ಸಿದ್ದರಾಮಯ್ಯ ಬಜೆಟ್​ನಲ್ಲಿ ಜಿಲ್ಲೆಗಳಿಗೆ ಸಿಕ್ಕಿದ್ದೇನು? ಘೋಷಣೆಯಾದ ಅನುದಾನವೆಷ್ಟು?; ಇಲ್ಲಿದೆ ಫುಲ್​ ಡೀಟೇಲ್ಸ್​​.

BUDGET 2025 : ಬಜೆಟ್ 2025 ರಲ್ಲಿ ಜಿಲ್ಲೆಗಳಿಗೆ ಘೋಷಣೆಯಾಗಿರುವ ಯೋಜನೆಗಳ ಮಾಹಿತಿ ಇಲ್ಲಿದೆ.

ಬೆಂಗಳೂರು: ಇಂದು (ಶುಕ್ರವಾರ, ಮಾ.7) ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2025-26ನೇ ಸಾಲಿನ ಸುದೀರ್ಘ ಬಜೆಟ್​ನಲ್ಲಿ ಹಲವಾರು ಯೋಜನೆಗಳನ್ನು ಘೋಷಿಸಲಾಗಿದೆ. ಈ ಘೋಷಣೆಗಳ ಪೈಕಿ ನಿರ್ದಿಷ್ಟವಾಗಿ ಯಾವ ಜಿಲ್ಲೆಗೆ ಯಾವ ಯೋಜನೆ ಮಂಜೂರಾಗಿದೆ, ಅದಕ್ಕೆ ಎಷ್ಟು ಹಣ ಮೀಸಲಿಡಲಾಗಿದೆ ಎಂಬ ಜಿಲ್ಲಾವಾರು ಮಾಹಿತಿ ಇಲ್ಲಿದೆ:

ಉತ್ತರ ಕನ್ನಡ: ಜಿಲ್ಲೆಯ ಜೊಯಿಡಾ ತಾಲೂಕನ್ನು ರಾಜ್ಯದ ಪ್ರಥಮ ಸಾವಯವ ತಾಲೂಕಾಗಿ ಪರಿವರ್ತಿಸಿ, ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ಪ್ರಮಾಣೀಕರಣ ವ್ಯವಸ್ಥೆ.

ನೌಕಾನೆಲೆಯ ವಿಮಾನ ನಿಲ್ದಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ ಅಗತ್ಯ ಅನುದಾನ ಒದಗಿಸಿ ಕಾಮಗಾರಿ ಪ್ರಾರಂಭ.

ಮಂಡ್ಯ: ಮಂಡ್ಯ ಕೃಷಿ ವಿಶ್ವವಿದ್ಯಾಲಯದ ಮೂಲಸೌಕರ್ಯಕ್ಕೆ 25 ಕೋಟಿ ರೂ. ಅನುದಾನ. ಪ್ರಸಕ್ತ ಸಾಲಿನಲ್ಲಿ ತರಗತಿಗಳ ಆರಂಭ.

ಬೆಂಗಳೂರು: ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸ್ಯ ಫೀನೊಟೈಪಿಂಗ್ ಸೌಲಭ್ಯ ಹಾಗೂ ಸಾವಯವ ಉತ್ಪನ್ನ ಮತ್ತು ಸಿರಿಧಾನ್ಯಗಳ ಹಬ್ ಸ್ಥಾಪನೆ.

