
ಚಿತ್ರದುರ್ಗ,(ಜ.21) : ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 10 ಸಂಖ್ಯೆಗಳ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ 11 ಕೆವಿ ಮಾರ್ಗಗಳ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿರುವುದರಿಂದ ದಿನಾಂಕ 22/01/2023 ರಂದು ಬೆಳಗ್ಗೆ 10.00 ರಿಂದ ಸಂಜೆ 4:00 ಗಂಟೆಯವರೆಗೆ ಈ ಕೆಳಕಂಡ ಊರುಗಳಲ್ಲಿ ವಿದ್ಯುತ್ ವ್ಯತ್ಯಾಯವಾಗಲಿದೆ.
ವಿದ್ಯುತ್ ವ್ಯತ್ಯಾಯವಾಗಲಿರುವ ಪ್ರದೇಶಗಳು :
ಸಂಪೂರ್ಣವಾಗಿ ಚಿತ್ರದುರ್ಗ ನಗರ ಪ್ರದೇಶದಲ್ಲಿ, ಹೊಳಲ್ಕೆರೆ ಪಟ್ಟಣ ಮತ್ತು ಸುತ್ತಮುತ್ತಲಿನ ಹಳ್ಳಿಗಳು, ಹಿರೇಗುಂಟನೂರು, ಬಾಲೇನಹಳ್ಳಿ, ಭರಮಸಾಗರ, ಸಿರಿಗೆರೆ, ವಿಜಾಪುರ, ಪಂಡರಹಳ್ಳಿ, ಹೆಚ್.ಟಿ ಪುರ, ಚಿತ್ರಹಳ್ಳಿ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ಅಡಚಣೆಯಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The post ಚಿತ್ರದುರ್ಗ ಮತ್ತು ಹೊಳಲ್ಕೆರೆಯ ಸಾರ್ವಜನಿಕರ ಗಮನಕ್ಕೆ : ಜನವರಿ 22 ರಂದು ಈ ಊರುಗಳಲ್ಲಿ ವಿದ್ಯುತ್ ವ್ಯತ್ಯಯ first appeared on Kannada News | suddione.
from ಚಿತ್ರದುರ್ಗ – Kannada News | suddione https://ift.tt/Ugt9VTu
via IFTTT