ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಏ. ೫ ಭ್ರಷ್ಟ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ವಿರುದ್ದ ಬಿಜೆಪಿ ಜಿಲ್ಲಾ ಘಟಕದವತಿಯಿಂದ ಇಂದು ನಗರದಲ್ಲಿ ಪ್ರತಿಭಟನೆಯನ್ನು ಓನಕೆ ಒಬವ್ವ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿತ್ತು.

ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಓಬವ್ವ ವೃತ್ತದ ವರೆಗೆ ಆಗಮಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನ
ಕೂಗಿ ತಮ್ಮ ಆಕ್ರೋಷವನ್ನ ಹೊರ ಹಾಕಿದ್ದಾರೆ. ಅಷ್ಟೇ ಅಲ್ಲದೆ ರಾಜ್ಯ ಸರ್ಕಾರದ ವಿರುದ್ಧದ ಬಿತ್ತಿ ಪತ್ರಗಳನ್ನ ಕೈನಲ್ಲಿ ಹಿಡಿದ
ಪ್ರತಿಭಟನಾಕಾರರು ತಮ್ಮ ಆಕ್ರೋಷವನ್ನ ಹೊರ ಹಾಕಿದ್ದು ಈ ಕೂಡಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಹಾಗೂ ಬೆಲೆ
ಇಳಿಸುವ ಮೂಲಕ ಸಾರ್ವಜನಿಕರಿಗೆ ಬೆಲೆ ಏರಿಕೆ ಬಿಸಿಯನ್ನ ತಪ್ಪಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ
ಮಾಡುವುದಾಗಿ ಪ್ರತಿಭಟನೆ ಮೂಲಕ ಎಚ್ಚರಿಕೆಯನ್ನ ನೀಡಿದ್ದಾರೆ.

ಇದರಲ್ಲಿ ಭಾಗವಹಿಸಿದ್ದ ಮಾಜಿ ಸಚಿವರಾದ ಹರೀಶ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬಂದಾಗಿನಿಂದ ಬೆಲೆ ಏರಿಕೆ
ನಿರಂತರವಾಗಿದೆ. ಪೆಟ್ರೋಲ್ ಡೀಸೆಲ್, ಸ್ಟಾಂಪ್ ಶುಲ್ಕ, ಹಾಲಿನ ದರ, ಮೆಟ್ರೋದರ ನೀರಿನ ತೆರಿಗೆ ವಿದ್ಯುತ್ ದರ ಬಸ್
ಪ್ರಯಾಣ ದರ ಹೆಚ್ಚಳ ಮಾಡಿ ಬಡವರಿಗೆ ಬರೆ ಎಳೆಯುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ಸರ್ಕಾರವಾಗಿದೆ ಎಂದರು.
ಬೆಲೆ- ತೆರಿಗೆ ಹೆಚ್ಚಳದ ಮೂಲಕ ಬಡವರಿಗೆ ಬರೆ ಎಳೆಯುವ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟ-
ಪ್ರತಿಭಟನೆ ನಡೆಸಲಿದೆ. ರಾಜ್ಯ ಸರಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವ ಕೆಲಸವನ್ನು ಹೋರಾಟದ ಮುಖೇನ ಮಾಡಲು
ಬಿಜೆಪಿ ಮಾಡಲಿದೆ. ಇದು ಶೂನ್ಯ ಅಭಿವೃದ್ಧಿ ಮತ್ತು ಹಗರಣಗಳ ಸರಕಾರ. ಸರಕಾರದ ಹಗರಣ, ಜನವಿರೋಧಿ ನೀತಿ ವಿರುದ್ಧ
ಬಿಜೆಪಿ ನಿರಂತರವಾಗಿ ಹೋರಾಟ ಮಾಡುತ್ತಿದ್ದು, ಜನಪರ ವಿಪಕ್ಷವಾಗಿ ತನ್ನ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಇದರಲ್ಲಿ ಭಾಗವಹಿಸಿದ್ದ ಮಾಜಿ ಸಚಿವರಾದ ಮಹೇಶ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬಂದಾಗಿನಿಂದ ಬೆಲೆ ಏರಿಕೆ
ನಿರಂತರವಾಗಿದೆ. ಪೆಟ್ರೋಲ್ ಡೀಸೆಲ್, ಸ್ಟಾಂಪ್ ಶುಲ್ಕ, ಹಾಲಿನ ದರ, ಮೆಟ್ರೋದರ ನೀರಿನ ತೆರಿಗೆ ವಿದ್ಯುತ್ ದರ ಬಸ್
ಪ್ರಯಾಣ ದರ ಹೆಚ್ಚಳ ಮಾಡಿ ಬಡವರಿಗೆ ಬರೆ ಎಳೆಯುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ಸರ್ಕಾರವಾಗಿದೆ ಎಂದರು.
