನಿಮ್ಮವರ ತಪ್ಪುಗಳನ್ನು ತಿದ್ದಿಕೊಳ್ಳಲು ಸಮಯವನ್ನು ಕೊಡಿ. ಭೂಮಿಯ ವ್ಯವಹಾರದಿಂದ ಅಲ್ಪ ಅಭಿವೃದ್ಧಿಯು ಆಗಲಿದೆ.

ವೃಶ್ಚಿಕ ರಾಶಿ: ಇಂದು ನಿಮ್ಮ‌ ಕಾರ್ಯವನ್ನು ಪ್ರಶಂಸಿಸುವವರು ಸಿಕ್ಕಾರು. ಅವರ ಮಾತಿನಿಂದ ನಿಮ್ಮ‌ ಮನೋಬಲ ಅಧಿಕ. ಸಣ್ಣ ಅಂತರದಲ್ಲಿ ಅವಕಾಶಗಳನ್ನು ತಪ್ಪಿಸಿಕೊಂಡು ಬೇಸರಿಸುವಿರಿ. ಆರ್ಥಿಕ ಪರಿಸ್ಥಿತಿ ಚೆನ್ನಾಗಿರುತ್ತದೆ. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿ ಇರುತ್ತದೆ. ಕುಟುಂಬದಲ್ಲಿ ಎಲ್ಲರೂ ಸುಖದಿಂದ ಜೀವಿಸುವ ಕಾರಣ ನಿಮ್ಮಲ್ಲಿಯೂ ನೆಮ್ಮದಿಯು ಕಾಣಿಸುವುದು. ದಾಂಪತ್ಯದಲ್ಲಿ ಪರಸ್ಪರ ನೋವು ಹಂಚಿಕೊಂಡು ಸಮಾಧಾನವಾಗುವಿರಿ. ಮನೆಯ ನಿರ್ಮಾಣ ಕಾರ್ಯವು ಬಹಳ ವಿಳಂಬದಂತೆ ಅನ್ನಿಸುವುದು. ನಿಮ್ಮ ನಡವಳಿಕೆಗೆ ಬಂಧುಗಳಿಂದ ಪ್ರಶಂಸೆಯು ಸಿಗಲಿದೆ. ಅಂದುಕೊಂಡಂತೆ ಕಾರ್ಯವು ಸಾಗದು ಎಂಬ ಕೊರಗು ಇರುವುದು. ನಿಮ್ಮ ಬಲದ ಮೇಲೇ ಕೆಲಸವನ್ನು ಪ್ರಾರಂಭಿಸಿ. ಆಲಂಕಾರಿಕ ವಿಚಾರಗಳ ಬಗ್ಗೆ ಹೆಚ್ಚು ಗಮನವಿರುವುದು. ಇನ್ನೊಬ್ಬರ ಗೊತ್ತಿಲ್ಲದ ವಿಚಾರವನ್ನು ಹೇಳುವುದು ಬೇಡ. ಅನೇಕ ದಿನಗಳಿಂದ ಉದ್ಯೋಗ ನಿರ್ವಹಣೆಯಲ್ಲಿ ಬೇಸರ ಉಂಟಾಗಿದ್ದು ಹೊರಗೆ ಸುತ್ತಾಡುವ, ವಿರಾಮವನ್ನು ಪಡೆಯುವ ಮನಸ್ಸು ಇರಲಿದೆ.