  • ಬೆಂಗಳೂರು ಹೊರವಲಯದಲ್ಲಿ ಹೊಸ ಸ್ಯಾಟಲೈಟ್ ಮಾರುಕಟ್ಟೆ ಸ್ಥಾಪನೆ.
  • ಬೆಂಗಳೂರಿನಲ್ಲಿ ಸುಸಜ್ಜಿತ ಕುರಿ ಮತ್ತು ಮೇಕೆ ಮಾರುಕಟ್ಟೆ ನಿರ್ಮಾಣ.
  • 93.50 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಪೂರ್ವ ತಾಲೂಕಿನ 18 ಕೆರೆಗಳನ್ನು ತುಂಬಿಸುವ ಯೋಜನೆ.
  • ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವ ವಿದ್ಯಾಲಯ ಎಂದು ಮರು ನಾಮಕರಣ.
  • ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್​ಸಿ ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳಾಗಿ ಅಭಿವೃದ್ಧಿಪಡಿಸಲಾಗುವುದು.
  • ಬೆಂಗಳೂರು ಉತ್ತರ ತಾಲೂಕಿನ ವ್ಯಾಪ್ತಿಯಲ್ಲಿ 150 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಯ ಅತ್ಯಾಧುನಿಕ ಮತ್ತು ಸುಸಜ್ಜಿತ ಆಸ್ಪತ್ರೆ ನಿರ್ಮಾಣ.
  • 26 ಕೋಟಿ ರೂ. ವೆಚ್ಚದ ನೆಫ್ರೊ ಯುರಾಲಜಿ ಸಂಸ್ಥೆಯ ಕಟ್ಟಡವನ್ನು ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ಸಮರ್ಪಣೆ
  • 297 ಕೋಟಿ ರೂ ವೆಚ್ಚದಲ್ಲಿ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯನ್ನು 500 ಹಾಸಿಗೆ ಸಾಮರ್ಥ್ಯಕ್ಕೆ ಮೇಲ್ದರ್ಜೆಗೆ.
  • ಬೆಂಗಳೂರಿನಲ್ಲಿ ಹಜ್ ಭವನದಲ್ಲಿ ಹೆ್ಚ್ಚುವರಿ ಕಟ್ಟಡ ನಿರ್ಮಾಣ.
  • ಅಂತಾರಾಷ್ಟ್ರೀಯ ವಲಸೆ ಕೇಂದ್ರದ ಮೂಲಕ ಅಂತಾರಾಷ್ಟ್ರೀಯ ಉದ್ಯೋಗ ಮೇಳದ ಆಯೋಜನೆ
  • ವಿಶ್ವ ಕೌಶಲ್ಯ ಸ್ಪರ್ಧೆಯ ಪೂರ್ವ ಸಿದ್ಧತೆಗಾಗಿ ಬೆಂಗಳೂರಿನಲ್ಲಿ ಇಂಡಿಯಾ ಸ್ಕಿಲ್ಸ್ 2026 ಸ್ಪರ್ಧೆ ಆಯೋಜನೆ
  • ಉತ್ತರ ದಕ್ಷಿಣ ಮತ್ತು ಪೂರ್ವ ಪಶ್ಚಿಮ ಸುರಂಗ ಮಾರ್ಗದ ಕಾಮಗಾರಿಗಳಿಗೆ 19 ಸಾವಿರ ಕೋಟಿ ರೂ. ಗ್ಯಾರಂಟಿ.
  • ನಮ್ಮ ಮೆಟ್ರೋ ಹಂತ-3 ಯೋಜನೆಯೊಂದಿಗೆ 8916 ಕೋಟಿ ರೂ. ವೆಚ್ಚದಲ್ಲಿ 40.50 ಕಿಮೀ ಉದ್ದದ ಡಬಲ್ ಡೆಕರ್ ಫ್ಲೈಓವರ್ ರಸ್ತೆ ನಿರ್ಮಾಣ.
  • ಬಿಬಿಎಂಪಿ ವ್ಯಾಪ್ತಿಯಲ್ಲಿರುವ 460 ಕಿಮೀ ಆರ್ಟೆರಿಯಲ್ ಮತ್ತು ಸಬ್ ಆರ್ಟೆರಿಯಲ್ ರಸ್ತೆ ಜಾಲ 660 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ.