ಬೆಲೆ- ತೆರಿಗೆ ಹೆಚ್ಚಳದ ಮೂಲಕ ಬಡವರಿಗೆ ಬರೆ ಎಳೆಯುವ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟ-
ಪ್ರತಿಭಟನೆ ನಡೆಸಲಿದೆ. ರಾಜ್ಯ ಸರಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವ ಕೆಲಸವನ್ನು ಹೋರಾಟದ ಮುಖೇನ ಮಾಡಲು
ಬಿಜೆಪಿ ಮಾಡಲಿದೆ. ಇದು ಶೂನ್ಯ ಅಭಿವೃದ್ಧಿ ಮತ್ತು ಹಗರಣಗಳ ಸರಕಾರ. ಸರಕಾರದ ಹಗರಣ, ಜನವಿರೋಧಿ ನೀತಿ ವಿರುದ್ಧ
ಬಿಜೆಪಿ ನಿರಂತರವಾಗಿ ಹೋರಾಟ ಮಾಡುತ್ತಿದ್ದು, ಜನಪರ ವಿಪಕ್ಷವಾಗಿ ತನ್ನ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ಮಾಜಿ ಉಪ ಮುಖ್ಯಮಂತ್ರಿಗಳು, ಸಂಸದರಾದ ಗೋವಿಂದ ಕಾರಜೋಳ ಮಾತನಾಡಿ, ರಾಜ್ಯ ಬಜೆಟ್ನಲ್ಲಿ ಅಲ್ಪಸಂಖ್ಯಾತರಿಗೆ,
ಮುಸಲ್ಮಾನರಿಗೆ ಓಲೈಕೆ ಮಾತ್ರವಲ್ಲದೆ ಹಿಂದೂಗಳಿಗೆ ಅಪಮಾನ ಮಾಡಲಾಗಿದೆ. ಸರಕಾರಿ ಕಾಮಗಾರಿಗಳಲ್ಲಿ ಮುಸಲ್ಮಾನರಿಗೆ ಶೇ
೪ ಮೀಸಲಾತಿ ನೀಡಿದ್ದು, ಕಾನೂನಿನ ವಿರುದ್ಧವಾಗಿದೆ. ಉನ್ನತ ಶಿಕ್ಷಣಕ್ಕೆ ಹೊರದೇಶಕ್ಕೆ ಹೋಗುವ ಮುಸಲ್ಮಾನ ವಿದ್ಯಾರ್ಥಿಗಳಿಗೆ
೨೦ ಲಕ್ಷ ಇದ್ದುದನ್ನು ೩೦ ಲಕ್ಷಕ್ಕೆ ಏರಿಸಿದ್ದಾರೆ.ಹಿಂದೆ ಮುಸಲ್ಮಾನ ಹೆಣ್ಮಕ್ಕಳಿಗೆ ಶಾದಿ ಭಾಗ್ಯ ನೀಡಿದ್ದರು. ಇದೀಗ ಮುಸ್ಲಿಂ
ಹೆಣ್ಮಕ್ಕಳ ಆತ್ಮರಕ್ಷಣೆಗೆ ನೂರಾರು ಕೋಟಿಯನ್ನು ರಾಜ್ಯ ಸರಕಾರ ವೆಚ್ಚ ಮಾಡುತ್ತಿದೆ; ಇಮಾಮರ ವೇತನ ಹೆಚ್ಚಿಸಿದ್ದಾರೆ. ಒಂದು
ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚುವ ಸರಕಾರ ಇದಾಗಿದೆ ಎಂದು ದೂರಿದ್ದಾರೆ.