ಧನು ರಾಶಿ: ನಿಮ್ಮ ಹಠದ ಸ್ವಭಾವವು ಜೊತೆಗಾರರಿಗೆ ಕಿರಿಕಿರಿ ಆದೀತು. ನೀವಂದುಕೊಂಡಂತೆ ಎಲ್ಲವೂ ಆಗಬೇಕು ಎನ್ನುವುದು ತಲೆಯಿಂದ ತೆಗೆಯುವುದು ಅವಶ್ಯಕ. ಕುಟುಂಬ ಜೀವನವು ಸಂತೋಷದಿಂದ ಕೂಡಿರುತ್ತದೆ. ಜೀವನದಲ್ಲಿ ಹೊಸ ಅನುಭವಗಳನ್ನು ಆನಂದಿಸಲು ಸಿದ್ಧರಾಗಿರಿ. ಸಂಗಾತಿಯ ಬದಲಾವಣೆಯು ನಿಮಗೆ ಅನಿರೀಕ್ಷಿತ ಆದೀತು. ಇನ್ನೊಬ್ಬರ ಅನುಭವವು ನಿಮಗೆ ಪಾಠವಾಗಬಹುದು. ನಿಮ್ಮ ವಸ್ತುಗಳು ಕಾಣೆಯಾಗಿದ್ದು ಹಲವು ದಿನಗಳ ಅನಂತರ ತಿಳಿದೀತು. ಭೂಮಿಯ ಲಾಭದ ವಿಚಾರದಲ್ಲಿ ಸರಿಯಾದ ಮಾತುಕತೆಗಳು ಆಗಲಿ. ಆರೋಪ ಪ್ರತ್ಯಾರೋಪಗಳಿಂದ ಕಲಹ. ದುಸ್ಸಾಧ್ಯ ಎನಿಸಿದ ಕಾರ್ಯವನ್ನು ಮಾಡಲು ಪ್ರಯತ್ನಿಸುವುದು ಬೇಡ. ಸ್ಥಿರಾಸ್ತಿಯನ್ನು ಮಾರಾಟ ಮಾಡುವ ಪ್ರಯತ್ನದಲ್ಲಿ ಇರುವಿರಿ. ಇಂದಿನ ಮನೆಯ ಕೆಲಸದಿಂದ ನಿಮಗೆ ಶ್ರಮವಾಗುವುದು. ಹಳೆಯ ಆಸೆಯನ್ನು ನೀವು ತೀರಿಸಿಕೊಳ್ಳುವ ಅವಕಾಶವಿರಲಿದೆ. ಮನಸ್ಸಿಗೆ ಸಹೋದರನ ಮಾತು ಘಾಸಿಮಾಡೀತು. ಇಂದು ನಿಮ್ಮ ಅನಗತ್ಯ ಮಾತುಗಳು ಕಲಹಕ್ಕೆ ಕಾರಣವಾಗಬಹುದು.

ಮಕರ ರಾಶಿ: ಇಂದು ಆರ್ಥಿಕ ದೃಷ್ಟಿಕೋನವನ್ನು ಇಟ್ಟುಕೊಂಡೇ ನಿಮ್ಮ ಎಲ್ಲ ಯೋಜನೆಗಳನ್ನು ಆರಂಭಿಸುವಿರಿ. ಅಸಮಾಧಾನವನ್ನು ಯಾವುದಾದರೂ ತಂತ್ರದಿಂದ ಸರಿಮಾಡಿಕೊಳ್ಳುವಿರಿ. ವೃತ್ತಿಪರ ಜೀವನದಲ್ಲಿ ಕಠಿಣ ಪರಿಶ್ರಮ ಮತ್ತು ಸಮರ್ಪಣೆಗೆ ಪ್ರತಿಫಲ ದೊರೆಯುತ್ತದೆ. ಮನೋರಂಜನೆಯು ನಿಮಗೆ ಮುಖ್ಯವಾದೀತು. ಆಪ್ತರಿಗಾಗಿ ಕೊಟ್ಟ ಸಮಯವೂ ವ್ಯರ್ಥವಾದೀತು. ಸ್ಥಿರಾಸ್ತಿಗಾಗಿ ಹೆಚ್ಚು ಓಡಾಡುವಿರಿ. ವಿದೇಶ ಪ್ರಯಾಣವು ನಿಮಗೆ ಇಷ್ಟವಿಲ್ಲದಿದ್ದರೂ ಮಾಡುವುದು ಅನಿವಾರ್ಯವಾದೀತು. ಒಳ್ಳೆಯ ಭಾವಕ್ಕೆ ಫಲ ಸಿಗಲಿದೆ. ಬೇಕಾದಷ್ಟು ಕೆಲಸಗಳಿದ್ದರೂ ಯಾರ ಬಳಿಯೂ ಹೇಳಿಕೊಳ್ಳುವುದಿಲ್ಲ. ಉದ್ಯಮದ ಮಿತ್ರನನ್ನು ಮನೆಗೆ ಆಹ್ವಾನಿಸುವಿರಿ. ಉದ್ಯಮವು ಬೆಳೆಯುತ್ತಿರುವುದು ಸಂತೋಷ ಕೊಡುವುದು. ಚಾಲಕರಿಗೆ ಕರ್ತವ್ಯಕ್ಕೆ ಪ್ರಶಂಸೆ ಸಿಗುವುದು. ಅರಿವಿಲ್ಲದೆ ಇಂದಿನ ತುರ್ತು ಕಾರ್ಯವನ್ನು ಮರೆಯುವಿರಿ. ಅಸಹಜ ವರ್ತನೆಯಿಂದ ಸಂಗಾತಿಗೆ ಅನುಮಾನ ಬರುವುದು. ಮಕ್ಕಳ ಶಿಕ್ಷಣದ ಬಗ್ಗೆ ನಿಮಗೆ ತೃಪ್ತಿ ಇರದು.

