ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮಕ್ಕಳ ಭಾವನಾತ್ಮಕ ಸಂಭಂದ ಬೆಸೆಯಲು ಯೋಗ ಕಲಿಕೆ ಅವಶ್ಯಕವಾಗಿದೆ._ವಿನೋದಮ್ಮ ಆರ್. ಅಂಗನವಾಡಿ ಕಾರ್ಯಕರ್ತೆಯರ ಮೇಲ್ವಿಚಾರಕರು.

ಚಿತ್ರದುರ್ಗ: ಅಂಗನವಾಡಿ ಕಾರ್ಯಕರ್ತರು ಯೋಗವನ್ನು ಕಲಿಯುವುದು ಮತ್ತು ಅದನ್ನು ಮಕ್ಕಳಿಗೆ ಕಲಿಸುವುದು ಬಹಳ ಮುಖ್ಯ.ಅಂಗನವಾಡಿ ಕಾರ್ಯಕರ್ತರು ಯೋಗವನ್ನು ಕಲಿತರೆ, ಅವರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಇದು ಅವರಿಗೆ ದೈಹಿಕ ಮತ್ತು ಮಾನಸಿಕ ಶಕ್ತಿಯನ್ನು ನೀಡುತ್ತದೆ, ಇದರಿಂದ ಅವರು ಮಕ್ಕಳಿಗೆ ಉತ್ತಮವಾಗಿ ಸೇವೆ ಸಲ್ಲಿಸಬಹುದು ಎಂದು ಭರಮಸಾಗರ ಶಿಶು ಅಭಿವೃದ್ಧಿ ಯೋಜನಾ ಘಟಕದ ಅಂಗನವಾಡಿ ಕಾರ್ಯಕರ್ತೆಯರ ಮೇಲ್ವಿಚಾರಕಿ ಶ್ರೀಮತಿ ವಿನೋದಮ್ಮ ಆರ್. ಅಭಿಪ್ರಾಯ ಪಟ್ಟಿದ್ದಾರೆ.
ಚಿತ್ರದುರ್ಗ ತಾಲ್ಲೂಕು ಹಿರೇಗುಂಟನೂರು ಗ್ರಾಮದಲ್ಲಿ ನಡೆದ ಅಂಗನವಾಡಿ ಸಹಾಯಕ ಕಾರ್ಯಕರ್ತೆಯರ ಸಭೆ ಮತ್ತು ಯೋಗ ತರಬೇತಿ ಕುರಿತು ಅವರು ಮಾತನಾಡುತ್ತಾ ಮಕ್ಕಳು ಮತ್ತು ಅಂಗನವಾಡಿ ಕಾರ್ಯಕರ್ತೆಯರ ನಡುವೆ ಯೋಗವು ಭಾವನಾತ್ಮಕ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಇದು ಅವರಿಗೆ ಶಾಂತ ಮತ್ತು ಸಂಯಮದಿಂದ ಇರಲು ಕಲಿಸುತ್ತದೆ ಮತ್ತು ಇತರರೊಂದಿಗೆ ಉತ್ತಮವಾಗಿ ಬೆರೆಯಲು ಸಹಾಯ ಮಾಡುತ್ತದೆ ತಿಳಿಸಿದರು.
ಇದೇ ಸಭೆಯಲ್ಲಿ ಹಿರೇಗುಂಟನೂರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಯೋಗ ತರಬೇತುದಾರ ರವಿ ಕೆ.ಅಂಬೇಕರ್ ಅಂಗನವಾಡಿ ಸಹಾಯಕಿಯರಿಗೆ ಪ್ರಮುಖ ಯೋಗ ಪ್ರಕಾರಗಳನ್ನು ಅಭ್ಯಾಸ ಮಾಡಿಸಿದರು ಸಭೆಯಲ್ಲಿ ಭರಮಸಾಗರ ಕಾರ್ಯವ್ಯಾಪ್ತಿಯ 50ಕ್ಕೂ ಹೆಚ್ಚು ಮಹಿಳೆಯರು ಯೋಗ ತರಬೇತಿ ಪಡೆದರು.