ಕೇವಲ ಮುಸ್ಲಿಮರಿಗೆ ಮಾತ್ರ ಇಂಥ ಯೋಜನೆಗಳು ಏಕೆ? ಮೋದಿಜೀ ಅವರು ಜನಧನ ಸೇರಿ ಹಲವು ಯೋಜನೆ
ಜಾರಿಗೊಳಿಸಿದ್ದು, ಎಲ್ಲರಿಗೂ ಅವಕಾಶ ನೀಡಿದ್ದಾರೆ. ಯಡಿಯೂರಪ್ಪ ಅವರು ಭಾಗ್ಯಲಕ್ಷ್ಮಿ ಯೋಜನೆಯನ್ನು ಹಿಂದೂಗಳಿಗೆ ಮಾತ್ರ
ಕೊಟ್ಟಿಲ್ಲ; ಮುಸ್ಲಿಮರು ಸೇರಿ ಎಲ್ಲರಿಗೂ ಕೊಟ್ಟಿದ್ದರು. ಹಿಂದೂಗಳ ಅವಮಾನವನ್ನು ನಾವು ಖಂಡಿಸುತ್ತೇವೆ. ಸಿದ್ದರಾಮಯ್ಯನವರು
ಹಾಲುಮತ ಸಮುದಾಯ, ಕಾಯಕ ಸಮುದಾಯಗಳ ನಿರ್ಲಕ್ಷಿಸಿದ್ದಾರೆ. ಪರಿಶಿಷ್ಟ ಜಾತಿ, ಪಂಗಡಗಳನ್ನು ಮತಬ್ಯಾಂಕ್
ಮಾಡಿಕೊಂಡ ಕಾಂಗ್ರೆಸ್ಸಿನವರು ಅವರಿಗೆ ಅನ್ಯಾಯ ಮಾಡುತ್ತಿದೆ. ಇದರ ವಿರುದ್ಧ ಹೋರಾಟ ಮಾಡಲಾಗುತ್ತದೆ ಎಂದು
ತಿಳಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಮಾತನಾಡಿ, ಶೋಷಿತರು, ಪೀಡಿತರ ಅಭಿವೃದ್ಧಿಗೆ ಮೀಸಲಿಟ್ಟ ಎಸ್ಇಪಿ,
ಟಿಎಸ್ಪಿ ಅನುದಾನದಲ್ಲಿ ಕಾಂಗ್ರೆಸ್ ಸರಕಾರವು ೨೦೨೩-೨೪ರಲ್ಲಿ ೧೧,೧೪೪ ಕೋಟಿಯನ್ನು ಬೇರೆಡೆಗೆ ವರ್ಗಾಯಿಸಿದ್ದಾರೆ.
೨೦೨೪-೨೫ರಲ್ಲಿ ೧೪,೨೮೨ ಕೋಟಿ ಹಣ ಬೇರೆ ಕಡೆಗೆ ವರ್ಗಾಯಿಸಿದ್ದಾರೆ. ೨೦೨೫-೨೬ರಲ್ಲಿ ಇದು ೧೩,೪೩೩ ಕೋಟಿ.
ಒಟ್ಟಾರೆಯಾಗಿ ಕಾಂಗ್ರೆಸ್ ಸರಕಾರವು ೩೮,೮೬೦ ಕೋಟಿಯಷ್ಟು ಹಣವನ್ನು ಬೇರೆ ಕಡೆ ವರ್ಗಾಯಿಸಿ, ದುರುಪಯೋಗ
ಮಾಡಿಕೊಂಡಿದೆ. ಇದು ಖಂಡನಾರ್ಹ. ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಬೆಲೆ ಏರಿಕೆ
ನಿರಂತರವಾಗಿದೆ. ಪೆಟ್ರೋಲ್, ಡೀಸೆಲ್, ಸ್ಟಾಂಪ್ ಶುಲ್ಕ, ಹಾಲಿನ ದರ, ಮೆಟ್ರೊ ದರ ಏರಿಸುವ ಮೂಲಕ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರವು ಜನಸಾಮಾನ್ಯರ ಮೇಲೆ ಬರೆ ಹಾಕುತ್ತಿದೆ.
