Second PUC Result 2025: ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಗಿದಿವೆ. ಇನ್ನೂ ಫಲಿತಾಂಶಗ ಹೊರಬೀಳುವುದೊಂದೇ ಬಾಕಿ. ಇದೀಗ ಆ ಸಮಯ ಬಂದೇ ಬಿಟ್ಟಿದೆ. ಇಂದೇ (ಏಪ್ರಿಲ್ 8) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಹಾಗಾದ್ರೆ, ರಿಸಲ್ಟ್ ಎಷ್ಟು ಗಂಟೆಗೆ ಪ್ರಕಟ? ಹಾಗೂ ವೀಕ್ಷಣೆ ಮಾಡುವುದು ಹೇಗೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು, (ಏಪ್ರಿಲ್ 08): ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾತರಿಂದ ಕಾಯುತ್ತಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ( 2nd PUC Students) ಗುಡ್ನ್ಯೂಸ್ ಸಿಕ್ಕಿದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (Karnataka 2nd PUC Exam 2025 Result ) ಇಂದು ಅಂದರೆ ಏಪ್ರಿಲ್ 08ರಂದು ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ಅಂದೆ ಮಧ್ಯಾಹ್ನ 1.30ಕ್ಕೆ ವೆಬ್ಸೈಟ್ನಲ್ಲಿ PUC ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಇದ್ದಲ್ಲೇ ಆನ್ಲೈನ್ನಲ್ಲಿ ಫಲಿತಾಂಶ ವೀಕ್ಷಣೆ ಮಾಡಬಹುದಾಗಿದೆ. ಇನ್ನು ವೀಕ್ಷಣೆ ಮಾಡುವುದು ಹೇಗೆ ಎನ್ನುವುದು ಈ ಕೆಳಗಿನಂತಿದೆ ನೋಡಿ.

ರಿಸಲ್ಟ್ ನೋಡುವುದು ಎಲ್ಲಿ?
ಪತ್ರಿಕಾಗೋಷ್ಠಿ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ. ಆ ನಂತರ ಅಂದರೆ 1:30ರ ನಂತರ ಆನ್ಲೈನ್ ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಜತೆಗೆ, ಅಂಕಪಟ್ಟಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಈ ಎರಡು ವೆಬ್ಸೈಟ್ಗಳಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಲಭ್ಯವಿರಲಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1