ಕುಂಭ ರಾಶಿ: ನೀವು ಇತರರಿಗೆ ಸಹಾಯ ಮಾಡಿ, ನೆಮ್ಮದಿಯನ್ನು ಪಡೆಯುವಿರಿ. ಯಾರ ಸಹಾಯವನ್ನೂ ನೀವು ಅಪೇಕ್ಷಿಸುವುದಿಲ್ಲ. ಕುಟುಂಬ ಸದಸ್ಯರ ನಡುವಿನ ಮನಸ್ತಾಪವನ್ನು ನೀವು ಬಗೆಹರಿಸುವುದು ತಕ್ಕಮಟ್ಟಿಗೆ ಸಾಧ್ಯವಾಗುವುದು. ವೃತ್ತಿಪರ ಜೀವನದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಲು ಹೊಸ ಹೊಸ ಕಾರ್ಯ ಜವಾಬ್ದಾರಿಯನ್ನು ತೆಗೆದುಕೊಳ್ಳಿ. ಬಾಡಿಗೆ ಮನೆಯಲ್ಲಿ ಇರುವವರು ಹೊಸ ಮನೆಗೆ ಹೋಗುವಿರಿ. ಸರ್ಕಾರದ ನಿಮ್ಮ ಕೆಲಸವು ಬೇಗನೆ ಮುಗಿದುಹೋಗುವುದು. ಯಾರ ಮೆಚ್ಚುಗೆಯೂ ನಿಮಗೆ ಸಮಾಧಾನ ತರದು. ಖರೀದಿಯಲ್ಲಿ ನೀವು ಸ್ಥೂಲವಾಗಿ ಖರ್ಚನ್ನು ಅಂದಾಜಿಸಿಕೊಳ್ಳಬೇಕಾಗುವುದು. ಕಾರಣದಿಂದ ವೃಥಾ ಕಾಲಹರಣವಾಗಲಿದ್ದು ಕಛೇರಿಯ ಕೆಲಸದ ಬಗ್ಗೆಯೇ ಚಿಂತೆ ಇರುವುದು. ಮಾರಾಟದ ವಿಚಾರವಾಗಿ ನೀವು ಬೇರೆ ಊರಿಗೆ ಹೋಗಬೇಕಾಗಬಹುದು. ಅವಿವಾಹಿತರಾಗಿರುವವರಿಗೆ ಕೊರಗು ಕಾಣಿಸವಹುದು. ಆದಾಯವು ಕಡಿಮೆ ಆದಂತೆ ಅನ್ನಿಸುವುದು. ನಿಮ್ಮ ಸ್ವಭಾವಕ್ಕೆ ಹೊಂದಿಕೊಳ್ಳುವ ಸಂಗಾತಿಯು ಸಿಗುವುದು ಕಷ್ಟವಾದೀತು. ಇಂದಿನ ಪ್ರಯಾಣದಲ್ಲಿ ಅಪರಿಚಿತರ ಗೆಳೆತನವಾಗಬಹುದು.