  • 120 ಕಿಮೀ ಉದ್ದದ ಫ್ಲೈ ಓವರ್ ಹಾಗೂ ಗ್ರೇಡ್ ಸೆಪರೇಟರ್ ನಿರ್ಮಾಣ.
  • ಬ್ರಾಂಡ್ ಬೆಂಗಳೂರು ಯೋಜನೆಯಡಿ ಅನುಮೋದನೆಗೊಂಡ 21 ಯೋಜನೆಗಳು 1800 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ಕ್ರಮ.
  • ಬ್ರಾಂಡ್ ಬೆಂಗಳೂರು ಅಭಿಯಾನದಡಿಯಲ್ಲಿ ಮುಂದಿನ ಮೂರು ವರ್ಷಗಳಲ್ಲಿ 413 ಕೋಟಿ ರೂ. ವೆಚ್ಚದ ಸಮಗ್ರ ಆರೋಗ್ಯ ಯೋಜನೆ ಜಾರಿ.
  • ಪ್ರವಾಹ ಪರಿಸ್ಥಿತಿಯನ್ನು ನಿಯಂತ್ರಿಸಲು ವ್ಯವಸ್ಥಿತ ಒಳಚರಂಡಿ ಜಾಲ ಮತ್ತು ಎಸ್​ಟಿಪಿಗಳ ನಿರ್ಮಾಣಕ್ಕೆ ಬಿಬಿಎಂಪಿ ಹಾಗೂ ಬಿಡಬ್ಲ್ಯೂ ಎಸ್ ಎಸ್​ ಬಿಗೆ 3000 ಕೋಟಿ ಆರ್ಥಿಕ ನೆರವು.
  • ಬಿಡಬ್ಲ್ಯೂ ಎಸ್ ಎಸ್ ಬಿ ವತಿಯಿಂದ ಎಸ್​ಟಿಪಿ ಘಟಕಗಳ ತ್ಯಾಜ್ಯ ಬಳಸಿ ಬಯೊ ಗ್ಯಾಸ್ ಆಧರಿತ ಆದಾಯ ಮತ್ತು ಕಾರ್ಬನ್ ಕ್ರೆಡಿಟ್​ಗಳ ಉಪಯೋಗ ಪಡೆಯುವ ಪಿಪಿಪಿ ಮಾದರಿಯ ಯೋಜನೆ.
  • ಪೆರಿಫೆರಲ್ ರಿಂಗ್ ರೋಡ್ ಯೋಜನೆಯನ್ನು ಬೆಂಗಳೂರು ಬಿಸಿನೆಸ್ ಕಾರಿಡಾರ್ ಎಂದು ಮರುನಾಮಕರಣಗೊಳಿಸಿ 73 ಕಿಮೀ ಉದ್ದದ ರಸ್ತೆ ನಿರ್ಮಿಸಲು ಹುಡ್ಕೊ ಬ್ಯಾಂಕ್ ನೆರವಿನೊಂದಿಗೆ 27000 ಕೋಟಿ ರೂ. ಯೋಜನೆ.
  • ದೇವನಹಳ್ಳಿಯವರೆಗೆ ಮೆಟ್ರೋ ಜಾಲ ವಿಸ್ತರಿಸಲು ಯೋಜನೆ.
  • ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವತಿಯಿಂದ 234 ಕೋಟಿ ರೂ. ವೆಚ್ಚದಲ್ಲಿ ವರ್ತೂರು ಮತ್ತು ಬೆಳ್ಳಂದೂರು ಕೆರೆಗಳ ಪುನರುಜ್ಜಿವನ.
  • ಬೈಯಪ್ಪನಹಳ್ಳಿ-ಹೊಸೂರು ಹಾಗೂ ಯಶವಂತಪುರ-ಚನ್ನಸಂದ್ರ ದ್ವಿಪಥಿಕರಣ ಯೋಜನೆಗಳಿಗೆ 70 ಕಿಮೀ ಲೇನ್ ದ್ವಿಪಥಿಕರಣಗೊಳಿಸಲು ರಾಜ್ಯ ಸರ್ಕಾರದ ವತಿಯಿಂದ 406 ಕೋಟಿ ರೂ. ಪ್ರಸಕ್ತ ಸಾಲಿನಲ್ಲಿ ಲೋಕಾರ್ಪಣೆ.
  • ಬೆಂಗಳೂರು ಉಪನಗರ ರೈಲ್ವೆ ಯೋಜನೆ ಎರಡು ಕಾರಿಡಾರ್​ಗಳ ಕಾಮಗಾರಿ ಪ್ರಗತಿಯಲ್ಲಿದೆ. ಇನ್ನುಳಿದ ಎರಡು ಕಾರಿಡಾರ್​ಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಯೋಜನೆ ಕಾಲಮಿತಿಯೊಳಗೆ ಅನುಷ್ಠಾನ.