ದೇಶದಲ್ಲೇ ಅತ್ಯಂತ ದುಬಾರಿ ಜೀವನವನ್ನು ಈ ನಾಡಿನ ಜನ ನಡೆಸಬೇಕಾದ ದುಸ್ಥಿತಿಗೆ ಕಾಂಗ್ರೆಸ್ ಕಾರಣವಾಗಿದೆ. ಸೇವಿಸುವ ಗಾಳಿಯೊಂದನ್ನು ಬಿಟ್ಟರೆ ಉಳಿದೆಲ್ಲವುಗಳ ದರ ಏರಿಸಲಾಗಿದೆ. ಸಾಮಾನ್ಯ ಜನರು, ರೈತರ ಸಂಕಷ್ಟ ಅರ್ಥ ಮಾಡಿಕೊಳ್ಳದ ಸರಕಾರ ಇದು. ಮತದಾರರಿಗೆ ಶಾಪಗ್ರಸ್ತ ಸರಕಾರ ಇದಾಗಿದೆ ಎಂದಿದ್ದಾರೆ. ಶಾಸಕರಾದ ಎಂ.ಚಂದ್ರಪ್ಪ ಮಾತನಾಡಿ, ವಿದ್ಯುತ್ ದರ ಪ್ರತಿ ಯೂನಿಟ್ಗೆ ೩೬ ಪೈಸೆ ಹೆಚ್ಚಲಿದೆ. ಹಾಲಿನ ದರ ೩ ಬಾರಿ ಏರಿಸಿದ್ದಾರೆ. ಹಾಲಿನ ದರ ಒಟ್ಟು ೯ ರೂ. ಹೆಚ್ಚಾಗಿದೆ.ಬಡವರ ವೈದ್ಯಕೀಯ ವೆಚ್ಚ ಹೆಚ್ಚಾಗಿದೆ. ಹೊರ ರೋಗಿ ನೋಂದಣಿ ಶುಲ್ಕ ೧೦ ರೂ ಇದ್ದುದನ್ನು ರೂ. ೨೦ಕ್ಕೆ ಏರಿಸಿದ್ದಾರೆ. ಮರಣೋತ್ತರ ಪ್ರಮಾಣಪತ್ರವನ್ನು ೨೫೦ ಇದ್ದುದನ್ನು ೩೦೦ ರೂ.
ಹೆಚ್ಚಿಸಿದ್ದಾರೆ. ವೈದ್ಯಕೀಯ ಪ್ರಮಾಣಪತ್ರವನ್ನು ೨೫೦ ಇದ್ದುದನ್ನು ೩೦೦ ರೂ. ಹೆಚ್ಚಿಸಿದ್ದಾರೆ. ದಾಖಲಾತಿ ಶುಲ್ಕ, ಲ್ಯಾಬ್
ಪರೀಕ್ಷಾ ಶುಲ್ಕ ಹೆಚ್ಚಿಸಿದ್ದಾರೆ.
ಗ್ರಾಮೀಣ ಭಾಗದಲ್ಲಿ ಸರಕಾರಿ ಆಸ್ಪತ್ರೆಗೆ ಹೋಗುವ ಬಡವರು ಹೆಚ್ಚುವರಿ ಶುಲ್ಕ ಕೊಡಬೇಕಾಗಿದೆ.ಮುದ್ರಾಂಕ ಶುಲ್ಕದಡಿ ದತ್ತು ಸ್ವೀಕಾರ ಶುಲ್ಕ ೫೦೦ ರೂ. ಇತ್ತು. ಅದನ್ನು ೧ ಸಾವಿರ ರೂ. ಮಾಡಿದ್ದಾರೆ. ಅಫಿಡವಿಟ್ಗಳ ಮೊತ್ತವನ್ನು ೨೦ ರೂ. ಇದ್ದುದು ೧೦೦ ರೂಗೆ ಏರಿಸಿದ್ದಾರೆ. ಕ್ಯಾನ್ಸಲೇಶನ್ ಡೀಡ್ ೧೦೦ ರೂ. ಇದ್ದುದನ್ನು ೫೦೦ಕ್ಕೆ ಏರಿಸಿದ್ದಾರೆ. ಅಡಮಾನ ಪತ್ರ ಶುಲ್ಕವನ್ನು ರೂ. ೧೦೦ರಿಂದ ೨೦೦ಕ್ಕೆ ಏರಿಸಿದ್ದಾರೆ. ವೃತ್ತಪರ ತೆರಿಗೆ ೧೨೦೦ ರೂ. ಇದ್ದುದನ್ನು ೨೫೦೦ ರೂ.ಗೆ ಏರಿಸಿದ್ದಾರೆ. ಮುದ್ರಾಂಕ ಶುಲ್ಕ ಜಾಸ್ತಿ ಮಾಡಿದ್ದಾರೆ. ಬಸ್ ಪ್ರಯಾಣದರ ಹೆಚ್ಚಿಸಿದ್ದಾರೆ. ರೈತರಿಗೆ ತೊಂದರೆ ಕೊಡಲೆಂದೇ ಬಿತ್ತನೆ ಬೀಜದ ದರ ಹೆಚ್ಚಿಸಿದ್ದಾರೆ. ನೀರಿನ ಸುಂಕ ಜಾಸ್ತಿ ಮಾಡಿದ್ದಾರೆ. ಪೆಟ್ರೋಲ್- ಡೀಸೆಲ್ ದರ ಏರಿಕೆಯಾಗಿದೆ. ಮತದಾರರಿಗೆ ಬೆಲೆ ಏರಿಕೆಯ ಮೂಲಕ ಶಾಪವನ್ನು ಈ ಸರಕಾರ ನೀಡಿದೆ ಎಂದು ದೂರಿದ್ದಾರೆ.