ಮೀನ ರಾಶಿ: ಇಂದು ಕೆಲಸದ ಸ್ಥಳದಲ್ಲಿ ನಿಮ್ಮ ವ್ಯವಸ್ಥೆಯನ್ನು ಬದಲಾಯಿಸುವಿರಿ. ಮಹಿಳೆಯರ ಜೊತೆ ಹೆಚ್ಚು ಸಮಯವನ್ನು ನಗಿಸುತ್ತಾ ಕಳೆಯುವಿರಿ. ಹೊಸ ವ್ಯವಹಾರವನ್ನು ಪ್ರಾರಂಭಿಸಲು ಶುಭ ಸಮಯ. ವೈವಾಹಿಕ ಸಮಸ್ಯೆಗಳು ಬಹಳ ಸಮಯದಿಂದ ಇದ್ದರೆ, ಹಿರಿಯರ ಸಹಾಯದಿಂದ ಪರಿಹರಿಸಲು ಸಾಧ್ಯವಾಗುತ್ತದೆ. ಇರುವ ಒಂದು ವ್ಯಾಪಾರವನ್ನು ಕ್ರಮಬದ್ಧವಾಗಿ ನೋಡಿಕೊಳ್ಳಲಾಗದು. ಸಹವಾಸದಿಂದ ದಾರಿಯು ಬದಲಾಗುವುದು ಸಾಧ್ಯತೆ ಇದೆ. ಆಪ್ತರ ಜೊತೆಗಿನ ಮಾತುಕತೆಯು ನಿಮಗೆ ಆಹ್ಲಾದವನ್ನು ಉಂಟುಮಾಡುವುದು. ಭೂಮಿಯ ಮೇಲೆ ಸಾಲವನ್ನು ಮಾಡಬೇಕಾದೀತು. ಸಹೋದ್ಯೋಗಿಗಳು ನಿಮ್ಮನ್ನು ಎಲ್ಲದಕ್ಕೂ ಬೊಟ್ಟು ಮಾಡಿ ತೋರಿಸಿಯಾರು‌. ಹಳೆಯ ಕೆಲಸದಲ್ಲಿ ಮಂದಗತಿ ಇರಲಿದೆ. ವ್ಯಾಪಾರದಲ್ಲಿ ಅಲ್ಪ ಲಾಭವೇ ಆದರೂ ನೆಮ್ಮದಿ. ಯಾರಿಗೋ ಸಹಾಯ ಮಾಡಲು ಹೋಗಿ ಆಪತ್ತಿನಲ್ಲಿ ಸಿಕ್ಕಿಕೊಳ್ಳಬಹುದು. ಸ್ನೇಹಿತರ ಜೊತೆ ನೋವನ್ನು ಹಂಚಿಕೊಂಡು ಸಮಾಧಾನ ತಂದುಕಳ್ಳುವಿರಿ. ತಂದೆಯ ಜೊತೆ ಅಪರೂಪದ ಸಮಾರಂಭಕ್ಕೆ ಹೋಗುವಿರಿ.

Source : https://tv9kannada.com/horoscope/horoscope-today-march-06-2025-people-of-this-zodiac-sign-are-afraid-of-the-foreboding-of-danger-zodiac-signs-in-kannada-ggs-987317.html

Leave a Reply

Your email address will not be published. Required fields are marked *