  • ಇವಿ ವಾಹನಗಳ ತಯಾರಿಕೆ ಹಾಗೂ ಬಳಕೆಗೆ ಉತ್ತೇಜನ ನೀಡಲು ಅತ್ಯಾಧುನಿಕ ತಂತ್ರಜ್ಞಾನವನ್ನೊಳಗೊಂಡ ಇವಿ ಕ್ಲಸ್ಟರ್ ನಿರ್ಮಾಣ.
  • ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಪಾಕ್ಸ್ ಕಾನ್ ಸಂಸ್ಥೆಯಿಂದ ಪ್ರಾರಂಭಗೊಂಡಿರುವ ಮೊಬೈಲ್ ಫೋನ್ ಉತ್ಪಾದನಾ ಘಟಕಕ್ಕೆ ಇಎಸ್​ಡಿಎಂ ನೀತಿಯಡಿ 6970 ಕೋಟಿ ರೂಪಾಯಿಗಳ ಪ್ರೋತ್ಸಾಹಕಗಳನ್ನು ನೀಡಲಾಗುವುದು.
  • ಬೆಂಕಿ ಅನಾಹುತದಲ್ಲಿ ತೀವ್ರ ಹಾನಿ ಸಂಭವಿಸಿದ ಬೆಂಗಳೂರು ಬಯೊ ಇನ್ನೋವೇಶನ್ ಸೆಂಟರ್​ನ ಪುನರ್ ನಿರ್ಮಾಣಕ್ಕೆ ಒಟ್ಟು 57 ಕೋಟಿ ರೂ. ನೆರವು. ಪ್ರಸಕ್ತ ಸಾಲಿನಲ್ಲಿ 20 ಕೋಟಿ ರೂ. ಅನುದಾನ.
  • ರಾಷ್ಟ್ರಕವಿ ಡಾ. ಜಿ.ಎಸ್. ಶಿವರುದ್ರಪ್ಪ ಟ್ರಸ್ಟ್​ನ ಕಾರ್ಯಚಟುವಟಿಕೆಗಳಿಗೆ ಕಟ್ಟಡ ನಿರ್ಮಾಣ ಮಾಡಲು 1 ಕೋಟಿ ರೂ.
  • ವಿದ್ಯಾನಗರದಲ್ಲಿರುವ ಈಜು ಕೊಳವನ್ನು ಹೀಟಿಂಗ್ ಮತ್ತು ಡೈವಿಂಗ್ ಪೂಲ್ ಗಳನ್ನು ನಿರ್ಮಿಸುವ ಮೂಲಕ ಅಂತಾರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೆ.
  • ಬಿಬಿಎಂಪಿ ವ್ಯಾಪ್ತಿಯಲ್ಲಿ 2000 ಕೋಟಿ ರೂ. ವೆಚ್ಚದಲ್ಲಿ ಪ್ರವಾಹ ನಿರ್ಮಾಣ ವ್ಯವಸ್ಥೆ.
  • 239 ಕೋಟಿ ರೂ. ವೆಚ್ಚದಲ್ಲಿ ಮಳೆ ನೀರು ಚರಂಡಿಗಳ ಪುನರ್ ನಿರ್ಮಾಣ.
  • ಚಲನಚಿತ್ರ ಅಕಾಡೆಮಿಯ 2.5 ಎಕರೆಯಲ್ಲಿರುವ ಮಲ್ಟಿಪ್ಲೆಕ್ಸ್ ಸಮುಚ್ಚಯ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ.
  • ನಗರದ 8 ಪೊಲೀಸ್ ವಿಭಾಗಗಳನ್ನು 11 ಕ್ಕೆ ಹೆಚ್ಚಿಸಲು ತೀರ್ಮಾನ.
  • ಪ್ರಾಜೆಕ್ಟ್ ಮೆಜೆಸ್ಟಿಕ್ ಯೋಜನೆಯಡಿ ಖಾಸಗಿ ಸಹಭಾಗಿತ್ವದಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು ವಾಣಿಜ್ಯ ಸಂಕೀರ್ಣದೊಂದಿಗೆ ಸಾರಿಗೆ ಹಬ್ ಆಗಿ ನಿರ್ಮಾಣ.
  • ಬೆಂಗಳೂರು ಮಹಾನಗರ ಸಾರಿಗೆಗೆ 9 ಸಾವಿರ ವಿದ್ಯುತ್ ಚಾಲಿತ ಬಸ್ ಗಳ ಸೇರ್ಪಡೆ.
  • ಕೆ ಆರ್ ಪುರದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಹೊಸ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಾಣ.