ಈ ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಎ.ಮುರಳಿ ಮಾಜಿ ಸಂಸದರಾದ ಮುನಿಸ್ವಾಮಿ, ಎಸ್.ಕೆ.ಬಸವರಾಜನ್, ಬಿಜೆಪಿ
ಮುಖಂಡರಾದ ಎಸ್.ಲಿಂಗಮೂರ್ತಿ, ಎನ್.ಆರ್.ಲಕ್ಷ್ಮೀಕಾಂತ ಕೆ.ಟಿ.ಕುಮಾರಸ್ವಾಮಿ, ಡಾ.ಸಿದ್ದಾರ್ತ ಗುಡಾರ್ಪಿ, ರಾಜ್ಯ ರೈತ
ಮೋರ್ಚಾದ ಕಾರ್ಯದರ್ಶಿ ಮಲ್ಲಿಕಾರ್ಜನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್, ರಾಮದಾಸ್, ನಗರಾಧ್ಯಕ್ಷ
ಲೋಕೇಶ್, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ಮೊಳಕಾಲ್ಮೂರು ಅಧ್ಯಕ್ಷ ಶ್ರೀರಾಮರೆಡ್ಡಿ, ನಾಯಕನಹಟ್ಟಿ ಮಂಡಲ ಅಧ್ಯಕ್ಷ
ಮಲ್ಲೇಶ್, ಹಿರಿಯೂರು ಅಧ್ಯಕ್ಷ ಅಭಿನಂದನ್, ಚಳ್ಳಕೆರೆ ಅಧ್ಯಕ್ಷ ಸುರೇಶ್, ಹೊಸದುರ್ಗ ಅಧ್ಯಕ್ಷ ಜಗದೀಶ್, ರಾಜ್ಯ ಯುವ
ಮೋರ್ಚಾದ ಕಾರ್ಯದರ್ಶಿ ಭಾರ್ಗವಿ ದ್ರಾವಿಡ್, ವಕ್ತಾರರಾದ ನಾಗರಾಜ್ ಬೇದ್ರೇ, ದಗ್ಗೆ ಶಿವಪ್ರಕಾಶ್, ರಾಜ್ಯ ಮಹಿಳಾ
ಮೋರ್ಚಾದ ಸದಸ್ಯರಾದ ಶ್ರೀಮತಿ ಶ್ಯಾಮಲ ಶಿವಪ್ರಕಾಶ್, ಚಂದ್ರು, ಪಾಲಯ್ಯ, ಜಯಪಾಲಯ್ಯ ಸೇರಿದಂತೆ ಇತರರು
ಭಾಗವಹಿಸಿದ್ದರು. ಸೇರಿದಂತೆ ಬಿಜೆಪಿಯ ಎಲ್ಲಾ ಮಂಡಲ ಹಾಗೂ ಜಿಲ್ಲಾ ಪದಾಧಿಕಾರಿಗಳು ಕಾರ್ಯಕರ್ತರು, ಭಾಗವಹಿಸಲಿದ್ದಾರೆ ಎಂದು
ಜಿಲ್ಲಾಧ್ಯಕ್ಷರಾದ ಮುರಳಿ ತಿಳಿಸಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1