ಬೆಂಗಳೂರು ಗ್ರಾಮಾಂತರ : ಕರ್ನಾಟಕ ಗೃಹ ಮಂಡಳಿಯಿಂದ ಆನೇಕಲ್ ತಾಲೂಕಿನ ಸೂರ್ಯ ಸಿಟಿ 4ನೇ ಹಂತದ ಯೋಜನೆಯಡಿ 16140 ನಿವೇಶನಗಳ ಅಭಿವೃದ್ಧಿ.

ಆದಿನಾರಾಯಣ ಹೊಸಹಳ್ಳಿಯಲ್ಲಿ 20 ಎಕರೆ ನಿವೇಶನದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣ ಹಾಗೂ 5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸೈಕ್ಲಿಂಗ್ ವೆಲೊಡ್ರೊಮ್ ನಿರ್ಮಾಣ.

ವಿಜಯಪುರ:

  1. ಮುದ್ದೇಬಿಹಾಳ ತಾಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆ.
  2. 348 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ವಿಮಾನ ನಿಲ್ದಾಣದ ಕಾರ್ಯಾಚರಣೆ 2025-26 ನೇ ಸಾಲಿನಲ್ಲಿ ಪ್ರಾರಂಭ.
  3. ತಿಡಗುಂಡಿಯಲ್ಲಿ ಪ್ಲಗ್ ಅಂಡ್ ಪ್ಲೇ ಸೌಲಭ್ಯವಿರುವ ಫ್ಲಾಟ್ ಫ್ಯಾಕ್ಟರಿ ಸ್ಥಾಪನೆ.

  1. ಬೆಳಗಾವಿ:ಅಥಣಿ ತಾಲೂಕಿನಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆಗೆ ತಜ್ಞರಿಂದ ಕಾರ್ಯಸಾಧ್ಯತಾ ವರದಿ ಪಡೆಯಲು ತೀರ್ಮಾನ.
  2. ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಹಾಗೂ ಖಾನಾಪುರ ತಾಲೂಕಿನ ನಂದಗಡದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದ ವತಿಯಿಂದ 28 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ.
  3. ಘಟಪ್ರಭಾ ಆರೋಗ್ಯ ಧಾಮದಲ್ಲಿ ಡಾ. ಎನ್ ಎಸ್ ಹರ್ಡೇಕರ್ ಸ್ಮಾರಕ ನಿರ್ಮಾಣಕ್ಕೆ 2 ಕೋಟಿ ರೂ.
  4. 55 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡ ನಿರ್ಮಾಣ.

ಗದಗ:

  • ಡಂಬಳದಲ್ಲಿ ತೋಟಗಾರಿಕಾ ಕಾಲೇಜು ಸ್ಥಾಪನೆಗೆ ತಜ್ಞರಿಂದ ಕಾರ್ಯಸಾಧ್ಯತಾ ವರದಿ ಪಡೆಯಲು ತೀರ್ಮಾನ.
  • ಲಕ್ಕುಂಡಿಯಲ್ಲಿನ ಪಾರಂಪರಿಕ ದೇವಾಲಯಗಳನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಗೊಳಿಸಲು ಅಗತ್ಯ ಸೌಕರ್ಯ ಹಾಗೂ ಪ್ರಾಚ್ಯಾವಶೇಷಗಳ ಸಂರಕ್ಷಣೆಗಾಗಿ ಬಯಲು ವಸ್ತು ಸಂಗ್ರಹಾಲಯ ಸ್ಥಾಪನೆ.
  • ರೋಣ ತಾಲೂಕಿನ ಕೋಟುಮಚಗಿ ಗ್ರಾಮದಿಂದ ಕೊಪ್ಪಳ ಜಿಲ್ಲೆಯ ವೀರಾಪುರ ಗ್ರಾಮದವರೆಗೆ ಹಿರೇಹಳ್ಳದಲ್ಲಿ ಹೂಳೆತ್ತಲು 60 ಕೋಟಿ ರೂ. ನಿಗದಿ.

ಮೈಸೂರು:

  1. ನಬಾರ್ಡ್ ಸಹಯೋಗದಲ್ಲಿ ರೇಷ್ಮೆ ಗೂಡಿನ ಮಾರುಕಟ್ಟೆ ಸ್ಥಾಪನೆ.
  2. ಜಿಲ್ಲೆಯ ತಗಡೂರು ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ.
  3. ಬುಡಕಟ್ಟು ಸಂಶೋಧನಾ ಕೇಂದ್ರದ ಆವರಣದಲ್ಲು ಬುಡಕಟ್ಟು ವಸ್ತು ಸಂಗ್ರಹಾಲಯ ಸ್ಥಾಪನೆ.
  4. ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಅನುವಾಗುವಂತೆ ಯುಟಿಲಿಟಿ ಶಿಪ್ಪಿಂಗ್ ಗೆ ಅಗತ್ಯ ಕ್ರಮ.
  5. ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿರುವ 2500 ಪ್ರಾಚೀನ ತಾಳೆಗರಿಯ ಹಸ್ತಪ್ರತಿಗಳ ಡಿಜಿಟಲೀಕರಣ ಯೋಜನೆಗೆ 1 ಕೋಟಿ ರೂ.
  6. ರಂಗಾಯಣದ ಕಾರ್ಯಚಟುವಟಿಕೆಗಳಿಗೆ 2 ಕೋಟಿ ರೂ.
  7. ಹಳೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರಾಜ್ಯದ ಸಂಸ್ಕೃತಿ, ನಾಗರಿಕತೆಯ ಉಗಮ, ವಿಕಾಸಗಳು ಸೇರಿದಂತೆ ಐತಿಹಾಸಿಕ, ಸಾಮಾಜಿಕ ಸಂಗತಿಗಳನ್ನು ಬಿಂಬಿಸುವ ರಾಜ್ಯಮಟ್ಟದ ವಸ್ತು ಸಂಗ್ರಹಾಲಯ ಸ್ಥಾಪನೆ.
  8. ಕುಸ್ತಿ, ವಾಲಿಬಾಲ್ ಹಾಗೂ ಖೋಖೋ ಅಕಾಡೆಮಿಗಳ ಸ್ಥಾಪನೆಗೆ 2 ಕೋಟಿ ರೂ.
  9. ಮೈಸೂರು ನಗರ ವ್ಯಾಪ್ತಿಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಹೊಸ ಅಗ್ನಿಶಾಮಕ ಕಟ್ಟಡ ನಿರ್ಮಾಣ.
  10. ಮೈಸೂರಿನ ಬನ್ನಿಮಂಟಪದಲ್ಲಿ 120 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಬಸ್ ನಿಲ್ದಾಣ.

ಮಂಗಳೂರು:

  • ಮೀನುಗಾರಿಕಾ ಕಾಲೇಜಿಗೆ ಪ್ರಸ್ತುತ ನಿಗದಿಪಡಿಸಲಾದ ವಿದ್ಯಾರ್ಥಿಗಳ ಸಂಖ್ಯಾಬಲ ದ್ವಿಗುಣ.
  • ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಈಗಿರುವ 110 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯ ಉನ್ನತೀಕರಣ.
  • ಪಿಲಿಕುಳದ ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಅಂತಾರಾಷ್ಟ್ರೀಯ ಯುವಕರ ತರಬೇತಿ ಕೇಂದ್ರದ ಅಭಿವೃದ್ಧಿಗೆ 2 ಕೋಟಿ.
  • ಅಲ್ಪಸಂಖ್ಯಾತ ವಿದ್ಯಾರ್ಥಿನಿಯರಿಗಾಗಿ ವಸತಿ ಸಹಿತ ಪಿಯು ಕಾಲೇಜು ಸ್ಥಾಪನೆ.
  • ಮಂಗಳೂರಿನಲ್ಲಿ ಜಲಸಾರಿಗೆ ಸಂಗ್ರಹಾಲಯ ಮತ್ತು ಅನುಭವ ಕೇಂದ್ರ ಸ್ಥಾಪನೆ.

ಕೊಪ್ಪಳ:

  1. ಜಿಲ್ಲೆಯ ಬೂದುಗುಂಪಾ ಗ್ರಾಮದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಕೆಕೆಆರ್​ಡಿಬಿ ವತಿಯಿಂದ ಕುರಿ ಮತ್ತು ಮೇಕೆ ಮಾರುಕಟ್ಟೆ ನಿರ್ಮಾಣ.
  2. ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀನದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಲಿಟಿ ಆಸ್ಪತ್ರೆ ಸ್ಥಾಪನೆ.
  3. ತುಂಗಭದ್ರಾ ಜಲಾಶಯದಲ್ಲಿ ನೀರಿನ ಕೊರತೆ ಸರಿದೂಗಿಸಲು ನವಲಿ ಸಮತೋಲನ ಜಲಾಶಯ ನಿರ್ಮಾಣ ಸೇರಿದಂತೆ ಪರ್ಯಾಯ ಮಾರ್ಗಗಳ ಬಗ್ಗೆ ಆಂಧ್ರ ಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳೊಂದಿಗೆ ಚರ್ಚಿಸಿ ನಿರ್ಧಾರ.
  4. ಕುಕನೂರು, ಕಾರಟಗಿ ತಾಲೂಕುಗಳಲ್ಲಿ ತಲಾ 9 ಕೋಟಿ ವೆಚ್ಚದಲ್ಲಿ ಜೆಎಂಎಫ್ ಸಿ ನ್ಯಾಯಾಲಯ ಸ್ಥಾಪನೆ.

ಕಲಬುರಗಿ:

  • ಕೆಕೆಆರ್​ಡಿಬಿ ವತಿಯಿಂದ 50 ಕೋಟಿ ರೂ. ಅನುದಾನದಲ್ಲಿ ನೂತನ ಮೆಗಾಡೈರಿ ಸ್ಥಾಪನೆ.
  • 10 ಕೋಟಿ ರೂ. ವೆಚ್ಚದಲ್ಲಿ ಕೆಕೆಆರ್​ಡಿಬಿ ವತಿಯಿಂದ ಪ್ರಾದೇಶಿಕ ಸಹಕಾರ ಭವನ ನಿರ್ಮಾಣ.
  • ಅಗ್ರಿಟೆಕ್ ಅಕ್ಸಿಲರೇಟರ್ ಸ್ಥಾಪನೆ.

ಚಿಕ್ಕಬಳ್ಳಾಪುರ:

  1. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ಹೈಟೆಕ್ ಹೂವಿನ ಮಾರುಕಟ್ಟೆ ಸ್ಥಾಪನೆ.
  2. ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜು ಸ್ಥಾಪನೆ.
  3. ಶಿಕ್ಷಣ ತಜ್ಞ ಎಚ್ ಎನ್ ನರಸಿಂಹಯ್ಯ ವ್ಯಾಸಂಗ ಮಾಡಿದ ಗೌರಿಬಿದನೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉನ್ನತೀಕರಣ ಹಾಗೂ ಅವರ ಹೆಸರಲ್ಲಿ ಪ್ರಾಧಿಕಾರ ಸ್ಥಾಪನೆ.

ಕೋಲಾರ:

  • ಕೆಜಿಎಫ್​ನಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ರೈತರ ಆಧುನಿಕ ಮಾರುಕಟ್ಟೆ ಸ್ಥಾಪನೆ.
  • ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಲು ತೀರ್ಮಾನ.
  • ಶಿವಾರ ಪಟ್ಟಣದ ಕೈಗಾರಿಕಾ ಪ್ರದೇಶದಲ್ಲಿ ಮಲ್ಟಿ ಸೆಕ್ಟರ್ ನೆಟ್ ಜೀರೊ ಸಸ್ಟೆನೆಬಿಲಿಟಿ ಇಂಡಸ್ಟ್ರಿಯಲ್ ಪಾರ್ಕ್ ಸ್ಥಾಪನೆ.

ತುಮಕೂರು:

  1. 553 ಕೋಟಿ ರೂ. ವೆಚ್ಚದಲ್ಲಿ ಮಧುಗಿರಿ ತಾಲೂಕಿನ 45 ಕೆರೆಗಳು ಹಾಗೂ ಕೊರಟಗೆರೆ ತಾಲೂಕಿನ 62 ಕೆರೆಗಳನ್ನು ತುಂಬಿಸುವ ಮೂಲಕ ಅಂತರ್ಜಲ ಹೆಚ್ಚಿಸುವ ಯೋಜನೆ ಜಾರಿ.
  2. ಮೈಸೂರು: ಮೈಸೂರು ವಿಶ್ವ ವಿದ್ಯಾಲಯದಲ್ಲಿ ಪ್ರೊ. ನಂಜುಂಡಸ್ವಾಮಿ ಸಂಶೋಧನಾ ಪೀಠ ಸ್ಥಾಪನೆ.

ಕೊಡಗು:

  • ಪೊನ್ನಂಪೇಟೆಯಲ್ಲಿ ಹೊಸದಾಗಿ ಸಮುದಾಯ ಆರೋಗ್ಯ ಕೇಂದ್ರ ಸ್ಥಾಪನೆ.
  • ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಸ್ಥಾಪನೆ.
  • 20 ಕೋಟಿ ರೂ. ವೆಚ್ಚದಲ್ಲಿ ಜಿಲ್ಲೆಯ ವಿರಾಜಪೇಟೆ, ಪೊನ್ನಂಪೇಟೆ ಮತ್ತು ಮಡಿಕೇರಿ ತಾಲೂಕುಗಳಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ರಸ್ತೆಗಳ ಪುನರ್ ನಿರ್ಮಾಣ.
  • ಕೂಡಿಗೆ ಕ್ರೀಡಾಶಾಲೆಯ ಸೌಲಭ್ಯಗಳ ಉನ್ನತೀಕರಣಕ್ಕೆ 3 ಕೋಟಿ ರೂ. ನಿಗದಿ.

ಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮೂರಿನಲ್ಲಿ 200 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಸ್ಥಾಪನೆ.

ಬಾಗಲಕೋಟೆ:

  1. ಬಾಗಲಕೋಟೆಯಲ್ಲಿ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾಲಯದ ಘಟಕ ವೈದ್ಯಕೀಯ ಕಾಲೇಜು ಸ್ಥಾಪನೆ.
  2. ಬಾದಾಮಿಯ ಚಾಲುಕ್ಯ ಉತ್ಸವದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ನೃತ್ಯೋತ್ಸವ.
  3. ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ ಕುರಿತಂತೆ ದಾಖಲಾಗಿರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಕ್ಕೆ ಫಾಸ್ಟ್ ಟ್ರಾಕ್ ಕೋರ್ಟ್ ಸ್ಥಾಪನೆ.

ಬೀದರ್ : ಬೀದರಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕ್ಯಾನ್ಸರ್ ಪತ್ತೆ ವಿಭಾಗ ಆರಂಭ.

ರಾಯಚೂರು : ರಾಜೀವ ಗಾಂಧಿ ಸೂಪರ್ ಸ್ಪೆಷಲಿಟಿ ಆಸ್ಪತ್ರೆ ಆವರಣದಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಪೆರಿಫೆರಲ್ ಕ್ಯಾನ್ಸರ್ ಚಿಕಿತ್ಸಾ ಘಟಕ ಸ್ಥಾಪನೆ.

ಬಳ್ಳಾರಿ : ಜಿಲ್ಲೆಯ ಸರ್ಕಾರಿ ಶ್ರವಣ ದೋಷವುಳ್ಳ ಮಕ್ಕಳ ಪ್ರಾಥಮಿಕ ಶಾಲೆಯನ್ನು ಪ್ರೌಢಶಾಲಾ ಹಂತಕ್ಕೆ ಮೇಲ್ದರ್ಜೆಗೆ

ಧಾರವಾಡ:

  • ಜಿಲ್ಲೆಯ ಸರ್ಕಾರಿ ದೃಷ್ಟಿ ದೋಷವುಳ್ಳ ಮಕ್ಕಳ ಪ್ರಾಥಮಿಕ ಶಾಲೆಯನ್ನು ಪ್ರೌಢಶಾಲಾ ಹಂತಕ್ಕೆ ಮೇಲ್ದರ್ಜೆಗೆ
  • ನವಲಗುಂದ ತಾಲೂಕಿನ ಬೆಣ್ಣೆಹಳ್ಳದಲ್ಲಿ ಪ್ರವಾಹ ನಿಯಂತ್ರಿಸಲು 200 ಕೋಟಿ ಅನುದಾನ.

ದಾವಣಗೆರೆ:

  • ಜಿಲ್ಲೆಯಲ್ಲಿರುವ ಬಂಜಾರಾ ಸಮುದಾಯದ ಪ್ರಮುಖ ಧಾರ್ಮಿಕ ಸ್ಥಳವಾದ ಸಂತ ಸೇವಾಲಾಲ್ ಪುಣ್ಯಕ್ಷೇತ್ರ, ಸೂರಗೊಂಡನಕೊಪ್ಪದಲ್ಲಿ ಕ್ರೈಸ್ ವತಿಯಿಂದ ವಸತಿ ಶಾಲೆ ಆರಂಭ.
  • ಕೊಂಡಜ್ಜಿ ಬೆಟ್ಟದ ಪರಿಸರದಲ್ಲಿರುವ ವೃತ್ತಿ ರಂಗಭೂಮಿ ರಂಗಾಯಣದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಮೂಲಭೂತ ಸೌಕರ್ಯ, ರಂಗಾಯಣ ಸಮುಚ್ಚಯ, ಥಿಯೇಟರ್ ಮ್ಯೂಸಿಯಂ ನಿರ್ಮಾಣ.

ಯಾದಗಿರಿ: ಶಹಾಪುರದಲ್ಲಿ 10 ಕೋಟಿ ರೂ. ವೆಚ್ಚದ ಕ್ರೀಡಾ ವಸತಿ ಶಾಲೆ ನಿರ್ಮಾಣ.

ಚಾಮರಾಜನಗರ : ಜಿಲ್ಲೆಯಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಒಲಿಂಪಿಕ್ಸ್ ಮಾದರಿಯ 50 ಮೀಟರ್ ಈಜುಕೊಳ ನಿರ್ಮಾಣ

ಶಿವಮೊಗ್ಗ :

  • ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ 20 ಚದರ ಕಿಮೀ ವ್ಯಾಪ್ತಿಯಲ್ಲಿ ಕಾಡಾನೆ ಸಾಫ್ಟ್ ರಿಲೀಸ್ ಕೇಂದ್ರ ಸ್ಥಾಪನೆಗೆ 20 ಕೋಟಿ ರೂ.
  • ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮವನ್ನು ಧಾರ್ಮಿಕ ಹಾಗೂ ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸಲು ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರ ರಚನೆ.

Leave a Reply

Your email address will not be published. Required fields are marked *